Thursday, September 19, 2024
Homeರಾಜಕೀಯ | Politicsಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ, ಸಿದ್ದರಾಮಯ್ಯ ಹೇಳಿದ್ದೇನು..?

ಡಿಕೆಶಿಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂದ ಸ್ವಾಮೀಜಿ, ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು, ಜೂ.27- ಮುಖ್ಯಮಂತ್ರಿ ಅಧಿಕಾರ ಹಸ್ತಾಂತರ ಹೈಕಮಾಂಡ್ನ ನಿರ್ಧಾರ. ನಾವು ಪಕ್ಷದ ವರಿಷ್ಠರು ನೀಡುವ ಸೂಚನೆಯಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಾಡಪ್ರಭು ಕೆಂಪೇಗೌಡರ 515ನೇ ಜಯಂತಿ ಕಾರ್ಯಕ್ರಮದ ವೇದಿಕೆಯಲ್ಲಿ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿಯವರು ಮಾತನಾಡಿ, ಸಿದ್ದರಾಮಯ್ಯನವರು ದೊಡ್ಡ ಮನಸ್ಸು ಮಾಡಿ ಅಧಿಕಾರವನ್ನು ಡಿ.ಕೆ.ಶಿವಕುಮಾರ್ರವರಿಗೆ ಬಿಟ್ಟುಕೊಡ ಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ನಮ ಕಾಂಗ್ರೆಸ್ ಹೈಕಮಾಂಡ್ನ ಪಕ್ಷ. ಪ್ರಜಾಪ್ರಭುತ್ವದಲ್ಲಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತದೆಯೋ ಆ ರೀತಿ ನಡೆದುಕೊಳ್ಳಬೇಕು ಎಂದು ಹೇಳಿದರು.

ಅಧಿಕಾರ ಹಸ್ತಾಂತರ ಸೇರಿದಂತೆ ಯಾವುದೇ ಬೆಳವಣಿಗೆಗಳಾದರೂ ಹೈಕಮಾಂಡ್ ನಿರ್ಧಾರವೇ ಅಂತಿಮ. ಅದನ್ನು ಪಾಲಿಸಬೇಕು ಎಂದು ಅನ್ಯಮನಸ್ಕರಾಗಿ ಹೇಳಿ ತೆರಳಿದರು.ಇದಕ್ಕೂ ಮುನ್ನ ಕಾರ್ಯಕ್ರಮದ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ನಾಡಪ್ರಭು ಕೆಂಪೇಗೌಡ ಅವರ ಜಾತ್ಯತೀತ ನಿಲುವು ಆದರ್ಶನೀಯ. ಪ್ರತಿಯೊಬ್ಬರೂ ಅದನ್ನು ಅರ್ಥೈಸಿಕೊಂಡು ಸಮಾಜದಲ್ಲಿ ಮನುಷ್ಯರಾಗಿ ಬದುಕಬೇಕು ಎಂದು ಕರೆ ನೀಡಿದರು.

ಕೆಂಪೇಗೌಡರ ಜಯಂತಿಯನ್ನು ಸರ್ಕಾರದಿಂದ ಆಚರಿಸಲು ಕ್ರಮ ಕೈಗೊಳ್ಳಲಾಗಿದೆ. ಇದಕ್ಕೆ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರು ಸಲಹೆ ನೀಡಿದ್ದರು. ಅವರ ಸಲಹೆ ಮೇರೆಗೆ ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲಾಯಿತು ಎಂದು ಹೇಳಿದರು.

ನಾಡಿನ ಜನತೆ ಸಂಭ್ರಮದಿಂದ ಕೆಂಪೇಗೌಡ ಜಯಂತಿಯನ್ನು ಆಚರಿಸುತ್ತಿದ್ದಾರೆ. ನಾಡಪ್ರಭುಗಳ ಆಡಳಿತ ಎಲ್ಲರಿಗೂ ಪ್ರೇರಣೆ. ಅವರ ಸಮಾಜಮುಖಿ ಕೆಲಸ ಹಾಗೂ ಮಾದರಿ ಆಡಳಿತ ಶ್ಲಾಘನೀಯ. ಕೆಂಪೇಗೌಡರು ಒಕ್ಕಲಿಗ ಸಮುದಾಯದಲ್ಲಿ ಹುಟ್ಟಿದ್ದರು. ಆಡಳಿತದಲ್ಲಿ ಎಂದೂ ಜಾತಿ, ಧರ್ಮ ಬೇಧ ಮಾಡಲಿಲ್ಲ. ಎಲ್ಲಾ ಜನಾಂಗದ ಅಭಿವೃದ್ಧಿಗೆ ಪ್ರಯತ್ನಿಸಿದರು.

ಅವರ ದೂರದೃಷ್ಟಿಯಿಂದಾಗಿ ಬೆಂಗಳೂರು ನಿರ್ಮಾಣಗೊಂಡು ಇಂದು ವಿಶ್ವ ಪ್ರಸಿದ್ಧಿಯಾಗಿದೆ. ಇಲ್ಲಿ ಹಲವು ಜಾತಿ, ಧರ್ಮದವರು ಒಟ್ಟಿಗೆ ವಾಸಿಸುತ್ತಿದ್ದಾರೆ ಎಂದು ವಿವರಿಸಿದರು.ಕಾರ್ಯಕ್ರಮದಲ್ಲಿ ಗಾಂಧಿ ಸಾರಕ ಸಂಸ್ಥೆ, ಸುಮಂಗಲಿ ಸೇವಾಶ್ರಮ ಹಾಗೂ ಬಸವನಗುಡಿ ಸೊಸೈಟಿಯ ಶಿಕ್ಷಣ ಸಂಸ್ಥೆಯ ಅಂಗಸಂಸ್ಥೆಯಾದ ಸೈನ್ಸ್ ಫೋರಂಗೆ ನಾಡಪ್ರಭು ಕೆಂಪೇಗೌಡರ ಅಂತಾರಾಷ್ಟ್ರೀಯ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು.

ಗಾಂಧಿಸಾರಕ ಸಂಸ್ಥೆಯಿಂದ ವೊಡೆ ಪಿ. ಕೃಷ್ಣ, ಸುಮಂಗಲಿ ಸೇವಾಶ್ರಮದ ಸುಶೀಲಮ, ಶಾಂತಮ, ಸೈನ್ಸ್ ಫೋರಂನ ವೆಂಕಟಶಿವಾರೆಡ್ಡಿ, ವಿ.ಎನ್.ಸುಬ್ರಹಣ್ಯ ಅವರನ್ನು ಸನಾನಿಸಲಾಯಿತು.

ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀಕ್ಷೇತ್ರ ಪಟ್ಟನಾಯಕನಹಳ್ಳಿ ಸ್ಫಟಿಕಪುರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಶ್ರೀ ಚಂದ್ರಶೇಖರ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೆ.ಎಚ್.ಮುನಿಯಪ್ಪ, ಕೃಷ್ಣ ಭೈರೇಗೌಡ, ಶಿವರಾಜ್ ತಂಗಡಗಿ, ಶಾಸಕರಾದ ರಿಜ್ವಾನ್ ಹರ್ಷದ್, ವಿಶ್ವನಾಥ್, ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ, ಗೋವಿಂದರಾಜು, ಸಲೀಂ ಅಹಮದ್, ರಾಮೋಜಿ ಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತರಾಯಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

Latest News