ಕುಲ್ಲು ಮಾ.31- ಹಿಮಾಚಲಪ್ರದೇಶದ ಕುಲುವಿನ ಗುರುದ್ವಾರ ಮಣಿಕರಣ್ ಸಾಹಿಬ್ ಎದುರಿನ ಪಿಡಬ್ಲ್ಯೂಡಿ ರಸ್ತೆಯ ಬಳಿ ಸಂಭವಿಸಿದ ಭೂಕುಸಿತದಲ್ಲಿ ಮೂವರು ಮಹಿಳೆಯರು ಸೇರಿ ಆರು ಜನ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಸಮೀಪದಲ್ಲೇ ಇದ್ದ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನಾ ಸ್ಥಳದಲ್ಲಿ ಜಿಲ್ಲಾಡಳಿತದ ಪೊಲೀಸರು ಮತ್ತು ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿವೆ.
ಮಣಿಕರಣ್ ಗುರುದ್ವಾರದ ಬೆಟ್ಟದ ಮುಂಭಾಗದಲ್ಲಿರುವ ರಸ್ತೆಯ ಬಳಿ ಬಿರುಗಾಳಿಯಿಂದಾಗಿ ಮರವೊಂದು ಉರುಳಿಬಿತ್ತು. ಮಾಹಿತಿಯ ಪ್ರಕಾರ, ರಸ್ತೆಬದಿಯ ವ್ಯಾಪಾರಿ, ಕಾರು ಸವಾರ ಮತ್ತು ಸ್ಥಳದಲ್ಲಿದ್ದ ಮೂವರು ಪ್ರವಾಸಿಗರು ಮೃತಪಟ್ಟಿದ್ದಾರೆ.ಮಣಿಕರಣ್ 1,829 ಮೀಟರ್ ಎತ್ತರದಲ್ಲಿದೆ ಮತ್ತು ಕುಲ್ಲುವಿನಿಂದ ಸುಮಾರು 40ಕಿ.ಮೀ ದೂರದಲ್ಲಿದೆ. ಅದೇ ವೀಡಿಯೋದಲ್ಲಿ, ಶರ್ಟ್ ಮೇಲೆ ರಕ್ತದ ಕಲೆಗಳಿದ್ದ ಮಹಿಳೆಯನ್ನು ಒಬ್ಬ ವ್ಯಕ್ತಿ ಎತ್ತಿಕೊಂಡು ಹೋಗುತ್ತಿರುವುದು ಕಂಡುಬಂದಿದೆ.
ಸಂಜೆ 5 ಗಂಟೆ ಸುಮಾರಿಗೆ ರಸ್ತೆಯ ಅಂಚಿನಲ್ಲಿ ಕುಳಿತಿದ್ದ ಜನರು ದೊಡ್ಡ ಮರವೊಂದು ಉರುಳಿ ಬಿದ್ದ ಪರಿಣಾಮ ನಲುಗಿ ಸಾವನ್ನಪ್ಪಿದರು. ಗಾಯಾಳುಗಳನ್ನು ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ಜಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿಯ ಪ್ರಕಾರ, ರಸ್ತೆಬದಿಯ ವ್ಯಾಪಾರಿ, ಕಾರು ಸವಾರ ಮತ್ತು ಸ್ಥಳದಲ್ಲಿದ್ದ ಮೂವರು ಪ್ರವಾಸಿಗರು ಸತ್ತವರಲ್ಲಿ ಸೇರಿದ್ದಾರೆ.
ಎಎಚ್ ಒ ಮಣಿಕರಣ್ ನೇತೃತ್ವದ ಪೊಲೀಸ್ ತಂಡ ಸ್ಥಳದಲ್ಲಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಮುಂದುವರೆಸಿದೆ ಎಂದು ಜಿಲ್ಲಾಧಿಕಾರಿ ಅಶ್ವನಿ ಕುಮಾರ್ ತಿಳಿಸಿದ್ದಾರೆ.ಹಿಮಾಚಲ ಪ್ರದೇಶದ ನಾಲ್ಕು ಜಿಲ್ಲೆಗಳಲ್ಲಿ ಮಿಂಚು ಮತ್ತು ಬಿರುಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿತ್ತು. ಚಂಬಾ, ಕಾಂಗ್ರಾ, ಕುಲು ಮತ್ತು ಮಂಡಿ ಜಿಲ್ಲೆಗಳಲ್ಲಿ ಮಿಂಚು ಮತ್ತು ಬಿರುಗಾಳಿಯೊಂದಿಗೆ (ಗಂಟೆಗೆ 40-50 ಕಿ.ಮೀ) ಗುಡುಗು ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿತ್ತು.
ಘಟನೆ ಬಗ್ಗೆ ಟ್ವಿಟ್ ಮಾಡಿರುವ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು, ಭೂಕುಸಿತದಿಂದ ಮೃತಪಟ್ಟವರಿಗೆ ಸಂತಾಪ ಸೂಚಿಸಿ,ಮೃತಪಟ್ಟ ಕುಟುಂಬಗಳಿಗೆ ಮತ್ತು ಗಾಯಾಳುಗಳಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುವಂತೆ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ವಿರೋಧ ಪಕ್ಷದ ನಾಯಕ ಜೈ ರಾಮ್ ಠಾಕೂರ್ ಕೂಡ ಸಂತಾಪ ಸೂಚಿಸಿದ್ದಾರೆ.