ಹೊಳೆನರಸೀಪುರ,ಜ.14- ಕೆಲವರು ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಆದರೂ ನನ್ನನ್ನು ಯಾರು ಏನು ಮಾಡಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತೊಡೆ ತಟ್ಟಿದ್ದಾರೆ.
ತಾಲೂಕಿನ ಶ್ರವಣೂರಿನಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ನ ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬಿಜೆಪಿಯವರಿಗೆ ನನ್ನನ್ನು ಕಂಡರೆ ಭಯ. ಹೀಗಾಗಿ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ.
ಮದ್ಯ ಖರೀದಿ ವಯೋಮಿತಿ 21ರಿಂದ 18ಕ್ಕಿಳಿಸಲು ಮುಂದಾದ ಸರ್ಕಾರ
ನನ್ನ ವಿರುದ್ಧ ಕೆಲವರಿಂದ ಪುಸ್ತಕ ಬರೆಸಲು ಮುಂದಾಗಿದ್ದಾರೆ. ಅವರು ನನ್ನ ವಿರುದ್ಧ ಮುಗಿಬಿದ್ದಷ್ಟು ನಾನು ಮತ್ತಷ್ಟು ಗಟ್ಟಿಯಾಗುತ್ತೇನೆ ಎಂದು ಅವರು ಹೇಳಿದರು.ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ಅವರ ಮೇಲೆ ಅಭಿಮಾನಿಗಳೂ ಹೂಮಳೆಗರೆದರು.
ಕಾಗಿನೆಲೆ ಮಹಾಸಂಸ್ಥಾನ ಮಠದ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ದಿವ್ಯ ಸಾನಿಧ್ಯವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಶ್ರೀ ಶಿವಾನಂದಪುರಿ ಶ್ರೀಗಳು ಭಾಗವಹಿಸಿದ್ದರು. ಸ್ಥಳೀಯ ಮುಖಂಡ ಸುರೇಶ್ ಸಿ.ಟಿ ಮತ್ತಿತರರು ಪಾಲ್ಗೊಂಡಿದ್ದರು.
#Siddaramaiah, #AssemblyElection2023, #Congress,