ಚಿಕ್ಕಬಳ್ಳಾಪುರ, ಡಿ.11- `ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ಸಂಪುಟದಲ್ಲಿ ವಿವಿಧ ಹುದ್ದೆಗಳು ಸೇರಿದಂತೆ ವಿದೇಶಾಂಗ ಸಚಿವರಾಗಿ, ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರು ಅಜಾತಶತ್ರುಗಳಾಗಿ ಅವರ ದೂರದರ್ಶಿತ್ವ , ಶಿಸ್ತು ಬದ್ಧ ಜೀವನ ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದ್ಯೋನುಖ ಪ್ರತಿಭೆ ಇಟ್ಟು ಇನ್ನಿತರ ರಾಜಕಾರಣಿಗಳಿಗೆ ಮಾದರಿಯಾಗಿದ್ದರು ಅವರನ್ನ ಕಳೆದುಕೊಂಡ ಈ ನಾಡು ರಾಜಕೀಯವಾಗಿ ಬರಿದಾಗಿದೆ ‘ ಎಂದು ಕಾಂಗ್ರೆಸ್ ಮುಖಂಡ ಹಾಗೂ ಒಕ್ಕಲಿಗರ ಸಂಘದ ರಾಜ್ಯ ನಿರ್ದೇಶಕ ಯಲುವಳ್ಳಿ ಎನ್.ರಮೇಶ್ ತಿಳಿಸಿದರು.
ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಷ್ಟ್ರ ರಾಜ್ಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ ಎಸ್.ಎಂ.ಕೃಷ್ಣ ಅವರ ನಿಧನದಿಂದ ನಾಡು ಒಬ್ಬ ಶ್ರೇಷ್ಠ ನಾಯಕನನ್ನು ಕಳೆದುಕೊಂಡಿದೆ, ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಮಹಾರಾಷ್ಟ್ರದ ರಾಜ್ಯಪಾಲರಾಗಿ ಅವರು ಸಲ್ಲಿಸಿದ ಸೇವೆ ಅಪಾರವಾದುದು, ಕೇಂದ್ರ ಸಚಿವ ಸಂಪುಟದಲ್ಲಿ ವಿವಿಧ ಹುದ್ದೆಗಳೊಂದಿಗೆ ಮಹತ್ವದ ವಿದೇಶಾಂಗ ಖಾತೆಯನ್ನು ಸಮರ್ಥವಾಗಿ ನಿಭಾಯಿಸಿದ ಎಸ್.ಎಂ.ಕೃಷ್ಣ ಅವರು ನಾಲ್ಕು ತಲೆಮಾರಿನ ರಾಜಕಾರಣದ ಬಹುದೊಡ್ಡ ಕೊಂಡಿಯಾಗಿದ್ದರು ಎಂದು ಪ್ರಕಟಣೆಯಲ್ಲಿ ವಿವರಿಸಿದ್ದಾರೆ.
ಈ ದೇಶ ಕಂಡ ಅಪ್ರತಿಮ ಹಾಗೂ ಅತ್ಯುತ್ತಮ ಆಡಳಿತಗಾರ ಅಭಿವೃದ್ಧಿಯ ಹರಿಕಾರ, ಅಜಾತಶತ್ರು ಹಾಗೂ ಐಟಿಬಿಟಿಯ ಸಂಸ್ಥಾಪಕ ಎಂಬ ಹೆಗ್ಗಳಿಕೆ ಪಡೆದುಕೊಂಡ ಅವರ ನಿಧನವು ದೇಶಕ್ಕೆ ಅಪಾರ ನಷ್ಟ ಉಂಟಾಗಿದೆ ಎಂದು ಅವರು ಹೇಳಿದರು.
ನಾನು ಈ ಹಿಂದೆ ಎರಡು ಬಾರಿ ಎಸ್ಎಂ ಕೃಷ್ಣ ಅವರನ್ನ ಭೇಟಿ ಮಾಡಿ ಚಿಕ್ಕಬಳ್ಳಾಪುರವನ್ನ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲೆ ಆಗಬೇಕೆಂದು 1999-2000 ವರ್ಷದಲ್ಲಿ ಚಿಕ್ಕಬಳ್ಳಾಪುರಕ್ಕೆ ಎಸ್.ಎಂ.ಕೃಷ್ಣ ಬಂದಿದ್ದ ಸಂದರ್ಭದಲ್ಲಿ ಮನವಿ ಮಾಡಿಕೊಂಡಿದ್ದೆ. ಆಗ ಅವರು ಆಗ ಸಕಾರಾತಕವಾಗಿ ಸ್ಪಂದಿಸಿ ಡಿ ಲಿಮಿಟೇಶನ್ ಇಲ್ಲದಿದ್ದರೆ ಈಗಲೇ ಚಿಕ್ಕಬಳ್ಳಾಪುರವನ್ನ ನೂತನ ಜಿಲ್ಲೆಯನ್ನಾಗಿ ಮಾಡಲು ಸಿದ್ಧನಿದ್ದೆ ಎಂದು ತಿಳಿಸಿದ್ದರು ಎಂಬುದರ ಬಗ್ಗೆ ಸರಿಸಿಕೊಂಡರು.
ಅವರು ಎರಡನೇ ಬಾರಿ ಎಸ್.ಎಂ.ಕೃಷ್ಣ ಅವರು ಕೇಂದ್ರದಲ್ಲಿ ವಿದೇಶಾಂಗ ಸಚಿವರಾಗಿದ್ದಾಗ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭು ಕೆಂಪೇಗೌಡ ಅವರ ಹೆಸರನ್ನ ನಾಮಕರಣ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾಗ ಅವರು ಸಕಾರಾತಕವಾಗಿ ಸ್ಪಂದಿಸಿದ್ದರು ಅಂತಹ ಗುಣವಂತರಾಗಿದ್ದ ಎಸ್.ಎಂ.ಕೃಷ್ಣ ಅವರ ಆತಕ್ಕೆ ಶಾಂತಿ ಸಿಗಲಿ ಹಾಗೂ ಅಗಲಿಕೆ ನೋವು ತಡೆಯುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಬಂಧು ಬಳಗಕ್ಕೆ ದಯಪಾಲಿಸಲಿ ಎಂದು ತಮ ಸಂತಾಪದ ಹೇಳಿಕೆಯಲ್ಲಿ ತಿಳಿಸಿದ್ದಾರೆ.