Wednesday, February 28, 2024
Homeರಾಜ್ಯರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್

ರೈತರ ನೆರವಿಗೆ ಬರಲು ಆಗದಿದ್ದರೆ ರಾಜೀನಾಮೆ ಕೊಡಿ : ಅಶೋಕ್

ಬೆಂಗಳೂರು, ಜ.7- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮಲ್ಲಿ ನಿಜಕ್ಕೂ ಮಾನವೀಯತೆ ಇದ್ದರೆ, ರಾಜ್ಯದ ಕೃಷಿ ಕಾರ್ಮಿಕರು, ದಲಿತರು, ಪರಿಶಿಷ್ಟ ಪಂಗಡದವರು, ಹಿಂದುಳಿದವರ ಮೇಲೆ ಕಾಳಜಿ ಇದ್ದರೆ ಮೊದಲು ರಾಜ್ಯದ ಜನತೆ ಗುಳೆ ಹೋಗುವುದನ್ನು ತಪ್ಪಿಸಿ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಒತ್ತಾಯಿಸಿದ್ದಾರೆ.

ಈ ಕುರಿತು ತಮ್ಮ ಆಧಿಕೃತ ಸಾಮಾಜಿಕ ಜಾಲತಾಣ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುವುದೇ ನಿಮ್ಮ ಸಾಧನೆಯಾಗಿಬಿಟ್ಟಿದೆ. ರೈತರ ನೆರವಿಗೆ ಬರಲು ನಿಮ್ಮ ಕೈಲಾಗದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಎಂದು ಆಗ್ರಹಿಸಿದ್ದಾರೆ. ಕೃಷಿ ಕಾರ್ಮಿಕರಿಗೆ ಗುಳೆ ಗ್ಯಾರೆಂಟಿ ಎಂದಿರುವ ಅವರು, ಬರ ಮತ್ತು ಸಾಲಬಾಧೆಯಿಂದ ಕಂಗೆಟ್ಟಿರುವ ಉತ್ತರ ಕರ್ನಾಟಕದ ರೈತರಿಗೆ ತಮ್ಮ ಜೀವ ಉಳಿಸಿಕೊಳ್ಳಲು ಈಗ ಊರು ಬಿಡುವುದೊಂದೇ ದಾರಿ ಎಂಬ ಶೋಚನೀಯ ಪರಿಸ್ಥಿತಿ ತಂದಿಟ್ಟಿದೆ ಕಾಂಗ್ರೆಸ್ ಸರ್ಕಾರ ಎಂದು ಆರೋಪಿಸಿದ್ದಾರೆ.

ತೈವಾನ್‍ಗೆ ಶಸ್ತ್ರಾಸ್ತ್ರ ಮಾರಾಟ ಮಾಡಿದ ಅಮೇರಿಕಾದ 5 ಕಂಪನಿಗಳಿಗೆ ಚೀನಾ ನಿರ್ಬಂಧ

ಸದಾ ಬಣ ರಾಜಕೀಯದಲ್ಲಿ ನಿರತವಾಗಿರುವ ಕಾಂಗ್ರೆಸ್ ಮಂತ್ರಿಗಳು ಹಾಗೂ ಶಾಸಕರು, ಎಷ್ಟು ಜನ ಡಿಸಿಎಂಗಳಿರಬೇಕು ಎಂದು ಲೆಕ್ಕಾಚಾರ ಹಾಕುವ ಬದಲು ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತರಿಗೆ ಏನು ಮಾಡಬೇಕು ಎಂದು ಯೋಚಿಸಿದಿದ್ದರೆ ಈ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಅವರು ಟೀಕಿಸಿದ್ದಾರೆ.

ಪಂಚ ರಾಜ್ಯಗಳ ಚುನಾವಣೆಗೆ ಕಲೆಕ್ಷನ್ ಮಾಡುವಲ್ಲಿದ್ದ ಆಸಕ್ತಿಯಲ್ಲಿ, ತೆಲಂಗಾಣ ಚುನಾವಣೆಗೆ ಪ್ರಚಾರ ಮಾಡುವಲ್ಲಿದ್ದ ಉತ್ಸಾಹದಲ್ಲಿ ಕೊಂಚವಾದರೂ ರಾಜ್ಯದ ರೈತರ ಬಗ್ಗೆ ಇದ್ದಿದ್ದರೆ, ಕೃಷಿ ಕಾರ್ಮಿಕರು ಇಂದು ಮನೆ ಮಠ ಬಿಟ್ಟು ಗುಳೆ ಹೋಗುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

RELATED ARTICLES

Latest News