ಬಳ್ಳಾರಿ, ಜ.4- ಸಿದ್ದರಾಮಯ್ಯ ಅವರ ಕೀಳು ಮಟ್ಟದ ಹೇಳಿಕೆಗೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಿ ನಿಯತ್ತಿನ ಪ್ರಾಣಿ. ಜನರಿಗಾಗಿ ನಾನು ನಿಯತ್ತಿನಿಂದ ಕೆಲಸ ಮಾಡುತ್ತಿದ್ದೇನೆ. ಜನಪರವಾಗಿಯೇ ಉಳಿದುಕೊಂಡಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ. ನಾಯಿಮರಿಗೆ ನನ್ನನ್ನು ಹೋಲಿಸಿರುವುದು ಸಿದ್ದರಾಮಯ್ಯ ಅವರ ವ್ಯಕ್ತಿತ್ವವನ್ನು ತೋರಿಸುತ್ತದೆ.
ಅವರ ಹಾಗೆ ಸಮಾಜ ಒಡೆಯುವ ಕೆಲಸವನ್ನು ನಾನು ಮಾಡುವುದಿಲ್ಲ. ದೌರ್ಭಾಗ್ಯ ನೀಡಿಲ್ಲ. ಬಿಜೆಪಿ ಸರ್ಕಾರ ಸೌಭಾಗ್ಯಗಳನ್ನು ನೀಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಶಬರಿಮಲೆ ಅಯ್ಯಪ್ಪ ಚಿತ್ರಕ್ಕೆ ಬೆಂಬಲ ನೀಡಿದ್ದ ವ್ಯಕ್ತಿಯ ಅಂಗಡಿ ಧ್ವಂಸ
ಬಹಿರಂಗ ಚರ್ಚೆಗೆ ಬರುವಂತೆ ನನಗೆ ಸವಾಲು ಹಾಕಿದ್ದಾರೆ. ವಿಧಾನಸಭೆಗಿಂತ ದೊಡ್ಡ ವೇದಿಕೆ ಯಾವುದೂ ಇಲ್ಲ. 15 ದಿನಗಳ ಕಾಲ ಸದನ ನಡೆಯಿತು. ಅದಕ್ಕಿಂತಲೂ ಹಿಂದೆಯೂ ನಡೆದಿದೆ. ವೇದಿಕೆ ಇದ್ದಾಗ ಚರ್ಚೆ ಮಾಡದೆ, ಹೊರಗೆ ರಾಜಕೀಯವಾಗಿ ಹೇಳಿಕೆ ನೀಡುತ್ತಾರೆ.
ಮುಂದೆ ಫೆಬ್ರವರಿಯಲ್ಲಿ ಮತ್ತೆ ಅಧಿವೇಶನ ನಡೆಯುತ್ತದೆ. ಅಲ್ಲಿ ಚರ್ಚೆ ಮಾಡೋಣ. ವಿಧಾನಮಂಡಲಕ್ಕಿಂತ ಪವಿತ್ರ ವೇದಿಕೆ ಬೇಕೆ ಎಂದು ಪ್ರಶ್ನಿಸಿದ್ದಾರೆ.
Siddaramaiah, statement, CM Bommai, BJP,