ಬೆಂಗಳೂರು,ನ.29-ಸೈಲೆಂಟ್ ಸುನಿಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ತಿಳಿಸಿದ್ದಾರೆ. ಸೈಲೆಂಟ್ ಸುನಿಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ತಿಳಿಸಿದ್ದಾರೆ.
ಗುಜರಾತ್‍ನಲ್ಲಿ ಕಾಂಗ್ರೆಸ್ ಮರಳಿ ಅಧಿಕಾರಕ್ಕೆ: ಖರ್ಗೆ ವಿಶ್ವಾಸ
ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.
ಆಫ್ತಾಬ್ ಪ್ರಕರಣ ಲವ್ ಜಿಹಾದ್ ಅಲ್ಲ: ಓವೈಸಿ
ಬಿಜೆಪಿ, ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
Silent Sunil, BJP, Nalin Kumar Kateel,