ಟೈಲ್ಸ್ ಕೆಲಸಗಾರನ ಕೊಲೆ, 6 ಮಂದಿ ಆರೋಪಿಗಳು ಅರೆಸ್ಟ್

Spread the love

ಬೆಂಗಳೂರು,ಜು.8- ಡಿ.ಜೆ.ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಟೈಲ್ಸ್ ಕೆಲಸಗಾರನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಅಂಥೋಣಿ, ದೀನು, ಅಜಯ್, ಶಿವಕುಮಾರ್, ಸ್ಟೀಫನ್ ಮತ್ತು ಅರುಣ್ ಬಂಧಿತ ಆರೋಪಿಗಳು.

ಜು.2ರಂದು ರಾತ್ರಿ 10 ಗಂಟೆ ಸುಮಾರಿಗೆ ಕೃಷ್ಣಮೂರ್ತಿ ಶಾಂಪುರ ರಸ್ತೆಯಲ್ಲಿ ಸ್ನೇಹಿತನ ಮನೆಗೆ ಕೇರಂ ಆಡಲು ಹೋಗುತ್ತಿದ್ದರು. ಆ ಸಂದರ್ಭದಲ್ಲಿ ಐದಾರು ಮಂದಿ ದುಷ್ಕರ್ಮಿಗಳು ಇವರನ್ನು ಹಿಂಬಾಲಿಸಿಕೊಂಡು ಹೋಗಿ ಮಾರಕಾಸ್ತ್ರದಿಂದ ಮನಬಂದಂತೆ ಅಲ್ಲೆ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದರು.

ಈ ಬಗ್ಗೆ ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದ ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಆರು ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಕೃಷ್ಣಮೂರ್ತಿ ಅವರಿಗೆ ಇಬ್ಬರು ಪತ್ನಿಯರು. ಎರಡನೇ ಪತ್ನಿ ಜತೆ ಆಗಾಗೆ ಜಗಳವಾಡಿ ಹೊಡೆಯುತ್ತಿದ್ದ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಈತನ ಎರಡನೇ ಪತ್ನಿಯೇ ಸುಪಾರಿ ಕೊಟ್ಟು ಕೊಲೆ ಮಾಡಲು ಹೇಳಿದರು ಎಂದು ಆರೋಪಿಗಳು ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಬಗ್ಗೆ ಮುಂದಿನ ತನಿಖೆ ಪ್ರಗತಿಯಲ್ಲಿದೆ.

Facebook Comments