ತ್ರಿವೇಣಿ ಸಂಗಮದಲ್ಲಿ ಸಿದ್ದೇಶ್ವರ ಶ್ರೀಗಳ ಅಸ್ಥಿ ವಿಸರ್ಜನೆ

Social Share

ಬಾಗಲಕೋಟೆ, ಜ.8- ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರ ಚಿತಾಭಸ್ಮವನ್ನು ಕೃಷ್ಣ, ಮಲಪ್ರಭ, ಘಟಪ್ರಭ ನದಿಗಳ ಸಂಗಮದಲ್ಲಿ ವಿಸರ್ಜನೆ ಮಾಡಲಾಗಿದೆ. ಜನವರಿ 2ರಂದು ನಿಧನರಾದ ಶತಮಾನದ ಸಂತ, ನಡೆದಾಡುವ ದೇವರು, ಜ್ಞಾನಯೋಗಿ ಸಿದ್ದೇಶ್ವರ ಶ್ರೀಗಳ ಅಂತಿಮ ಆಸೆಯಂತೆ ಅವರ ಅಸ್ತಿಯನ್ನು ನದಿಗಳಲ್ಲಿ ವಿಸರ್ಜನೆ ಮಾಡಲಾಯಿತು.

ಜ್ಞಾನ ಯೋಗಾಶ್ರಮದ ಶ್ರೀ ಬಸವಲಿಂಗ ಸ್ವಾಮೀಜಿ ಅವರ ನೇತೃತ್ವದಲ್ಲಿ ಬಾಗಲ ಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಕೂಡಲಸಂಗಮದ ಬಸವಣ್ಣನ ಐಕ್ಯ ಮಂಟಪದ ಬಳಿ ಚಿತಾಭಸ್ಮ ತಂದು ಪೂಜೆ ಸಲ್ಲಿಸಿ ನಂತರ ತ್ರಿವೇಣಿ ಸಂಗಮದಲ್ಲಿ ವಿಸರ್ಜನೆ ಮಾಡಲಾಯಿತು.

ಪಂಚಮಸಾಲಿ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ವಿವಿಧ ಮಠಾೀಶರು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು. ಅಲ್ಲದೆ, ಭಾರೀ ಸಂಖ್ಯೆಯಲ್ಲಿ ಭಕ್ತರು ಕೂಡ ಆಗಮಿಸಿದ್ದರು. ನಂತರ ವಿಶೇಷ ವಾಹನದಲ್ಲಿ ಗೋಕರ್ಣಕ್ಕೆ ತೆರಳಿ ಅಲ್ಲೂ ಕೂಡ ಚಿತಾಭಸ್ಮವನ್ನು ವಿಸರ್ಜನೆ ಮಾಡಲಾಯಿತು.

ವಿಶ್ವಸಂಸ್ಥೆ 2023ನ್ನು ಅಂತಾರಾಷ್ಟ್ರೀಯ ರಾಗಿ ವರ್ಷವೆಂದು ಘೋಷಿಸಿದೆ : ಮೋದಿ

ಈ ಸಂದರ್ಭದಲ್ಲಿ ಮಾತನಾಡಿದ ಶ್ರೀ ಬಸವಲಿಂಗ ಸ್ವಾಮೀಜಿ ಅವರು ಕೂಡಲ ಸಂಗಮದ ಬಗ್ಗೆ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅವರಿಗೆ ಅಪಾರ ಒಲವಿತ್ತು. ಈ ಹಿನ್ನೆಲೆಯಲ್ಲಿ ಅವರ ಚಿತಾಭಸ್ಮವನ್ನು ಸಂಗಮದಲ್ಲಿ ವಿಸರ್ಜನೆ ಮಾಡಿದ್ದೇವೆ. ಶ್ರೀಗಳು ವಿಜಯಪುರದಲ್ಲಿ ಜನಿಸಿದ್ದವರು. ಜಗಜ್ಯೋತಿ ಜತೆ ಜ್ಞಾನಜ್ಯೋತಿಯ ವಿಲೀನವಾಗಿದೆ.

ಅವರ ಇಚ್ಛೆಯಂತೆ ಗೋಕರ್ಣಕ್ಕೆ ತೆರಳಿ ಸಾಗರದಲ್ಲಿ ವಿಸರ್ಜನೆ ಮಾಡುತ್ತೇವೆ ಎಂದು ತಿಳಿಸಿದರು.
ಇದೇ ವೇಳೆ ವಿಜಯಪುರ ಡಿಸಿ ವಿಜಯ್ ಮಹಾಂತೇಶ್ ದಾನಮ್ಮನವರ್ ಮಾತನಾಡಿ, ಶ್ರೀಗಳ ಇಚ್ಛೆಯಂತೆ ನದಿಯಲ್ಲಿ ಚಿತಾಭಸ್ಮವನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಿದರು.

siddeshwara swamiji Bagalkot

Articles You Might Like

Share This Article