ಬೆಂಗಳೂರು, ಜ.9- ಬಿಜೆಪಿ ಸರ್ಕಾರಕ್ಕೆ ಮೇಕೆದಾಟು ಯೋಜನೆ ಜಾರಿಯಾಗುವುದು ಬೇಕಿಲ್ಲ, ಅದಕ್ಕಾಗಿ ತಮಿಳುನಾಡಿನ ಜೊತೆ ಸೇರಿ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ವಿಧಾನ ಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.
ಕನಕಪುರ ತಾಲ್ಲೂಕಿನ ಸಂಗಮದಿಂದ ಆರಂಭವಾದ ಕಾಂಗ್ರೆಸ್ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ 2017ರಲ್ಲಿ ಮೊದಲ ಬಾರಿಗೆ ಐದು ಸಾವಿರ ಕೋಟಿ ವೆಚ್ಚದ ವಿಸ್ತೃತ ಯೋಜನಾ ವರದಿ ತಯಾರಿಸಿ ಕೇಂದ್ರ ಜಲಶಕ್ತಿ ಅಯೋಗಕ್ಕೆ ಸಲ್ಲಿಸಲಾಗಿತ್ತು.
ಕೇಂದ್ರ ಸರ್ಕಾರ ಕೆಲ ಸ್ಪಷ್ಟನೆಗಳನ್ನು ಕೇಳಿತ್ತು. 2019ರ ಜನವರಿಯಲ್ಲಿ ಎಲ್ಲ ಆಕ್ಷೇಪಣೆಗಳಿಗೆ ಉತ್ತರ ಕೊಟ್ಟು ಸುಮಾರು9 ಸಾವಿರ ಕೋಟಿ ರೂ.ವೆಚ್ಚದ ಪರಿಷ್ಕøತ ವರದಿಯನ್ನು ಸಲ್ಲಿಸಲಾಗಿದೆ. ನಮ್ಮ ಅವಯಲ್ಲಿ ಎಲ್ಲಿಯೂ ವಿಳಂಬವಾಗಿಲ್ಲ. ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಜನರಿಗೆ ತಪ್ಪು ಮಾಹಿತಿ ನೀಡಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಕಾವೇರಿ ನೀರಿನ ವಿವಾದ ನ್ಯಾಯಾೀಕರಣ ಮತ್ತು ಸುಪ್ರೀಂಕೋರ್ಟ್‍ನಲ್ಲಿ ಇತ್ಯರ್ಥವಾಗಿದೆ. ತಮಿಳುನಾಡಿನ ತಗಾದೆ ಹೊರತಾಗಿಯು ಸುಪ್ರೀಂಕೋರ್ಟ್ ಯಾವುದೇ ತಡೆಯಾe್ಞÉ ನೀಡಿಲ್ಲ ಎಂದರು.
ಮೇಕೆದಾಟು ನಮ್ಮ ಕೂಸು. ಬಿಜೆಪಿ ಸರ್ಕಾರ ಕೇಂದ್ರದ ಮೇಲೆ ಒತ್ತಡ ತಂದು ಅರಣ್ಯ ಇಲಾಖೆ ಅನುಮತಿ ಪಡೆದು ಅಣೆಕಟ್ಟು ನಿರ್ಮಾಣ ಕಾಮಗಾರಿ ಆರಂಭಿಸಲು ಎರಡು ವರ್ಷದಿಂದಲೂ ಡಬಲ್ ಇಂಜಿನ್ ಸರ್ಕಾರಕ್ಕೆ ಸಾಧ್ಯವಾಗಿಲ್ಲ. 25 ಮಂದಿ ಸಂಸದರನ್ನು ಇಟ್ಟುಕೊಂಡು ಒಂದು ಯೋಜನೆ ಆರಂಭಿಸಲಾಗದಿದ್ದಕ್ಕೆ ಬಿಜೆಪಿಯವರಿಗೆ ನಾಚಿಕೆಯಾಗಬೇಕು ಎಂದರು.
ಕಾವೇರಿ ನದಿ ಪಾತ್ರದಲ್ಲಿ ನಾಲು ್ಕಅಣೆಕಟ್ಟೆಗಳಿಂದ 114 ಟಿಎಂಸಿ ನೀರು ಸಂಗ್ರಹವಾಗುತ್ತಿದೆ. ಮಾರ್ಚ್, ಏಪ್ರಿಲï, ಮೇನಲ್ಲಿ ನೀರು ಇರುವುದಿಲ್ಲ. ಆಗ ತಮಿಳುನಾಡಿಗೆ ನೀರು ಬಿಡಲು ಕಷ್ಟವಾಗುತ್ತದೆ. ನಮ್ಮ ಜನರಿಗೆ ನೀರು ಇರಲ್ಲ. ತಮಿಳುನಾಡಿಗೆ ಮೇಕೆದಾಟು ಅಣೆಕಟ್ಟೆಯಿಂದ ಅನುಕೂಲವಾಗಲಿದೆ. ಯೋಜನೆಯಿಂದ ನಾಶವಾಗುವ ಆರು ಸಾವಿರ ಎಕರೆ ಅರಣ್ಯ ಭೂಮಿಗೆ ಬದಲಾಗಿ ಹತ್ತು ಸಾವಿರ ಎಕರೆ ಭೂಮಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು.
ಯೋಜನೆಗೆ ವಿರೋಧ ವ್ಯಕ್ತಪಡಿಸಲು ತಮಿಳುನಾಡಿಗೆ ಯಾವುದೇ ಕಾರಣ ಇಲ್ಲ. ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ .ಅಣ್ಣಾಮಲೈ ಧರಣಿ ಕೂರುತ್ತಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸಿ.ಟಿ.ರವಿ ಬೆಂಬಲ ವ್ಯಕ್ತಪಡಿಸಿದ್ದಾರೆ. ರಾಜ್ಯದ ಬಿಜೆಪಿ ಸರ್ಕಾರ ತಮಿಳುನಾಡಿನ ಜೊತೆ ಕೈಜೊಡಿಸಿದೆ. ಇವರಿಗೆ ಯೋಜನೆ ಜಾರಿಯಾಗುವುದು ಬೇಕಿಲ್ಲ. ಅದಕ್ಕಾಗಿ ಕುಂಟು ನೆಪ ಹೇಳುತ್ತಿದ್ದಾರೆ ಎಂದು ಕಿಡಿಕಾರಿದರು.
ಪಾದಯಾತ್ರೆ ತಡೆಯಲು ಎಷ್ಟೇ ಪ್ರಯತ್ನ ಪಟ್ಟರು ನಮ್ಮ ಹೋರಾಟ ನಿಲ್ಲಲ್ಲ. ಪ್ರತಿದಿನ ಒಂದೊಂದು ಜಿಲ್ಲೆಯ ಜನ ಯಾತ್ರೆಯಲ್ಲಿ ಭಾಗವಹಿಸುತ್ತಾರೆ ಎಂದು ಹೇಳಿದರು.ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, 9 ಸಾವಿರ ಕೋಟಿ ವೆಚ್ಚದ ಈ ಯೋಜನೆಯನ್ನು ಆರಂಭಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತ್ತು.
67 ಟಿಎಂಸಿ ನೀರು ಸಂಗ್ರಹಿಸುವ ಅಣೆಕಟ್ಟು ನಿರ್ಮಾಣಕ್ಕಾಗಿ ಪ್ರಬಲ ಹೋರಾಟ ನಡೆಸುವ ಛಲ ಎಲ್ಲಾ ಕಾಂಗ್ರೆಸ್ ನಾಯಕರಲ್ಲಿದೆ. ಇದನ್ನು ವಿಫಲಗೊಳಿಸಲು ಸರ್ಕಾರದ ಜೊತೆ ಸೇರಿ, ಬಿಜೆಪಿ, ಜೆಡಿಎಸ್ ಹಾಗೂ ಇತರ ಪಕ್ಷಗಳು ಪ್ರಯತ್ನಿಸುತ್ತಿವೆ. ಅದಕ್ಕೆ ನಾವು ವಿಚಲಿತರಾಗುವ ಅಗತ್ಯ ಇಲ್ಲ ಎಂದರು.
ಮೇಕೆದಾಟು ಯೋಜನೆಯಿಂದ ತಮಿಳುನಾಡು ಸೇರಿದಂತೆ ಯಾರಿಗೂ ತೊಂದರೆಯಾಗುವುದಿಲ್ಲ. ಯೋಜನೆಯಿಂದ ಬಾತವಾಗುವ ಅರಣ್ಯ ಪ್ರದೇಶದ ಎರಡು ಪಟ್ಟು ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲು ಸರ್ಕಾರ ಗುರುತಿಸಿದೆ. ಯಾವ ಕಾರಣಕ್ಕೂ ಈ ಯೋಜನೆ ನಿಲ್ಲ ಬಾರದು ಎಂದರು.
