ನಾಗ್ಪುರ, ಡಿ.1 – ವಿದ್ಯಾರ್ಥಿಗೆ ರ‍್ಯಾಗಿಂಗ್ ಮಾಡಿದ ಆರೋಪದ ಮೇಲೆ ನಾಗ್ಪುರದ ಸರ್ಕಾರಿ ವೈದ್ಯಕೀಯ ಕಾಲೇಜಿನ ಆರು ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಲಾಗಿದೆ.
ಮಹಾರಾಷ್ಟ್ರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಎಂಬಿಬಿಎಸ್ ಕೋರ್ಸ್‍ನ ಮೊದಲ ವರ್ಷದ ವಿದ್ಯಾರ್ಥಿಯನ್ನು ಅಮಾನವೀಯವಾಗಿ ಹಿರಿಯ ವಿದ್ಯಾರ್ಥಿಗಲು ರ‍್ಯಾಗಿಂಗ್ ಮಾಡಿದ್ದರು ಇದರ ವೀಡಿಯೊ ವೈರಲ್ ಆಗಿತ್ತು.
ಆರು ತಿಂಗಳ ಹಿಂದೆ ನಡೆದಿದ್ದ ಕೃತ್ಯದ ಬಗ್ಗೆ ಕೇಂದ್ರೀಯ ರ‍್ಯಾಗಿಂಗ್ ವಿರೋಧಿ ಸಮಿತಿಗೆ ಕಳುಹಿಸಲಾಗಿತ್ತ. ಪ್ರಸ್ತುತ ಆರೋಪಿತ ವಿದ್ಯಾರ್ಥಿಗಳು ಇಂಟರ್ನ್‍ಶಿಪ್ ಪಡೆಯುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಿಬಿಎಂಪಿ ಮುಖ್ಯ ಆಯುಕ್ತರ ತಲೆದಂಡವಾದರೆ ಉಗ್ರ ಹೋರಾಟ ಎಚ್ಚರಿಕೆ
ಕಾಲೇಜಿನ ಡೀನ್ ಡಾ ರಾಜ್ ಗಜ್ಭಿಯೆ ಅವರು ವಿದ್ಯಾರ್ಥಿಗಳ ಇಂಟರ್ನ್‍ಶಿಪ್ ರದ್ದು ಪಡೆಸಿ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ ಮತ್ತು ಹಾಸ್ಟೆಲ್ ಖಾಲಿ ಮಾಡುವಂತೆ ಸೂಚಿಸಿದ್ದಾರೆ.
ಕೊವಿಡ್ ಲಸಿಕೆಯನ್ನು ಮೋದಿ ಲಸಿಕೆ ಎಂದು ಕಾಂಗ್ರೆಸ್ ಟೀಕಿಸಿತ್ತು : ಅಮಿತ್ ಶಾ
ಕಾಲೇಜಿನ ರ್ಯಾಗಿಂಗ್ ವಿರೋಧಿ ಸಮಿತಿಯು ಅಜ್ನಿ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದೆ ಆದರೆ ಇನ್ನೂ ಯಾವುದೇ ಪ್ರಥಮ ಮಾಹಿತಿ ವರದಿಯನ್ನು ದಾಖಲಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿದ್ದಾರೆ. ಪೊಲೀಸರು ಕಾಲೇಜು ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಕೇಳಿದ್ದಾರೆ
ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಕೂಡ ಘಟನೆಯ ಕುರಿತು ವರದಿ ಸಲ್ಲಿಸುವಂತೆ ಕಾಲೇಜು ಅಧಿಕಾರಿಗಳಿಗೆ ಸೂಚಿಸಿದೆ.
Six, Medical, College, Students, Suspended, Ragging,