Saturday, July 27, 2024
Homeರಾಜ್ಯಎಸ್‌‍ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಪ್ರಜ್ವಲ್‌ ರೇವಣ್ಣ ಕಕ್ಕಾಬಿಕ್ಕಿ

ಎಸ್‌‍ಐಟಿ ಅಧಿಕಾರಿಗಳ ಪ್ರಶ್ನೆಗಳಿಗೆ ಪ್ರಜ್ವಲ್‌ ರೇವಣ್ಣ ಕಕ್ಕಾಬಿಕ್ಕಿ

ಬೆಂಗಳೂರು,ಜೂ.1- ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌‍ಐಟಿ ವಶದಲ್ಲಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರು ಎಸ್‌‍ಐಟಿ ಅಧಿಕಾರಿಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಬಸವಳಿದು ಹೋಗಿದ್ದಾರೆ.ಹೊಳೆನರಸೀಪುರ ಠಾಣೆಯಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಸ್‌‍ಐಟಿ ಅಧಿಕಾರಿಗಳು ಕೇಳುತ್ತಿರುವ ಪ್ರಶ್ನೆಗಳಿಗೆ ಪ್ರಜ್ವಲ್‌ ರೇವಣ್ಣ ಅವರು ಸುಸ್ತಾಗಿದ್ದಾರೆ.


ನಿಮ ತಾಯಿ ಇಲ್ಲದ ಸಂದರ್ಭದಲ್ಲಿ ಹೊಳೆನರಸೀಪುರದಲ್ಲಿರುವ ಮನೆಗೆ ಏಕೆ ಹೋಗುತ್ತಿದ್ದಿರಿ? ನಿಮ ಮನೆಯಲ್ಲಿ ಕೆಲಸಗಾರರು ಎಷ್ಟು ಮಂದಿ ಇದ್ದಾರೆ? ಅವರನ್ನು ಯಾವ ರೀತಿ ನೋಡುತ್ತಿದ್ದಿರಿ? ಎಂದು ಹಲವು ಪ್ರಶ್ನೆಗಳನ್ನು ಪ್ರಜ್ವಲ್‌ ರೇವಣ್ಣ ಅವರಿಗೆ ಕೇಳಿದ್ದಾರೆ.

ಅಲ್ಲದೆ, ಕೆಲವು ಫೋಟೊಗಳನ್ನು ತೋರಿಸಿ ಇವರು ನಿಮಗೆ ಗೊತ್ತಾ? ಎಂದು ಕೇಳಿದ್ದಾರೆ. ಅದಕ್ಕೆ ಪ್ರಜ್ವಲ್‌ ರೇವಣ್ಣ ಅವರು ಗೊತ್ತಿಲ್ಲ ಹಾಗೂ ನೆನಪಿಲ್ಲ ಎಂದು ಹೇಳಿದ್ದಾರೆ.ಹೊಳೆನರಸೀಪುರ, ಹಾಸನ ತೋಟದ ಮನೆಗಳಲ್ಲಿ ತುಂಬಾ ಜನ ಕೆಲಸದವರಿದ್ದಾರೆ. ಯಾರೆಂಬುದು ಗೊತ್ತಿಲ್ಲ. ಯಾರು ಎಂಬುದು ನೆನಪಿಲ್ಲ ಎಂದು ಉತ್ತರ ನೀಡಿದ್ದಾರೆಂದು ತಿಳಿದುಬಂದಿದೆ.

ನಾನು ಯಾರ ಮೇಲೂ ಲೈಂಗಿದ ದೌರ್ಜನ್ಯವೆಸಗಿಲ್ಲ. ಪೆನ್‌ಡ್ರೈವ್‌ ಪ್ರಕರಣಕ್ಕೂ, ನನಗೂ ಯಾವುದೇ ಸಂಬಂಧವಿಲ್ಲ, ವಿನಾಕಾರಣ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗುತ್ತಿದೆ ಎಂದಿದ್ದಾರೆ.ಅಲ್ಲದೆ, ಇನ್ನೂ ಹಲವು ಪ್ರಶ್ನೆಗಳಿಗೆ ವಕೀಲರನ್ನು ಕೇಳಿ ಉತ್ತರಿಸುವುದಾಗಿ ತಿಳಿಸಿದ್ದಾರೆ. ಏನೇನು ಪ್ರಶ್ನೆಗಳನ್ನು ಕೇಳುತ್ತೀರಿ ಅದಕ್ಕೆಲ್ಲಾ ಉತ್ತರಿಸಲು ಆಗುವುದಿಲ್ಲ ಎಂದು ಕೂಡ ಹೇಳಿದ್ದಾರೆಂದು ತಿಳಿದುಬಂದಿದೆ.

ರಾತ್ರಿ ಪ್ರಜ್ವಲ್‌ ಅವರನ್ನು ವಿಚಾರಣೆ ನಡೆಸಲಾಗಿದೆ. 11.30 ರ ತನಕ ಎಚ್ಚರವಾಗಿದ್ದ ಅವರು ನಂತರ ನಿದ್ರೆಗೆ ಜಾರಿದರು. ಬೆಳಿಗ್ಗೆ ಮತ್ತೆ ಅವರನ್ನು ವಿಚಾರಣೆಗೆ ಒಳಪಡಿಸಲಾಯಿತು. ನಾಳೆ ಅಥವಾ ನಾಡಿದ್ದು ಹೊಳೆನರಸೀಪುರಕ್ಕೆ ಸ್ಥಳ ಮಹಜರಿಗಾಗಿ ಕರೆದೊಯ್ಯುವ ಸಾಧ್ಯತೆ ಇದೆ.

ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಆರೋಪ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಪ್ರಜ್ವಲ್‌ ರೇವಣ್ಣ ಅವರು ಭಾರತಕ್ಕೆ ಆಗಮಿಸುತ್ತಿದ್ದಂತೆ ಬಂಧಿಸಿದ್ದ ಎಸ್‌‍ಐಟಿ ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರು ದಿನಗಳ ಕಾಲ ಎಸ್‌‍ಐಟಿ ವಶಕ್ಕೆ ನೀಡಿದ್ದರು.ಪ್ರಜ್ವಲ್‌ ರೇವಣ್ಣ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ಹಾಗೂ ಸಿಐಡಿ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿದೆ.

RELATED ARTICLES

Latest News