Friday, November 22, 2024
Homeರಾಜ್ಯಬಾಲಗರ್ಭಿಣಿ ಪ್ರಕರಣಗಳ ತಡೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬಾಲಗರ್ಭಿಣಿ ಪ್ರಕರಣಗಳ ತಡೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು,ಜು.9- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ಬಾಲವಿವಾಹ ಮತ್ತು ಬಾಲ ಗರ್ಭಿಣಿಯರ ಪ್ರಕರಣಗಳನ್ನು ಸಂಪೂರ್ಣ ತಡೆಗಟ್ಟಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು.

ವಿಧಾನಸೌಧದಲ್ಲಿಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಎರಡನೇ ದಿನದ ಸಭೆಯಲ್ಲಿ ಮಾತನಾಡಿದ ಅವರು, ಬಾಲತಾಯಂದಿರ ಪ್ರಕರಣಗಳಲ್ಲಿ ದೂರುಗಳು ಬಂದಾಗ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಗರಂ ಆದರು.

ರಾಜ್ಯದಲ್ಲಿ 2022-23ರ ಅವಽಯಲ್ಲಿ 13,477 ಬಾಲ ಗರ್ಭಿಣಿಯರ ಪ್ರಕರಣಗಳು ಪತ್ತೆಯಾಗಿದ್ದು, ಇದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಜಿಲ್ಲಾಽ ಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದರು.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಬಾಲ್ಯವಿವಾಹ ಮೇಲ್ವಿಚಾರಣಾ ಸಮಿತಿಗಳನ್ನು ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾವಲು ಸಮಿತಿಗಳ ಬಲವರ್ಧನೆಗೆ ಅವರು ಖಡಕ್‌ ಸೂಚನೆ ನೀಡಿದರು.

ಅಂಗನವಾಡಿ ನೇಮಕ ಪೂರ್ಣಗೊಳಿಸಿ :
ಅಂಗನವಾಡಿ ಕಾರ್ಯಕರ್ತೆಯರ 4,180 ಹ್ದುೆಗಳು ಹಾಗೂ ಸಹಾಯಕಿಯರ 9,411 ಹ್ದುೆಗಳು ಖಾಲಿಯಿದ್ದು, ನೇಮಕಾತಿ ಪ್ರಕ್ರಿಯೆಯನ್ನು ಡಿಸೆಂಬರ್‌ ಅಂತ್ಯದ ಒಳಗಾಗಿ ಪೂರ್ಣಗೊಳಿಸಬೇಕು.

ನಗರ ಪ್ರದೇಶದಲ್ಲಿ ಸಹಾಯಕಿಯರ ಹ್ದುೆಯ ಗೌರವಧನ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ ಅವರು, ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಬೇಕು ಎಂದರು.

RELATED ARTICLES

Latest News