Saturday, May 18, 2024
Homeರಾಜ್ಯಕುಮಾರಸ್ವಾಮಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು : ಸಿಎಂ ಸಿದ್ದರಾಮಯ್ಯ

ಕುಮಾರಸ್ವಾಮಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು,ನ.19- ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಣ ಪಡೆದು ವರ್ಗಾವಣೆ ಮಾಡುತ್ತಿದ್ದರು. ಅದೇ ಅನುಭವವನ್ನು ಪದೇ ಪದೇ ಕೇಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸಾರಿರುವ ಟ್ವೀಟ್ ವಾರ್‍ಗೆ ಸಿಡಿಮಿಡಿಗೊಂಡಿರುವ ಸಿದ್ದರಾಮಯ್ಯ ಇಂದು ಪ್ರತ್ಯಾರೋಪದ ಮೂಲಕ ತಿರುಗೇಟು ನೀಡಿದ್ದಾರೆ.
ನಾನು ಈಗಾಗಲೇ ಮೂರು ಬಾರಿ ಸ್ಪಷ್ಟನೆ ನೀಡಿದ್ದೇನೆ. ಆದರೂ ಪದೇ ಪದೇ ಕುಮಾರಸ್ವಾಮಿ ಹೇಳಿದ್ದನ್ನೇ ಹೇಳುತ್ತಿದ್ದಾರೆ. ಇನ್ನು ಮುಂದೆ ಅವರು ನೂರು ಟ್ವೀಟ್ ಮಾಡಲಿ ನಾನು ಪ್ರತಿಕ್ರಿಯಿಸುವುದಿಲ್ಲ ಎಂದರು.

ಪದೇ ಪದೇ ಪ್ರಶ್ನೆಗಳು ಎದುರಾದಾಗ ಸಿಟ್ಟಾದ ಸಿದ್ದರಾಮಯ್ಯ ಅವರು ನಮ್ಮ ಅಕಾರ ಅವಯಲ್ಲಿ ಹಣ ಪಡೆದು ವರ್ಗಾವಣೆ ಮಾಡಿರುವ ಒಂದೇ ಒಂದು ಪ್ರಕರಣವನ್ನು ತೋರಿಸಿದರೂ ರಾಜಕೀಯವಾಗಿ ನಾನು ನಿವೃತ್ತಿ ಹೊಂದುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಅದರ ನಂತರ ಪದೇ ಪದೇ ಮಾತನಾಡುವುದರಲ್ಲಿ ಅರ್ಥವಿಲ್ಲ ಎಂದು ಹೇಳಿದರು.

ವಿಶ್ವಕಪ್: ಭಾರತದ ಗೆಲುವಿಗೆ ದೇಶಾದ್ಯಂತ ವಿಶೇಷ ಪೂಜೆ, ಹೋಮ-ಹವನ

ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಮೈಸೂರಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಪರ್ಕ ಸಭೆಯಲ್ಲಿ ಮಾತನಾಡುವ ವೇಳೆ ಐದು ಹೆಸರನ್ನು ಕೊಟ್ಟಿದ್ದೇನೆ. ಅದನ್ನು ಹೊರತುಪಡಿಸಿ ಬೇರೆ ಸೇರಬಾರದು ಎಂದು ತಾಕೀತು ಮಾಡಿದರು.

ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಆನಂತರ ಮುಖ್ಯಮಂತ್ರಿಯವರ ವಿಶೇಷ ಕರ್ತವ್ಯ ಅಕಾರಿ ಮಹದೇವ್ ಅವರೊಂದಿಗೆ ಯತೀಂದ್ರ ಸಮಾಲೋಚನೆ ನಡೆಸಿದರು. ಈ ವಿಡಿಯೋ ಬಹಿರಂಗವಾಗುತ್ತಿದ್ದಂತೆ ನಾನಾ ರೀತಿಯ ವ್ಯಾಖ್ಯಾನಗಳು ಕೇಳಿಬಂದವು. ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸರ್ಕಾರದಲ್ಲಿ ವರ್ಗಾವಣೆ ನಡೆಯುತ್ತಿದೆ ಎಂಬ ಗಂಭೀರ ಆರೋಪ ಮಾಡಿದವು.

ಅದಕ್ಕೆ ಸ್ಪಷ್ಟನೆ ನೀಡಿದ ಮುಖ್ಯಮಂತ್ರಿಯವರು ತಮ್ಮ ಪುತ್ರ ವರುಣಾ ವಿಧಾನಸಭಾ ಉಸ್ತುವಾರಿ ನೋಡಿಕೊಳ್ಳುತ್ತಿದ್ದಾರೆ. ಸಾಮಾಜಿಕ ಹೊಣೆಗಾರಿಕೆ ನಿಯಡಿ ಶಾಲೆಗಳ ಅಭಿವೃದ್ಧಿಗೆ ಪಟ್ಟಿ ತಯಾರಿಸಲಾಗಿದ್ದು, ಆ ಕುರಿತಂತಹ ಹೆಸರುಗಳ ಬಗ್ಗೆ ಯತೀಂದ್ರ ಪ್ರಸ್ತಾಪಿಸಿದ್ದಾರೆ. ಅದು ಅಧಿಕಾರಿಗಳ ವರ್ಗಾವಣೆ ವಿಷಯವಲ್ಲ ಎಂದು ಸಿದ್ದರಾಮಯ್ಯ ತಿಳಿಸಿದರು.

ನಿನ್ನೆ ಮೈಸೂರಿನಲ್ಲಿ ಹೇಳಿಕೆ ನೀಡಿ ಇದೇ ವಿಚಾರವನ್ನು ಪುನರುಚ್ಚರಿಸಿದರು. ಅದರ ಹೊರತಾಗಿಯೂ ಇಂದು ಬೆಳಗ್ಗೆ ಕುಮಾರಸ್ವಾಮಿ ಮತ್ತೆ ಟ್ವೀಟ್ ಮಾಡಿ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದರು. ಅದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಇನ್ನು ಮುಂದೆ ಕುಮಾರಸ್ವಾಮಿ ನೂರು ಟ್ವೀಟ್ ಮಾಡಲಿ ನಾನು ಉತ್ತರಿಸುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದಾರೆ.

RELATED ARTICLES

Latest News