Friday, November 22, 2024
Homeರಾಜಕೀಯ | Politicsಚುನಾವಣೆಯಲ್ಲಿ ಸೋಲುವ ಭಯದಿಂದ ಸಿಎಎ ಗಿಮಿಕ್‍ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಚುನಾವಣೆಯಲ್ಲಿ ಸೋಲುವ ಭಯದಿಂದ ಸಿಎಎ ಗಿಮಿಕ್‍ ಮಾಡುತ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಉಡುಪಿ, ಮಾ.13- ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭಯ ಶುರುವಾಗಿರುವುದರಿಂದಾಗಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಂತಹ ಗಿಮಿಕ್‍ಗಳನ್ನು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಎ ಜಾರಿಗೊಳಿಸುವುದೇ ಚುನಾವಣಾ ಕಾರಣಕ್ಕಾಗಿ. ಇಷ್ಟು ದಿನ ಏಕೆ ಸುಮ್ಮನಿದ್ದರು? ಸೋಲಿನ ಭಯ ಎದುರಾಗುತ್ತಿದ್ದಂತೆ ಪೌರತ್ವ ತಿದ್ದುಪಡಿಯ ಜಾರಿಯ ಗಿಮಿಕ್ ಮಾಡುತ್ತಿದ್ದಾರೆ ಎಂದರು.

ಈ ಕಾಯ್ದೆಯ ಬಗ್ಗೆ ರಾಜ್ಯದ ನಿಲುವೇನು ಎಂಬುದನ್ನು ನಾಳೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇವೆ. ಅದರಲ್ಲಿ ಯಾವ ಅಂಶಗಳಿವೆ ಎಂಬುದನ್ನು ನೋಡಿ ಪರಿಶೀಲಿಸಿ ನಂತರ ಪ್ರತಿಕ್ರಿಯಿಸುತ್ತೇವೆ ಎಂದರು.ಜಯಪ್ರಕಾಶ್ ಹೆಗ್ಡೆ ನಿನ್ನೆ ಕಾಂಗ್ರೆಸ್‍ಗೆ ಸೇರ್ಪಡೆಯಾಗಿದ್ದಾರೆ.

ಇದರಿಂದಾಗಿ ಪಕ್ಷಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಭಾವಿಸಿದ್ದೇನೆ. ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಸ್ರ್ಪಸಲು ಟಿಕೆಟ್ ನೀಡುವ ಬಗ್ಗೆ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.ಬಿಜೆಪಿಯ ಸಂಸದ ಕರಡಿ ಸಂಗಣ್ಣ ತಮ್ಮನ್ನು ಭೇಟಿಯಾಗಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ, ಮೈಸೂರಿನ ಸಂಸದ ಪ್ರತಾಪ ಸಿಂಹ ಅವರಿಗೆ ಟಿಕೆಟ್ ತಪ್ಪಿಸಲಾಗಿದೆ.

ಅದಕ್ಕೆ ಏನು ಕಾರಣ ಎಂದು ಬಿಜೆಪಿಯವರೇ ಹೇಳಬೇಕು. ಮೈಸೂರಿನ ಮಹಾರಾಜ ಯದುವೀರ್ ಅವರ ವಿರುದ್ಧ ಪ್ರತಾಪ್ ಸಿಂಹ ಟೀಕೆ ಮಾಡುತ್ತಿರುವುದಕ್ಕೆ ಖುದ್ದು ಅವರೇ ಉತ್ತರ ನೀಡಬೇಕು ಎಂದು ಹೇಳಿದರು. ಪ್ರತಾಪ್ ಸಿಂಹ ಎಂದಿಗೂ ನನ್ನ ವಿರುದ್ಧ ಚುನಾವಣೆಯಲ್ಲಿ ಸ್ರ್ಪಸಿಲ್ಲ. ಹಾಲಿ ಸಂಸದರಾಗಿದ್ದ ಅವರಿಗೆ ಟಿಕೆಟ್ ಏಕೆ ತಪ್ಪಿಸಲಾಗಿದೆ ಎಂಬುದೂ ಕೂಡ ನನಗೆ ಗೊತ್ತಿಲ್ಲ ಎಂದರು.

RELATED ARTICLES

Latest News