ಮಧ್ಯರಾತ್ರಿ ಕಾಮಗಾರಿ ಪರಿಶೀಲನೆ

ಬೆಂಗಳೂರು, ಏ.28- ಸ್ಮಾರ್ಟ್ ಸಿಟಿ ಯೋಜನೆಯಡಿ ಪ್ರಗತಿಯಲ್ಲಿರುವ ಬೆಂಗಳೂರು ನಗರದ ಅವಿನ್ಯೂ ರಸ್ತೆಯ ಕಾಮಗಾರಿಗಳನ್ನು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಮುಖ್ಯಸ್ಥ ರಾಕೇಶ್ ಸಿಂಗ್ ಅವರು ಮಧ್ಯರಾತ್ರಿ ಪರಿಶೀಲಿಸಿದರು.

ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳೂ ಆಗಿರುವ ರಾಕೇಶ್ ಸಿಂಗ್ ಅವರು ಬೆಳಗಿನ ಜಾವ 1.30ರ ಸಮಯದಲ್ಲಿ ಅವೆನ್ಯೂ ರಸ್ತೆಗೆ ಹಠಾತ್ ಭೇಟಿ ನೀಡಿ ಕಾಮಗಾರಿಗಳನ್ನು ಖುದ್ದು ಪರಿಶೀಲಿಸಿದರು.

ಸ್ಮಾರ್ಟ್ ಸಿಟಿ ಕಾಮಗಾರಿಗಳು ವೇಗವಾಗಿ ನಡೆಯುತ್ತಿದ್ದು, ನಾಗರಿಕರ ದೈನಂದಿನ ವ್ಯಾಪಾರ, ವಹಿವಾಟಿಗೆ ತೊಂದರೆ ಆಗದ ರೀತಿಯಲ್ಲಿ ತ್ವರಿತವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್‍ನ ಅಧಿಕಾರಿಗಳು ಹಾಜರಿದ್ದರು.