Thursday, July 3, 2025
Homeರಾಜಕೀಯ | Politicsಸಿದ್ದರಾಮಯ್ಯನವರೇ ಈ ಭಂಡ ಬಾಳು ಬಿಟ್ಟು ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ : ಆರ್‌.ಅಶೋಕ್‌

ಸಿದ್ದರಾಮಯ್ಯನವರೇ ಈ ಭಂಡ ಬಾಳು ಬಿಟ್ಟು ರಾಜೀನಾಮೆ ಕೊಟ್ಟು ಗೌರವ ಉಳಿಸಿಕೊಳ್ಳಿ : ಆರ್‌.ಅಶೋಕ್‌

Siddaramaiah should resign and maintain respect: R. Ashok

ಬೆಂಗಳೂರು,ಜು.3- ಇನ್ನಾದರೂ ಈ ಭಂಡ ಬಾಳು ಬಿಡಿ. ಅಧಿಕಾರದ ವ್ಯಾಮೋಹ ಬಿಟ್ಟು ರಾಜನಾಮೆ ಕೊಟ್ಟು ಇರುವ ಅಲ್ಪ ಸ್ವಲ್ಪ ಗೌರವವನ್ನಾದರೂ ಉಳಿಸಿಕೊಳ್ಳಿ. ನಿವೃತ್ತಿಯ ಅಂಚಿನಲ್ಲಿ ಖಳನಾಯಕನಾಗಿ ಇತಿಹಾಸದ ಪುಟ ಸೇರುವುದಕ್ಕಿಂತ, ಗೌರವದಿಂದ ಕುರ್ಚಿ ತ್ಯಾಗ ಮಾಡುವುದು ನಿಮಗೂ ಒಳಿತು, ರಾಜ್ಯಕ್ಕೂ ಒಳಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್‌. ಅಶೋಕ್‌ ಅವರು ಟೀಕಾ ಪ್ರಹಾರ ನಡೆಸಿದ್ದಾರೆ.

ಈ ಕುರಿತು ತಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಸಿದ್ದರಾಮಯ್ಯ ಅವರ ವಿರುದ್ದ ಬೆಂಕಿಯುಗುಗಿಳಿರುವ ಅಶೋಕ್‌, ನಿಮ ಯಡವಟ್ಟುಗಳಿಂದ ಪ್ರತಿ ದಿನ ಒಂದಲ್ಲ ಒಂದು ರೀತಿ ತಮ ಸರ್ಕಾರಕ್ಕೆ, ವೈಯಕ್ತಿಕವಾಗಿ ತಮಗೆ ಕೆಟ್ಟ ಹೆಸರು ಬರುತ್ತಲೇ ಇದೆ ಎಂದು ವಾಗ್ದಳಿ ನಡೆಸಿದ್ದಾರೆ.

ನಿಮ ನಡೆಯಿಂದ ಒಬ್ಬ ಕರ್ತವ್ಯನಿಷ್ಠ ಅಧಿಕಾರಿಯ ಸ್ವಾಭಿಮಾನಕ್ಕೆ ಧಕ್ಕೆ ಬಂದಿದೆ. ಇಡೀ ಪೊಲೀಸ್‌‍ ಇಲಾಖೆಯ ಮನೋಬಲಕ್ಕೆ ಚ್ಯುತಿ ತಂದಿದೆ. ಅಧಿಕಾರಶಾಹಿಯ ನೈತಿಕತೆಗೆ ಪೆಟ್ಟು ಕೊಟ್ಟಿದೆ, ನೌಕರಷಾಹಿಯ ಆತಸ್ಥೈರ್ಯ ಕುಸಿದಿದೆ.ಕಾಂಗ್ರೆಸ್‌‍ ಸರ್ಕಾರದಿಂದ ಪೊಲೀಸ್‌‍ ಇಲಾಖೆಯ ಮನೋಬಲಕ್ಕೆ ಧಕ್ಕೆ ಎಂದು ಟೀಕಿಸಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ,ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ನೀವು ಬಹಿರಂಗ ವೇದಿಕೆಯ ಮೇಲೆ ಕೈ ಎತ್ತಿದ್ದ ಘಟನೆಗೆ ಕಾರಣ ನಿಮ ಅಧಿಕಾರದ ದರ್ಪವೋ, ಮದವೋ, ದುರಂಹಂಕಾರವೋ, ವಿಲ ಸರ್ಕಾರ ಮುನ್ನಡೆಸುತ್ತಿರುವ ಹತಾಶೆಯೋ, ಅಥವಾ ಇಷ್ಟರಲ್ಲೇ ಅಧಿಕಾರ ಬಿಟ್ಟುಕೊಡಬೇಕು ಎನ್ನುವ ಕಾಕತಾಳಿಯವೋ, ಅದನ್ನ ನಿಮ ಆತಾವಲೋಕನಕ್ಕೆ ಬಿಡುತ್ತೇನೆ ಎಂದು ಆಶೋಕ್‌ ಸೂಚ್ಯವಾಗಿ ಹೇಳಿದ್ದಾರೆ.

RELATED ARTICLES

Latest News