ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

Social Share

ಬೆಂಗಳೂರು,ಜ.30- ದೆಹಲಿಯಿಂದ ಶ್ರೀನಗರಕ್ಕೆ ತೆರಳಬೇಕಿದ್ದ ಎಲ್ಲ ವಿಮಾನಗಳ ಹಾರಾಟ ರದ್ದಾಗಿರುವ ಹಿನ್ನೆಲೆಯಲ್ಲಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಶ್ರೀನಗರ ಪ್ರವಾಸ ರದ್ದಾಗಿದೆ.

ಬೆಳಗ್ಗೆ 9.15ರ ವಿಮಾನದಲ್ಲಿ ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು. ಇದಕ್ಕಾಗಿ ಅವರು ನಿನ್ನೆ ರಾತ್ರಿಯೇ ದೆಹಲಿಗೆ ಹೋಗಿದ್ದರು. ಬೆಳಗ್ಗೆ 8 ಗಂಟೆಗೆ ದೆಹಲಿ ವಿಮಾನ ನಿಲ್ದಾಣಕ್ಜೆ ಸಿದ್ದರಾಮಯ್ಯ ಅವರು ಆಗಮಿಸಿದ್ದರು. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್, ಮಾಜಿ ಸಚಿವ ವಿನಯ್ ಕುಲಕರ್ಣಿ,
ಶಾಸಕರಾದ ನಾಗೇಂದ್ರ, ರಾಘವೇಂದ್ರ ಹಿಟ್ನಾಳ್, ಪ್ರಕಾಶ್ ರಾಥೋಡ್, ಮಾಜಿ ಶಾಸಕರಾದ ಅಶೋಕ್ ಪಟ್ಟಣ, ಐವಾನ್ ಡಿಸೋಜಾ ಜೊತೆಗಿದ್ದರು.

ಕಾಶ್ಮೀರದ ಹಿಮಸೌಂದರ್ಯಕ್ಕೆ ಮಾರುಹೋದ ಕಾಂಗ್ರೆಸ್ ನಾಯಕರು

ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ಶ್ರೀನಗರಕ್ಕೆ ಪ್ರಯಾಣ ಬೆಳೆಸಬೇಕಿತ್ತು.

ಶ್ರೀನಗರದಲ್ಲಿ ಹವಾಮಾನ ವೈಪರೀತ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ದೆಹಲಿ, ಶ್ರೀನಗರ ನಡುವಣ ಎಲ್ಲ ವಿಮಾನಗಳ ಹಾರಾಟ ರದ್ದಾಗಿದೆ.

Siddaramaiah, Srinagar, flights, cancelled,

Articles You Might Like

Share This Article