ಫರಿದಾಬಾದ್ : ಭೀಕರ ರಸ್ತೆ ಅಪಘಾತದಲ್ಲಿ 6 ಜನ ಸಾವು

Social Share

ಫರಿದಾಬಾದ್, ಮಾ.3 – ವೇಗವಾಗಿ ಬಂದ ಡಂಪರ್‍ವೊಂದು ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ಫರಿದಾಬಾದ್- ಗುರುಗ್ರಾಮ್ ರಸ್ತೆಯಲ್ಲಿ ನಡೆದಿದೆ. ನಿನ್ನೆ ತಡ ರಾತ್ರಿ ಮಣ್‍ಗರ್ ಚೆಕ್‍ಪೋಸ್ಟ್ ಬಳಿ ಅಪಘಾತ ನಡೆದಿದ್ದು, ಕಾರಿನಲ್ಲಿದ್ದ 6 ಜನರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಸಹವಾಸ ಸಾಕು ; ದೀದಿ

ಮೃತರನ್ನು ಪಲ್ವಾರ್ ನಿವಾಸಿಗಳಾದ ಜತೀನ್, ಆಕಾಶ್, ಸಂದೀಪ್, ಬಲ್ಜಿತ್ ಮತ್ತು ವಿಶಾಲ್ ಎಂದು ಗುರುತಿಸಲಾಗಿದೆ. ಇವರು ತಮ್ಮ ಮಾರುತಿ ಆಲ್ಟೋ ಕಾರ್‍ನಲ್ಲಿ ಗುರುಗ್ರಾಮದಿಂದ ಫರಿದಾಬಾದ್‍ಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ತಂದೆಯಿಂದ ಲೈಂಗಿಕ ಕಿರುಕುಳ: ಮನನೊಂದ ಬಾಲಕಿ ಆತ್ಮಹತ್ಯೆ

ಮೃತರನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು, ಡಂಪರ್ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

Six, dead, road, accident, Faridabad,

Articles You Might Like

Share This Article