ವಿಚಾರಣೆಗೆ ಹಾಜರಾಗುವಂತೆ ಎಚ್‌.ಡಿ.ರೇವಣ್ಣ ಮತ್ತು ಸುಪುತ್ರ ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್‌

ಹಾಸನ,ಮೇ1- ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಮಾಜಿ ಸಚಿವ ಎಚ್‌.ಡಿ.ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದೆ.ಹೊಳೆನರಸೀಪುರದಲ್ಲಿರುವ ಅವರಿಬ್ಬರ ಮನೆಯ ಬಾಗಿಲಿಗೆ ನೋಟಿಸ್‌ ಪ್ರತಿಯನ್ನು ಅಂಟಿಸಿ ಎಸ್‌ಐಟಿ ತಂಡ ವಾಪಸ್ಸಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಯ ಬಾಗಿಲಿಗೆ ನೋಟಿಸ್‌ನ್ನು ಅಂಟಿಸಲಾಗಿದೆ. ನೋಟಿಸ್‌ನಲ್ಲಿ ತನಿಖೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಸ್ಥಳ ಮಹಜರು ನಡೆಸಲು ಎಸ್‌ಐಟಿ ತಂಡ ದೂರು ನೀಡಿದ ಸಂತ್ರಸ್ತ ಮಹಿಳೆಯೊಂದಿಗೆ … Continue reading ವಿಚಾರಣೆಗೆ ಹಾಜರಾಗುವಂತೆ ಎಚ್‌.ಡಿ.ರೇವಣ್ಣ ಮತ್ತು ಸುಪುತ್ರ ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್‌