ಸಿದ್ದು ದಲಿತ ಪ್ರೀತಿ ನಾಟಕ: ಬಿಜೆಪಿ ಕಿಡಿ

Social Share

ಬೆಂಗಳೂರು,ಡಿ.12- ದಲಿತರ ನಿರೀಕ್ಷೆಯನ್ನು ಹುಸಿಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ದಲಿತರಿಗೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಬಿಜೆಪಿ ಕಿಡಿಕಾರಿದೆ.

ಸರಣಿ ಟ್ವೀಟ್‍ಗಳ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ ಎಂದು ಪ್ರಶ್ನಿಸಿದೆ.

ಸಿದ್ದರಾಮಯ್ಯ ಅವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ ಎಂದು ಕುಹಕವಾಡಿದೆ.

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶ ಮಾಡಿ, ಆ ಸಂದರ್ಭದಲ್ಲಿ ಅವರು ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ಎಂದು ಮತ್ತೆ ಪ್ರಶ್ನಿಸಿದೆ.

ಗಡಿ ವಿವಾದ: ಏಕಪಕ್ಷೀಯ ನಿರ್ಧಾರ ಬೇಡ ಕೇಂದ್ರಕ್ಕೆ ಸಂಸದರ ನಿಯೋಗ ಆಗ್ರಹ

ಈಗ ಸಿದ್ದರಾಮಯ್ಯನವರು ಮತ್ತೆ ದಲಿತರಿಗೆ ನ್ಯಾ.ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸುಳ್ಳು ಭರವಸೆ ನೀಡುತ್ತಿದ್ದು, ಮೂಗಿಗೆ ತುಪ್ಪ ಸವರುವ ನಿಮ್ಮ ಸುಳ್ಳು ಭರವಸೆಯನ್ನು ಯಾವ ದಲಿತರು ನಂಬುವ ಸ್ಥಿತಿಯಲ್ಲಿಲ್ಲ ಎಂದು ತಿರುಗೇಟು ನೀಡಿದೆ.

ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ. ಹಾಗೇ ಮಲ್ಲಿಕಾರ್ಜುನ ಖರ್ಗೆ ಡಾ.ಜಿ.ಪರಮೇಶ್ವರ್, ಮೋಟಮ್ಮ, ವಿ. ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ. ಸಿದ್ದರಾಮಯ್ಯರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ ಎಂದು ಬಿಜೆಪಿ ಟೀಕಿಸಿದೆ.

ಬಿಜೆಪಿ ಚುನಾವಣ ರಣತಂತ್ರ: ಮೋದಿ ರ‍್ಯಾಲಿಗಳಿಗೆ ಸಿದ್ಧತೆ

ಸಿದ್ದರಾಮಯ್ಯ ಅವರ ತೋರ್ಪಡಿಕೆಯ ¾¾ಅಹಿಂದ¿¿ ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳೇಟು ಮಾತ್ರ ಎಂದು ಆಕ್ರೋಶ ಹೊರಹಾಕಿದೆ.

Siddaramaiah, Sadashiva Commission report, Dalit, BJP,

Articles You Might Like

Share This Article