Tuesday, May 7, 2024
Homeರಾಜಕೀಯಬಿ.ಆರ್.ಪಾಟೀಲರನ್ನು ಮಾತುಕತೆಗೆ ಕರೆದಿದ್ದೇನೆ : ಸಿಎಂ ಸಿದ್ದರಾಮಯ್ಯ

ಬಿ.ಆರ್.ಪಾಟೀಲರನ್ನು ಮಾತುಕತೆಗೆ ಕರೆದಿದ್ದೇನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು, ನ.29- ಆಡಳಿತ ಪಕ್ಷದ ಶಾಸಕ ಬಿ.ಆರ್.ಪಾಟೀಲ್ ಅವರ ಜೊತೆ ತಾವು ದೂರವಾಣಿಯಲ್ಲಿ ಮಾತನಾಡಿದ್ದು, ಮುಖತಃ ಭೇಟಿ ಮಾಡುವಂತೆಯೂ ಅವರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಟೀಲರು ನಿನ್ನೆ ಮೊಬೈಲ್ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇಂದು ಬೆಳಗ್ಗೆ ದೂರವಾಣಿಯಲ್ಲಿ ಅವರೊಂದಿಗೆ ಮಾತನಾಡಿದ್ದೇನೆ. ಖುದ್ದಾಗಿಯೂ ಕರೆದು ಮಾತನಾಡುತ್ತೇನೆ ಎಂದು ಹೇಳಿದರು.

ಸಚಿವ ಕೃಷ್ಣಬೈರೇಗೌಡ ಅವರ ತಮ್ಮ ವಿರುದ್ಧ ಆರೋಪ ಮಾಡಿದ್ದಾರೆ, ಅದು ತನಿಖೆಯಾಗಬೇಕು, ಆರೋಪ ಕುರಿತು ಸ್ಪಷ್ಟನೆ ಸಿಗುವವರೆಗೂ ತಾವು ಸದನಕ್ಕೆ ಬರುವುದಿಲ್ಲ, ಆರೋಪ ಸಾಬೀತಾದರೆ ರಾಜಿನಾಮೆ ನೀಡಲು ಸಿದ್ಧ ಎಂದು ಬಿ.ಆರ್.ಪಾಟೀಲ್ ಮುಖ್ಯಮಂತ್ರಿಯವರಿಗೆ ಪತ್ರ ಬರೆದು ಮುಜುಗರ ಉಂಟು ಮಾಡಿದ್ದರು.

ಮೇಲ್ಮನವಿ ಹಿಂಪಡೆಯಲು ಹೈಕೋರ್ಟ್ ಸಮ್ಮತಿ : ಡಿಕೆಶಿ ಸದ್ಯನಿರಾಳ

ಸಿದ್ದರಾಮಯ್ಯ ಅವರ ಪರಮಾಪ್ತರಾಗಿರುವ ಬಿ.ಆರ್.ಪಾಟೀಲ್ ಈ ಮೊದಲು ಶಾಸಕಾಂಗ ಸಭೆ ಕರೆಯುವಂತೆ ಪತ್ರ ಬರೆದು ಇರಿಸುಮುರಿಸು ಉಂಟು ಮಾಡಿದ್ದರು. ಈಗ ಮತ್ತೊಮ್ಮೆ ಪತ್ರ ಸಮರ ನಡೆಸಿದ್ದಾರೆ. ಅವರೊಂದಿಗೆ ಸಂಧಾನಕ್ಕೆ ಮುಖ್ಯಮಂತ್ರಿ ಮುಂದಾಗಿದ್ದಾರೆ.

ಬೆಂಗಳೂರಿಗೆ ಇರುವ ಐಟಿ ಕಿರೀಟ ಹೈದರಾಬಾದ್ಗೆ ಹೋಗಲಿದೆಯೇ ಎಂದು ಮೋಹನ್ದಾಸ್ ಪೈ ಅವರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತ ಪಡಿಸಿರುವ ಅನುಮಾನದ ಬಗ್ಗೆ ತಮಗೆ ಮಾಹಿತಿ ಇಲ್ಲ, ವಿವರ ಪಡೆದು ಪ್ರತಿಕ್ರಿಯಿಸುತ್ತೇನೆ ಎಂದು ಸಿದ್ದರಾಮಯ್ಯ ಇದೇ ವೇಳೆ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

RELATED ARTICLES

Latest News