ಬೆಂಗಳೂರು,ಆ.6- ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಸಂಪೂರ್ಣ ಕಾನೂನು ಬಾಹಿರವಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ಅಧ್ಯಕ್ಷರೂ ಆದ ಇಂಧನ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.
ತಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸಬೇಕೆಂದು ಸಚಿವ ಜಾರ್ಜ್ ಪರ ವಕೀಲ ಸಿ.ವಿ.ನಾಗೇಶ್ ಮತ್ತು ವಿಕ್ರಮ ವೀಲುಗೋಳ ಅವರು ಹೈಕೋರ್ಟ್‌ನಲ್ಲಿ ಮೇಲನವಿ ಅರ್ಜಿ ಸಲ್ಲಿಸಿ ದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ.ಅರುಣ್ ಅವರ ಏಕಸದಸ್ಯ ಪೀಠ ಎಫ್‌ಐಆರ್‌ಗೆ ತಡೆಯಾಜ್ಞೆ ನೀಡಿ ಆದೇಶಿಸಿತ್ತು. ನಾವು ಪ್ರಕರಣದ ಮೆರಿಟ್ ಮೇಲೆ ವಾದಿಸುತ್ತಿಲ್ಲ. ಲೋಕಾಯುಕ್ತ ಎಸ್‌ಪಿ ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಬೇಕೆಂದು ವಿಶೇಷ ನ್ಯಾಯಾಲಯ ಆದೇಶ ನೀಡಿದೆ ಎಂಬುದನ್ನು ನ್ಯಾಯಮೂರ್ತಿಗಳ ಗಮನಕ್ಕೆ ತಂದರು.
ಸಿಆರ್‌ಪಿಸಿ 175ರಡಿ ಅವಕಾಶವಿಲ್ಲ. ಹೀಗಾಗಿ ಎಫ್‌ಐಆರ್ ರದ್ದುಪಡಿಸಬೇಕೆಂದು ಕೋರಿದರು. ದೂರದಾರರ ಪರ ವಕೀಲರಾದ ಲಕ್ಷ್ಮಿ ಅಯ್ಯಂಗರ್ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ತಡೆಯಾಜ್ಞೆ ನೀಡಿ, ಮುಂದಿನ ವಿಚಾರಣೆಯನ್ನು ಎರಡು ದಿನಗಳ ಕಾಲ ಮುಂದೂಡಿತು.
ಒಂದು ರಾಜಕೀಯ ಪಕ್ಷ ಮತ್ತೊಂದು ರಾಜಕೀಯ ಪಕ್ಷದ ವಿರುದ್ದ ಪ್ರಕರಣ ದಾಖಲಿಸುವ ಸಂಸ್ಕೃತಿ ತಮಿಳುನಾಡಿನಲ್ಲಿ ಪ್ರಚಲಿತವಾಗಿತ್ತು. ಆದರೆ ಈ ಸಂಸ್ಕೃತಿ ಕರ್ನಾಟಕದಲ್ಲೂ ಪ್ರಾರಂಭ ವಾಗಿದೆ ಎಂದು ನ್ಯಾಯಾಧೀಶರು ಪರೋಕ್ಷವಾಗಿ ಎರಡೂ ಕಡೆಯವರಿಗೂ ಚಾಟಿ ಬೀಸಿದರು.
ಏನಿದು ಪ್ರಕರಣ: ಆರೋಪಕ್ಕೆ ಸಂಬಂಧಿಸಿದ ಖಾಸಗಿ ದೂರಿನ ವಿಚಾರಣೆ ನಡೆಸುತ್ತಿರುವ ಶಾಸಕರುಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ ಭಟ್ ಈ ಕುರಿತಂತೆ ಆದೇಶಿಸಿದ್ದರು.
ಆರೋಪಿಗಳ ವಿರುದ್ಧದ ದೂರಿನ ಕುರಿತಾದ ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿ ಎಂದು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶಿಸಿರುವ ನ್ಯಾಯಾಧೀಶರು ವಿಚಾರಣೆ ಯನ್ನು ಆಗಸ್ಟ್ 11ಕ್ಕೆ ಮುಂದೂಡಿದ್ದರು.
ದೂರಿನಲ್ಲಿ ಸಚಿವ ಕೆ.ಜೆ.ಜಾರ್ಜ್, ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ, ಬೆಸ್ಕಾಂ ಮಾಜಿ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಬೆಸ್ಕಾಂನ ತಾಂತ್ರಿಕ ನಿರ್ದೇಶಕ ಎಚ್.ಜೆ.ರಮೇಶ್ ಅವರನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.
ಬಿಜೆಪಿಯ ಶಾಸಕ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಶಾಸಕರಾದ ಎಸ್.ಆರ್.ವಿಶ್ವನಾಥ್ ಹಾಗೂ ಧೀರಜ್ ಮುನಿರಾಜು ಈ ಖಾಸಗಿ ದೂರು ಸಲ್ಲಿಸಿದ್ದರು. ಇಂಧನ ಇಲಾಖೆಯಲ್ಲಿ ಸಾರ್ಟ್ ಮೀಟರ್ ಗುತ್ತಿಗೆ ನೀಡಿಕೆಯಲ್ಲಿ ಕೋಟ್ಯಂತರ ರೂ. ಅಕ್ರಮ ನಡೆದಿದೆ ಎಂದು ಆರೋಪಿಸಿದ ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಮತ್ತಿತರ ಬಿಜೆಪಿ ಮುಖಂಡರು ತನಿಖೆ ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಅರ್ಜಿ ಪುರಸ್ಕರಿಸಿದ್ದ ನ್ಯಾಯಾಲಯವು, ಸಚಿವ ಜಾರ್ಜ್ ಹಾಗೂ ಇತರರ ವಿರುದ್ಧ ಖಾಸಗಿ ದೂರು ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ. ರಾಜ್ಯದಲ್ಲಿ ಸಾರ್ಟ್ ಮೀಟರ್ ಅಳವಡಿಕೆಗೆ ಕಾನೂನುಬಾಹಿರವಾಗಿ ದಾವಣಗೆರೆ ಜಿಲ್ಲೆಯ ರಾಜಶ್ರೀ ಎಲೆಕ್ಟ್ರಿಕಲ್‌್ಸ ಶೆಲ್ ಕಂಪನಿಗೆ ಇಂಧನ ಇಲಾಖೆಗೆ ಗುತ್ತಿಗೆ ನೀಡಿದೆ. ಈ ಗುತ್ತಿಗೆ ನೀಡಿಕೆಯಲ್ಲಿ ಕೋಟ್ಯಾಂತರ ರುಪಾಯಿ ಮೊತ್ತದ ಕಿಕ್ ಬ್ಯಾಕ್‌ನ್ನು ಸಚಿವರು ಪಡೆದಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು.
- ವೋಟ್ ಚೋರಿ ಆರೋಪ : ಸಹಿ ಸಮೇತ ಮಾಹಿತಿ ನೀಡುವಂತೆ ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸೂಚನೆ
- ಒಳಮೀಸಲಾತಿ ಕುರಿತು ಆ.16ರಂದು ವಿಶೇಷ ಸಚಿವ ಸಂಪುಟ ಸಭೆ
- ಟ್ರಂಪ್ನಿಂದ ಆರ್ಥಿಕ ಬ್ಲ್ಯಾಕ್ಮೇಲ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
- ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಮನೆ ಮೇಲೆ ಇಡಿ ದಾಳಿ
- ಡಿಸಿಎಂ ಡಿಕೆಶಿ ಚಲಾಯಿಸಿದ್ದ ದ್ವಿಚಕ್ರ ವಾಹನದ ಮೇಲಿದ್ದ ದಂಡ ಪಾವತಿ