ಚೆನ್ನೈ,ಜ. 4- ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿ ಆರು ಕಾರ್ಮಿಕರು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ಸಂಭವಿಸಿದೆ.ತಮಿಳುನಾಡಿನ ವಿರುದುನಗರದಲ್ಲಿರುವ ಪಟಾಕಿ ತಯಾರಿಕಾ ಘಟಕದಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಸಾಯನಿಕಗಳನ್ನು ಬೆರೆಸುವ ಪ್ರಕ್ರಿಯೆಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಸ್ಫೋಟವು ಕನಿಷ್ಠ ನಾಲ್ಕು ಕೊಠಡಿಗಳನ್ನು ನೆಲಸಮಗೊಳಿಸಿದೆ ಮತ್ತು ಸಾವುನೋವುಗಳಿಗೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಸ್ಫೋಟದ ಕಾರಣ ಮತ್ತು ಹಾನಿಯ ಪ್ರಮಾಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.