“ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ನಾನೂ ಕೂಡ ನೀಡುತ್ತೇನೆ”

Social Share

ಬೆಂಗಳೂರು,ನ.4- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಯಲ್ಲಿ ನಡೆದಿದ್ದ ಶಿಶುಗಳ ಸಾವಿನ ನೈತಿಕ ಹೊಣೆ ಹೊತ್ತು ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಾನು ಕೂಡ ನನ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ದ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸವಾಲು ಹಾಕಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತುಮಕೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲೆಗಳು ಇಲ್ಲದೆ ಚಿಕಿತ್ಸೆ ನೀಡಲು ವೈದ್ಯರು ನಿರಾಕರಿಸಿದ ಹಿನ್ನೆಲೆ ತಾಯಿ ಮತ್ತು ಶಿಶುಗಳು ಸಾವನ್ನಪ್ಪಿರುವುದರಿಂದ ನಾನು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕೆಂದು ಸಿದ್ದರಾಮಯ್ಯನವರು ಹೇಳಿದ್ದಾರೆ.

ಈ ಹಿಂದೆ ಅವರ ಅಧಿಕಾರ ಅವಯಲ್ಲಿ ಎಷ್ಟು ತಾಯಿಂದಿರು, ಶಿಶುಗಳು ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ನಾನು ಅಂಕಿ ಅಂಶಗಳ ದಾಖಲೆ ಕೊಡುವೆ. ಅವರು ನೈತಿಕ ಹೊಣೆ ಹೊತ್ತು ಸಿಎಲ್‍ಪಿ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ನಾನು ಕೂಡ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಮರುಸವಾಲು ಎಸೆದರು.

ಮೈಸೂರು ಭಾಗವೊಂದರಲ್ಲೇ ಎಷ್ಟು ಶಿಶುಗಳು ಈ ರೀತಿ ಸಾವನ್ನಪ್ಪಿವೆ ಎಂಬುವುದನ್ನು ಅವರು ಮರೆತಿರಬೇಕು. ಆಸ್ಪತ್ರೆಗಳಿಗೆ ದಾಖಲಾಗುವ ರೋಗಿಗಳಿಗೆ ಚಿಕಿತ್ಸೆ ಕೊಡಿಸಿ ನಂತರ ಪರಿಶೀಲನೆ ನಡೆಸಬೇಕೆಂದು ಸೂಚಿಸಲಾಗಿದೆ. ಆದರೂ ಕೂಡ ಕೆಲವರು ಈ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಈಗಾಗಲೇ ಇಲಾಖೆ ವತಿಯಿಂದ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಇನ್ನು ಮುಂದೆ ಅವಘಡಗಳು ಮರುಕಳಿಸಿದರೆ ಅವರನ್ನು ಸೇವೆಯಿಂದ ಅಮಾನತುಪಡಿಸಿ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ಸುತ್ತೋಲೆಯಲ್ಲಿ ಸೂಚಿಸಲಾಗಿದೆ ಎಂದರು.

BIG NEWS : ಚಂದ್ರಶೇಖರ್ ಸಾವಿನ ಹಿಂದೆ ಸಂಘಟನೆಯೊಂದರ ವ್ಯವಸ್ಥಿತ ಸಂಚು..!?

ತುಮಕೂರು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರು ಅಕಾರಿಗಳನ್ನು ಸೇವೆಯಿಂದ ಅಮಾನತುಪಡಿಸಿದ್ದೇವೆ.ಅಲ್ಲದೆ ಜಿಲ್ಲಾ ಆಸ್ಪತ್ರೆಯ ಕೆಲವು ಅಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ ಎಂದು ತಿಳಿಸಿದರು.

ಮಗು ಎತ್ತಿಕೊಂಡು ಭಾಷಣ ಮಾಡಿದ ಜಿಲ್ಲಾಧಿಕಾರಿ ಬಗ್ಗೆ ಪರ-ವಿರೋಧ ಚರ್ಚೆ

ಮೃತಪಟ್ಟ ತಾಯಿಗೆ ಒಂದು ಹೆಣ್ಣು ಮಗುವಿದೆ ಎಂಬ ಮಾಹಿತಿ ಇದೆ. ಅದರ ವಿದ್ಯಾಭ್ಯಾಸಕ್ಕಾಗಿ 5 ಲಕ್ಷ ಹಣವನ್ನು ಬ್ಯಾಂಕ್‍ನಲ್ಲಿ ಎಫ್‍ಡಿ ಮಾಡುವುದಾಗಿ ಹೇಳಿದರು.

Articles You Might Like

Share This Article