ಅಖಾಡ ಆಯ್ದುಕೊಂಡ ಟಗರು, ಕೋಲಾರದಲ್ಲೇ ಸಿದ್ದರಾಮಯ್ಯ ಸ್ಪರ್ಧೆ

Social Share

ಬೆಂಗಳೂರು,ಜ.9- ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಾರೆ ಎಂಬ ಕುತೂಹಲಕ್ಕೆ ಕೊನೆಗೂ ತೆಗೆಬಿದ್ದಿದೆ. ಕೋಲಾರ ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಸಿದ್ದರಾಮಯ್ಯನವರೇ ಇಂದು ಘೋಷಣೆ ಮಾಡಿದ್ದಾರೆ.

ಇಂದು ಬೆಳಗ್ಗೆ ಸಿದ್ದರಾಮಯ್ಯ ಕೆಲ ಕಾಂಗ್ರೆಸ್ ನಾಯಕರ ಜೊತೆ ಕೋಲಾರದ ಪ್ರಮುಖ ನಾಯಕ ಹಾಗೂ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿ ನಂತರ ಕೋಲಾರದಲ್ಲೇ ಸ್ಪರ್ಧಿಸುವುದಾಗಿ ಸ್ವತಃ ಸಿದ್ದರಾಮಯ್ಯ ಅವರೇ ಘೋಷಣೆ ಮಾಡಿದ್ದಾರೆ.

ಸಿದ್ದರಾಮಯ್ಯ ಕಳೆದ ಬಾರಿ ಬಾಗಲಕೋಟೆಯ ಬಾದಾಮಿ ಮತ್ತು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ರ್ಪಧಿಸಿದ್ದರು. ಚಾಮುಂಡೇಶ್ವರಿಲ್ಲಿ ಸೋಲು ಕಂಡು, ಬಾದಾಮಿಯಲ್ಲಿ ಅಲ್ಪಮತಗಳಿಂದ ಗೆಲುವು ಕಂಡಿದ್ದರು. ಈ ಬಾರಿ ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬ ಪ್ರಶ್ನೆ ಬಂದಾಗ ಸಿದ್ದರಾಮಯ್ಯ ಕ್ಷೇತ್ರ ಹುಡುಕಾಟದಲ್ಲಿ ತೋಡಗಿದ್ದರು.

ಬಿಜೆಪಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ ಬಣ

ಕೋಲಾರ ಕ್ಷೇತ್ರದಲ್ಲಿ ಕಳೆದ ಬಾರಿ ಜೆಡಿಎಸ್‍ನಿಂದ ಶ್ರೀನಿವಾಸಗೌಡ ಸ್ಪರ್ಧೆ ಮಾಡಿದ್ದರು. ರಾಜಕೀಯ ಸ್ಥಿತ್ಯಂತರದಲ್ಲಿ ಅವರು ಕಾಂಗ್ರೆಸ್‍ನಲ್ಲಿ ಗುರುತಿಸಿಕೊಂಡಿದ್ದು, ಈ ಬಾರಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ಮಾಡಲಿದ್ದಾರೆ.

ಇತ್ತೀಚೆಗೆ ಕೆಲ ಕಾಂಗ್ರೆಸ್ ನಾಯಕರ ಜೊತೆ ಕೋಲಾರಕ್ಕೆ ಭೇಟಿ ನೀಡಿ ಸ್ಥಳೀಯರ ಜೊತೆ ಸಮಾಲೋಚನೆ ನಡೆಸಿದ್ದರು. ದೇವಸ್ಥಾನ, ಮಸೀದಿ, ಚರ್ಚ್‍ಗಳಿಗೆ ಭೇಟಿ ನೀಡಿದ್ದರು. ಆ ವೇಳೆಯಲ್ಲೇ ನಾಮಪತ್ರ ಸಲ್ಲಿಸಲು ಮತ್ತೆ ಬರುವುದಾಗಿ ಹೇಳಿದ್ದರು.

ಈಗ ಬಿಜೆಪಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರು ಸ್ಪರ್ಧಿಸುತ್ತಿರುವುದಾಗಿ ತಿಳಿಸಿದ್ದು ಕೊನೆ ಕ್ಷಣದಲ್ಲಿ ಬದಲಾವಣೆಯಾಗುವ ಸಾಧ್ಯತೆಯೂ ಇದೆ. ಮತ್ತೊಮ್ಮೆ ಸಚಿವರಾಗಿರುವ ಶ್ರೀರಾಮುಲು ಅವರು ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವ ಸಾಧ್ಯತೆ ಹೆಚ್ಚಾಗಿದೆ.

ಚುನಾವಣಾ ಹತ್ತಿರವಾಗುತ್ತಿದ್ದಂತೆಯೇ ರಾಜಕೀಯ ವಲಯದಲ್ಲಿ ಅಚ್ಚರಿಯ ಬೆಳವಣಿಗೆಗಳು ನಡೆಯುತ್ತಿದ್ದು ಈಗ ಕೊನೆಗೂ ಸಿದ್ದರಾಮಯ್ಯನವರ ಕೋಲಾರದಿಂದ ಸ್ಪರ್ಧಿಸುತ್ತಿರುವುದು ಖಚಿತವಾಗಿರುವುದರಿಂದ ಹಿನ್ನಡ ನಾಡು ಕೋಲಾರದಲ್ಲಿ ರಾಜಕೀಯ ರಂಗು ಹೆಚ್ಚಿದೆ.

#Siddaramaiah, #Kolar, #AssemblyElection2023,

Articles You Might Like

Share This Article