Monday, October 14, 2024
Homeರಾಜ್ಯಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳ ದಿಢೀರ್‌ ದಾಳಿ

ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳ ದಿಢೀರ್‌ ದಾಳಿ

SIT officers raid on MLA Munirath's residence

ಬೆಂಗಳೂರು,ಸೆ.28– ಅತ್ಯಾಚಾರ, ಜಾತಿ ನಿಂದನೆ, ಜೀವ ಬೆದರಿಕೆ ಆರೋಪಕ್ಕೆ ಗುರಿಯಾಗಿರುವ ಆರ್‌ಆರ್‌ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರ ನಿವಾಸದ ಮೇಲೆ ಎಸ್‌‍ಐಟಿ ಅಧಿಕಾರಿಗಳು ದಿಢೀರ್‌ ದಾಳಿ ನಡೆಸಿ ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುನಿರತ್ನ ಅವರ ವೈಯಾಲಿ ಕಾವಲ್‌ನಲ್ಲಿರುವ ನಿವಾಸ ಹಾಗೂ ಕಚೇರಿ ಸೇರಿದಂತೆ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ ಎಸಿಪಿ ಕವಿತಾ ನೇತೃತ್ವದ ಎಸ್‌‍ಐಟಿ ತಂಡ ಏಕಕಾಲಕ್ಕೆ ಈ ದಾಳಿ ನಡೆಸಿದೆ.

ಎಫ್‌ಎಸ್‌‍ಎಲ್‌ ತಂಡದೊಂದಿಗೆ ನಡೆಸಿದ ದಾಳಿ ವೇಳೆ ಮುನಿರತ್ನ ಅವರ ನಿವಾಸದಲ್ಲಿದ್ದ ಹಲವಾರು ಮಹತ್ವದ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್‌‍ ಮೂಲಗಳು ತಿಳಿಸಿವೆ.

ಮುನಿರತ್ನ ಅವರು ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚೆಲುವರಾಜು ಎಂಬುವರು ನಗರ ಪೊಲೀಸ್‌‍ ಆಯುಕ್ತ ದಯಾನಂದ್‌ ಅವರಿಗೆ ದೂರು ನೀಡಿದ್ದರೂ. ಈ ಸಂದರ್ಭದಲ್ಲಿ ಮುನಿರತ್ನ ಚೆಲುವರಾಜು ಅವರಿಗೆ ಬಾಯಿಗೆ ಬಂದಂತೆ ಬಯ್ಯುವ ಆಡಿಯೋ ವೈರಲ್‌ ಆಗಿತ್ತು.

ಈ ಬಗ್ಗೆ ಚೆಲುವರಾಜು ಅವರು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದಾರೆ.ಈ ಪ್ರಕರಣದಲ್ಲಿ ಮುನಿರತ್ನ ಅವರು ಜಾಮೀನು ಪಡೆದುಕೊಂಡಿದ್ದಾರೆ. ಬಿಬಿಎಂಪಿಯ ಮಾಜಿ ಸದಸ್ಯ ವೇಲುನಾಯ್ಕರ್‌, ಮುನಿರತ್ನ ಅವರು ಜಾತಿನಿಂದನೆ ಮಾಡಿದ್ದಾರೆ ಎಂದು ವೈಯಾಲಿಕಾವಲ್‌ ಪೊಲೀಸ್‌‍ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಅವರನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.ಈ ಪ್ರಕರಣದಲ್ಲಿ ಮುನಿರತ್ನ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಮಹಿಳೆಯೊಬ್ಬರು ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ ಸಂಚಲನ ಮೂಡಿಸಿದ್ದರು.

ಕಗ್ಗಲಿಪುರ ಪೊಲೀಸ್‌‍ ಠಾಣೆಗೆ ಆಗಮಿಸಿದ ಮಹಿಳೆ ಮುನಿರತ್ನ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಮಾತ್ರವಲ್ಲ, ತಮ ರಾಜಕೀಯ ಎದುರಾಳಿಗಳನ್ನು ಬ್ಲಾಕ್‌ಮೇಲ್‌ ಮಾಡಲು ಹನಿಟ್ರ್ಯಾಫ್‌ ನಡೆಸುತ್ತಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು.

ಈ ವಿಚಾರ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿತ್ತು ಅದೇ ಸಂದರ್ಭದಲ್ಲಿ ಕೆಲವರ ಮೇಲೆ ಹನಿಟ್ರಾಪ್‌ ನಡೆಸಿರುವ ವಿಡಿಯೋಗಳು ವೈರಲ್‌ ಆಗಿದ್ದವು.ಜಾತಿನಿಂದನೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಹೊರಬರುತ್ತಿದ್ದಂತೆ ಮುನಿರತ್ನ ಅವರನ್ನು ಕಗ್ಗಲಿಪುರ ಠಾಣೆ ಪೊಲೀಸರು ಅತ್ಯಾಚಾರ ಪ್ರಕರಣದಲ್ಲಿ ಬಂಧಿಸಿ ವಿಚಾರಣೆಗೊಳಪಡಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದಾಗ ನ್ಯಾಯಾಲಯ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಮುನಿರತ್ನ ಅವರ ವಿರುದ್ಧ ಒಂದೊಂದೆ ಪ್ರಕರಣಗಳು ಹೊರ ಬರುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರ ಎಲ್ಲ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಎಸ್‌‍ಐಟಿ ರಚಿಸಿತ್ತು. ಸಿಐಡಿಯ ವಿಶೇಷ ತನಿಖಾ ದಳದ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ಅವರನ್ನು ತಮ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಇದೀಗ ಪ್ರಕರಣದ ಬೆನ್ನು ಬಿದ್ದಿರುವ ಎಸ್‌‍ಐಟಿ ಅಧಿಕಾರಿಗಳು ಮುನಿರತ್ನ ಅವರ ನಿವಾಸ ಮತ್ತವರ ಸಂಬಂಧಿಕರು, ಸ್ನೇಹಿತರ ಮನೆಗಳ ಮೇಲೂ ದಾಳಿ ನಡೆಸಿ ಹಲವಾರು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡು ಮುಂದಿನ ಕ್ರಮ ಜರುಗಿಸಿದೆ.

RELATED ARTICLES

Latest News