ಗ್ಯಾಂಗ್‍ಟಕ್, ಫೆ.11 (ಪಿಟಿಐ) ಸಿಕ್ಕಿಂನ ಗ್ಯಾಂಗ್‍ಟಕ್ ಜಿಲ್ಲೆಯ ರಾಣಿಪೂಲ್‍ನಲ್ಲಿ ಹಾಲಿನ ಟ್ಯಾಂಕರ್‌ವೊಂದು ಜನಸಮೂಹದ ಮೇಲೆ ವೇಗವಾಗಿ ನುಗ್ಗಿದ ಪರಿಣಾಮ ಮೂವರು ಮೃತಪಟ್ಟು 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಂದ ಸುಮಾರು 11 ಕಿಮೀ ದೂರದಲ್ಲಿರುವ ಮೇಳ ಮೈದಾನ ರಾಣಿಪೂಲ್‍ನಲ್ಲಿ ಜನಸಂದಣಿ ತಾಂಬೂಲ ನುಡಿಸಲು ಜಮಾಯಿಸಿತ್ತು ಈ ಸಂದರ್ಭದಲ್ಲಿ ವೇಗವಾಗಿ ಬಂದ ಹಾಲಿನ ಟ್ಯಾಂಕರ್ ಜನ ಸಮೂಹದ ಮೇಲೆ ಪಲ್ಟಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಟ್ಯಾಂಕರ್ ಚಾಲಕನನ್ನು ಬಂಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಘಟನೆಯಲ್ಲಿ ಹಲವಾರು ಮಂದಿ ಗಾಯಗೊಂಡಿದ್ದು, ಗಾಯಗೊಂಡವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಸಿಕ್ಕಿಂ ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಅವರು ರಾಣಿಪೂಲ್‍ನಲ್ಲಿ ಸಂಭವಿಸಿದ ಭೀಕರ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ ಎಂದು ಹೇಳಿದ್ದಾರೆ. ಭೀಕರ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು.
ಶಾಲೆ ಪಠ್ಯದಲ್ಲಿ ಸಂಚಾರಿ ಜಾಗೃತಿ ಅಳವಡಿಸಲು ಸಿದ್ಧತೆ
ಈ ಕಷ್ಟದ ಸಮಯದಲ್ಲಿ ಸಾಧ್ಯವಿರುವ ಎಲ್ಲ ಬೆಂಬಲವನ್ನು ಒದಗಿಸಲು ನಾವು ಬದ್ಧರಾಗಿದ್ದೇವೆ. ನನ್ನ ಆಲೋಚನೆಗಳು ಗಾಯಾಳುಗಳು ಮತ್ತು ಅವರ ಕುಟುಂಬಗಳೊಂದಿಗೆ ಇವೆ, ಮತ್ತು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲು ನಾನು ಪ್ರಾಮಾಣಿಕವಾಗಿ ಪ್ರಾರ್ಥಿಸುತ್ತೇನೆ. ಇದರಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ದುರಂತ, ಮತ್ತು ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ.