ಸಿದ್ದರಾಮಯ್ಯ ಹಳೆಯ ವಿಡಿಯೋ ವೈರಲ್, ನೆಟ್ಟಿಗರಿಂದ ಸಿಎಂಗೆ ‘ನೈತಿಕತೆ’ ಪ್ರಶ್ನೆ

ಬೆಂಗಳೂರು,ಸೆ.25- ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ರಾಜೀನಾಮೆಗೆ ಒತ್ತಾಯಿಸಿ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದ ಮಾತು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ಲಾಗಿದೆ. ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಎಫ್‌ಐಆರ್‌ ರದ್ದುಪಡಿಸುವುದಿಲ್ಲ ಎಂದು ಆದೇಶ ನೀಡಿತ್ತು. ಅಂದು ಪ್ರತಿಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯನವರು, ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವುದರಿಂದ ತನಿಖೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಮುಕ್ತ ಮತ್ತು ನಿಕ್ಷಪಾತ ತನಿಖೆ ನಡೆಯಬೇಕಾದರೆ, ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು. … Continue reading ಸಿದ್ದರಾಮಯ್ಯ ಹಳೆಯ ವಿಡಿಯೋ ವೈರಲ್, ನೆಟ್ಟಿಗರಿಂದ ಸಿಎಂಗೆ ‘ನೈತಿಕತೆ’ ಪ್ರಶ್ನೆ