ಬೆಂಗಳೂರು ಜೂ. 5 – ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣದ ತನಿಖೆ ಚುರುಕುಗೊಳಿಸಿರುವ ಎಸ್‌ಐಟಿ ಮತ್ತೆ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದೆ.ಈ ಪ್ರಕರಣದಲ್ಲಿ ನಾಗರಾಜ ಹಾಗೂ ನಾಗೇಶ ಎಂಬುವರನ್ನು ವಶಕ್ಕೆ ಪಡೆಯಲಾಗಿದ್ದು, ಹಗರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಮಾಹಿತಿ ಸಂಗ್ರಹಿಸುತ್ತಿದೆ.
ಹೈದ್ರಾಬಾದ್‌ನ ಕ್ರೆಡಿಟ್ ಕೋ-ಆಪರೇಟಿವ್ ಅಧ್ಯಕ್ಷ ಸತ್ಯನಾರಾಯಣ ಹಾಗೂ ಈಗಾಗಲೇ ಅಮಾನತುಗೊಂಡಿರುವ ನಿಗಮದ ಹಿಂದಿನ ಎಂ.ಡಿ. ಪದನಾಭ ಹಾಗೂ ಅಕೌಂಟೆಂಟ್ ಪರಶುರಾಮರನ್ನು ಬಂಧಿಸಲಾಗಿದೆ.ಈ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಸಂಬಂಧ ಎಸ್‌ಐಟಿ ಹಲವು ಮಾಹಿತಿಗಳನ್ನು ಕಲೆ ಹಾಕಿದೆ.
ಎಂ.ಜಿ. ರಸ್ತೆಯಲ್ಲಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಿಂದ ಹಲವು ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದೆ.