ಬೀದರ್,ಫೆ.3-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪದೇ ಪದೇ ಭೇಟಿ ನೀಡುವುದಷ್ಟೇ ಅಲ್ಲ ಪ್ರತಿ ದಿನವೂ ರಾಜ್ಯದಲ್ಲೇ ಬೀಡುಬಿಟ್ಟರೂ ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
ಎರಡನೇ ಹಂತದ ಪ್ರಜಾಧ್ವನಿಯಾತ್ರೆಗೆ ಬಸವಕಲ್ಯಾಣದಿಂದ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ವಿಧಾನಸೌದದ ಯಾವುದೇ ಗೋಡೆಗೆ ಕಿವಿ ಇಟ್ಟರೂ ಲಂಚಾ ಲಂಚಾ ಎಂಬ ಧ್ವನಿ ಕೇಳಿಸುತ್ತದೆ ಎಂದು ಆರೋಪಿಸಿದರು.
ಮೇ 3ನೇ ವಾರದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ..?
ಶೇ.40ರಷ್ಟು ಕಮಿಷನ್ ನೀಡಲಾಗದೆ ಬಹಳಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಕೆಲವರು ದಯಾಮರಣಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಗುತ್ತಿಗೆದಾರರ ಸಂಘ ಪ್ರಧಾನಿ ಅವರಿಗೆ ಪತ್ರ ಬರೆದು ಅಳಲು ತೋಡಿಕೊಂಡಿದೆ. ಆದರೂ ರಾಜ್ಯ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ದೂರಿದರು.
ಅಪ್ಪಿತಪ್ಪಿ ನಿಮ್ಮ ಬ್ಯಾಂಕ್ ಖಾತೆಗಳಲ್ಲಿ ಹೆಚ್ಚಿನ ವಹಿವಾಟು ನಡೆಸೀರಿ ಜೋಕೆ.. !
ಚುನಾವಣಾ ಕಾಲದಲ್ಲಿ ಪ್ರಧಾನಿಯವರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಇದಕ್ಕೆ ನಮ್ಮ ಆಕ್ಷೇಪವಿಲ್ಲ. ಬಿಜೆಪಿಯ ಆಡಳಿತದ ವಿರುದ್ಧ ಜನ ಬೇಸತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಕಿತ್ತೊಗೆಯುವುದು ಖಚಿತ. ಪ್ರಧಾನಿ ಪ್ರತಿ ದಿನ ಇಲ್ಲೇ ನೆಲೆ ನಿಂತರೂ ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ ಎಂದು ಪುನರುಚ್ಚರಿಸಿದರು.
Siddaramaiah, praja dhwani yatra, PM Modi,