Friday, May 3, 2024
Homeರಾಷ್ಟ್ರೀಯಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಸಿಕ್ಕಿಂನಲ್ಲಿ ಮೇಘಸ್ಪೋಟ, 23 ಸೇನಾ ಸಿಬ್ಬಂದಿ ನಾಪತ್ತೆ

ಗ್ಯಾಂಗ್ಟಾಕ್, ಅ. 4 -ಉತ್ತರ ಸಿಕ್ಕಿಂನಲ್ಲಿ ಇಂದು ಮುಂಜಾನೆ ಮೇಘಸ್ಪೋಟದ ಪರಿಣಾಮವಾಗಿ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾಗಿ ಸಮೀಪದ ಲಾಚೆನ್ ಕಣಿವೆಯ ಸೇನಾ ಶಿಬಿರಗಳು ಮತ್ತು ವಾಹನಗಳು ಮುಳುಗಿ 23 ಯೋಧರು ಕೊಚ್ಚಿಕೊಂಡು ಹೋಗಿದ್ದಾರೆ. ಚುಂಗ್‍ತಾಂಗ್ ಅಣೆಕಟ್ಟೆಯಿಂದ ಭಾರೀ ಪ್ರಮಾಣದ ನೀರು ಬಿಟ್ಟ ಪರಿಣಾಮ ಬೆಳಗಿನ ಜಾವ 1.30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ.

ಕಣಿವೆಯುದ್ದಕ್ಕೂ ಇರುವ ಕಟ್ಟಡಗಳು ಕೂಡ ಹಾನಿಯಾಗಿದ್ದು, ಹೆಚ್ಚಿನ ವಿವರಗಳನ್ನು ಖಚಿತಪಡಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ನದಿಯಲ್ಲಿ 15ರಿಂದ 20 ಅಡಿ ಎತ್ತರದವರೆಗೆ ನೀರಿನ ಮಟ್ಟವು ಹಠಾತ್ ಹೆಚ್ಚಳಕ್ಕೆ ಕಾರಣವಾಯಿತು. ಸಿಂಗ್ಟಾಮ್ ಬಳಿಯ ಬರ್ದಂಗ್‍ನಲ್ಲಿ ನಿಲ್ಲಿಸಲಾಗಿದ್ದ ಸೇನಾ ವಾಹನಗಳಿಗೂ ತೊಂದರೆಯಾಗಿದೆ ಎಂದು ತಿಳಿಸಿದ್ದಾರೆ.

ಪ್ರಧಾನಿ ಕರೆ ನೀಡಿದ್ದ ಸ್ವಚ್ಚತಾ ಅಭಿಯಾನದಲ್ಲಿ 8.75 ಕೋಟಿ ಜನ ಭಾಗಿ

23 ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಮತ್ತು 41 ವಾಹನಗಳು ಕೆಸರುಗದ್ದೆಯಲ್ಲಿ ಮುಳುಗಿವೆ ಎಂದು ವರದಿಯಾಗಿದೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ಹೇಳಿದರು. ಈ ನಡುವೆ ಸಿಕ್ಕಿಂನಲ್ಲಿ ಸುಮಾರು 6 ಸೇತುವೆಗಳು, ಹಲವಾರು ರಸ್ತೆಗಳು ಕೊಚ್ಚಿಹೋಗಿದ್ದು, ಕಳೆದ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಏಳು ನಾಗರಿಕರು ಕೂಡ ಮೃತಪಟ್ಟಿದ್ದಾರೆ ಎಂದು ತಿಳಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿ-10 ತೀಸ್ತಾ ನದಿಯ ಪಕ್ಕದಲ್ಲೇ ಹಾದು ಹೋಗುತ್ತಿದ್ದು, ಪ್ರವಾಹಕ್ಕೆ ಸುಮಾರು ಭಾಗ ಕೊಚ್ಚಿಹೋಗಿವೆ ಎಂದು ಸಿಕ್ಕಿಂ ರಾಜ್ಯದ ವಿಪತ್ತು ನಿರ್ವಹಣಾ ಕೇಂದ್ರದ ನಿರ್ದೇಶಕ ಪ್ರಭಾಕರ್ ರೈ ತಿಳಿಸಿದ್ದಾರೆ. ನದಿಯ ನೀರಿನ ಮಟ್ಟ ಏರಿಕೆಯಾಗಿದ್ದ ಹಿನ್ನೆಲೆಯಲ್ಲಿ ಕೆಳಭಾಗದ ಹಲವಾರು ಗ್ರಾಮಗಳಲ್ಲಿ ಪ್ರವಾಹ ಉಂಟಾಗಿದೆ. ಒಂದು ಗಂಟೆಯಲ್ಲಿ 100 ಮಿ.ಮೀ. ಮಳೆ ಸುರಿದಿದೆ ಎಂದು ತಿಳಿಸಿದ್ದಾರೆ.

RELATED ARTICLES

Latest News