Sunday, October 13, 2024
Homeರಾಜ್ಯಎಚ್‌.ಡಿ.ರೇವಣ್ಣ ಜಾಮೀನು ರದ್ದು ಕೋರಿದ್ದ ಎಸ್‌‍ಐಟಿ ಅರ್ಜಿ ವಿಚಾರಣೆ ಮುಂದೂಡಿಕೆ

ಎಚ್‌.ಡಿ.ರೇವಣ್ಣ ಜಾಮೀನು ರದ್ದು ಕೋರಿದ್ದ ಎಸ್‌‍ಐಟಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು, ಮೇ 31- ಮೈಸೂರು ಜಿಲ್ಲೆ ಕೆ.ಆರ್‌.ನಗರ ಮಹಿಳೆ ಅಪಹರಣ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರ ಜಾಮೀನು ರದ್ದು ಕೋರಿ ಎಸ್‌‍ಐಟಿ ಸಲ್ಲಿಸಿದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಏಕಸದಸ್ಯ ಪೀಠ ಮುಂದೂಡಿದೆ.

ರೇವಣ್ಣ ಅವರಿಗೆ ಜಾಮೀನು ನೀಡಿರುವುದು ಸರಿಯಾದ ಕ್ರಮವಲ್ಲ. ಅವರ ಜಾಮೀನನ್ನು ರದ್ದುಪಡಿಸಬೇಕೆಂದು ಎಸ್‌‍ಐಟಿ ಪರ ಸರ್ಕಾರಿ ಅಭಿಯೋಜಕರಾದ ರವಿವರ್ಮ ಕುಮಾರ್‌ ಅವರು ನ್ಯಾಯಾಲಯದ ಮುಂದೆ ವಾದ ಮಂಡಿಸಿದರು.

ಸೆಕ್ಷನ್‌ 364 ಎ ಅನ್ವಯವಾಗಲು ಅಗತ್ಯ ಅಂಶಗಳು ಇಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ಈ ಸೆಕ್ಷನ್‌ ಅನ್ವಯವಾಗುತ್ತದೆ ಎಂದು ಅವರು ವಾದ ಮಂಡಿಸಿದರು. ವಾದ ಆಲಿಸಿದ ನ್ಯಾಯಾಲಯ ಎಚ್‌.ಡಿ.ರೇವಣ್ಣ ಅವರಿಗೆ ನೋಟೀಸ್‌‍ ಜಾರಿಗೊಳಿಸಿ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿದೆ.

RELATED ARTICLES

Latest News