Friday, December 27, 2024
Homeರಾಜ್ಯಉಭಯ ಸದನಗಳಲ್ಲಿ ಎಸ್ಎಂಕೆ ಗುಣಗಾನ

ಉಭಯ ಸದನಗಳಲ್ಲಿ ಎಸ್ಎಂಕೆ ಗುಣಗಾನ

SMK praised in both houses

ಬೆಂಗಳೂರು,ಡಿ.10– ಇಂದು ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ವಿಧಾನ ಪರಿಷತ್ ಮತ್ತು ವಿಧಾನಸಭೆಯಲ್ಲಿ ಭಾವುಪೂರ್ಣ ಶ್ರದ್ಧಾಂಜಲಿ ಸಲ್ಲಿಸಿ, ಮೃತರ ಸಾಧನೆಗಳನ್ನು ಕೊಂಡಾಡಿದ ಸದಸ್ಯರು ಅವರ ಸಲ್ಲಿಸಿದ ಸೇವೆಯ ಬಗ್ಗೆ ಗುಣಗಾನ ಮಾಡಿದರು.

ಶ್ರೇಷ್ಠ ಸಂಸದೀಯ ಪಟು ಕಳೆದುಕೊಂಡ ರಾಜ್ಯ: ಮೇಲನೆಯಲ್ಲಿ ಕಂಬನಿ
ಬೆಳಗಾವಿ,ಡಿ.10- ಪದ ವಿಭೂಷಣ ಪ್ರಶಸ್ತಿ ಪುರಸ್ಕೃತ ಕೇಂದ್ರದ ಮಾಜಿ ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ ಹಿರಿಯ ಮುತ್ಸದ್ಧಿ ಎಸ್.ಎಂ.ಕೃಷ್ಣ ಅವರ ನಿಧನಕ್ಕೆ ವಿಧಾನಪರಿಷತ್ನಲ್ಲಿ ಭಾವಪೂರ್ಣ ಸಂತಾಪ ಸೂಚಿಸಲಾಯಿತು.

ನಿಗದಿತ ಸಮಯಕ್ಕಿಂತಲೂ ವಿಳಂಬವಾಗಿ ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರು ಸದನ ಪ್ರಾರಂಭವಾಗುತ್ತಿದ್ದಂತೆ ಸಂತಾಪ ನಿರ್ಣಯವನ್ನು ಮಂಡಿಸಿದರು.

ನಂತರ ಮಾತನಾಡಿದ ಅವರು, ಪದವಿಭೂಷಣ ಪುರಸ್ಕೃತರಾಗಿದ್ದ ಎಸ್.ಎಂ.ಕೃಷ್ಣ ರಾಜ್ಯಪಾಲ, ಮುಖ್ಯಮಂತ್ರಿ, ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ, ವಿಧಾನಸಭೆಯ ಸಭಾಧ್ಯಕ್ಷ ಸೇರಿ ಹತ್ತು ಹಲವಾರು ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಯಲ್ಲಿ ಜನಿಸಿದ್ದ ಅವರು ಹಂತ ಹಂತವಾಗಿ ರಾಜಕೀಯಕ್ಕೆ ಬಂದು ಉನ್ನತ ಹುದ್ದೆಗಳನ್ನು ಅಲಂಕರಿಸಿದರು.

ಸಚಿವರಾಗಿ, ಉಪಮುಖ್ಯಮಂತ್ರಿಯಾಗಿ, ಮುಖ್ಯಮಂತ್ರಿಯಾಗಿ ರಾಜ್ಯದಲ್ಲಿ ಮಾಡಿರುವ ಅವರ ಕಾರ್ಯಗಳು ಅತ್ಯಂತ ಜನಪರವಾಗಿದ್ದವು. ಬೆಂಗಳೂರಿನಲ್ಲಿ ಐಟಿ ಬೆಳವಣಿಗೆಯಲ್ಲಿ ಅವರ ಪಾತ್ರ ಬಹುದೊಡ್ಡದು ಎಂದು ಬಣ್ಣಿಸಿದರು. ರಾಜ್ಯವು ಓರ್ವ ಶ್ರೇಷ್ಠ ಸಂಸದೀಯಪಟುವನ್ನು ಕಳೆದುಕೊಂಡು ಬಡವಾಗಿದೆ ಎಂದು ಕಂಬನಿ ಮಿಡಿದರು.

ಸಂತಾಪ ನಿರ್ಣಯವನ್ನು ಬೆಂಬಲಿಸಿ ಮಾತನಾಡಿದ ಸಭಾನಾಯಕ ಎನ್.ಎಸ್.ಭೋಸರಾಜ್ ಅವರು, ರಾಜಧಾನಿ ಬೆಂಗಳೂರಿನತ್ತ ವಿಶ್ವವೇ ತಿರುಗಿನೋಡುವಂತೆ ಮಾಡಿದ, ಐಟಿಬಿಟಿ ನಗರಿಯನ್ನಾಗಿ ಮಾಡಿ ರ್ನಾಟಕದ ರ್ಥಿಕತೆಗೆ ಬಹುದೊಡ್ಡ ಕೊಡುಗೆಯಾಗಿ ನೀಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದು ಎಸ್.ಎಂ. ಕೃಷ್ಣ ಅವರು ಎಂದರು.

ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಹೈಟೆಕ್ ಮುಖ್ಯಮಂತ್ರಿ ಎಂದೇ ಹೆಸರಾಗಿದ್ದ ಎಂ.ಕೃಷ್ಣ ಅವರು ಬೆಂಗಳೂರಿಗೆ ಸಿಲಿಕಾನ್ ಸಿಟಿ ಎಂದು ಹೆಸರು ಬರಲು ಕಾರಣರಾಗಿದ್ದರು. ಈ ಮೂಲಕ ಜಾಗತಿಕ ಭೂಪಟದಲ್ಲಿ ಬೆಂಗಳೂರಿನ ಹೆಸರು ಕಾಣಿಸಿಕೊಳ್ಳುವಂತೆ ಮಾಡಿದ್ದರು ಎಂದರು.

ಸದಸ್ಯ ಡಾ.ತಮಯ್ಯ ಮಾತನಾಡಿ, 1983ರಲ್ಲಿ ಕೇಂದ್ರ ಕೈಗಾರಿಕಾ ಸಚಿವರಾಗಿದ್ದ ಅವರು ಕೈಗಾರಿಕೆಗಳ ಏಳ್ಗೆ ಬಗ್ಗೆ ಸಾಕಷ್ಟು ಶ್ರಮ ವಹಿಸಿದ್ದರು. ದೇಶದ ಪ್ರತಿ ರಾಜ್ಯದ ಪ್ರತಿ ಜಿಲ್ಲೆಯಲ್ಲಿಯೂ ಕೈಗಾರಿಕಾ ಬಡಾವಣೆಗಳ ಸ್ಥಾಪನೆಗೆ ಮುಂದಾದರು. ಇದರ ಫಲವನ್ನು ಬಿಹಾರ, ಒರಿಸ್ಸಾ ಸೇರಿದಂತೆ ಹಲವು ರಾಜ್ಯಗಳು ಪಡೆದುಕೊಂಡವು ಎಂದರು.

ಜೆಡಿಎಸ್ ಸದಸ್ಯ ಬೋಜೇಗೌಡ ಮಾನತನಾಡಿ, 1999ರಿಂದ 2004 ಕೃಷ್ಣ ರವರು ಮುಖ್ಯಮಂತ್ರಿಯಾಗಿ ನಾಡಿಗೆ ಸಲ್ಲಿಸಿದ ಸೇವೆ ಅವಿಸರಣೀಯ. ಅವರ ಕಾಲಘಟ್ಟದಲ್ಲಿ ಕೈಗೊಂಡ ಅಭಿವೃದ್ಧಿ ರ್ಯಗಳು ಯೋಜನೆಗಳು ಇಂದಿಗೂ ಜಾರಿಯಲ್ಲಿದ್ದು, ಅದು ಕೃಷ್ಣ ರವರ ದೂರದೃಷ್ಟಿಯ ಫಲವಾದದ್ದು. ಸ್ತ್ರೀ ಶಕ್ತಿ, ಅಕ್ಷರ ದಾಸೋಹ, ರೈತರಿಗೆ ಪಹಣಿ ನೀಡುವ ಭೂಮಿ ಯೋಜನೆ, ಯಶಸ್ವಿನಿ ಯೋಜನೆ ಸಮಾಜದ ಸರ್ವ ಜನರನ್ನು ಜನಮನ ಗೆದ್ದ ಯೋಜನೆಗಳಾಗಿವೆ ಎಂದು ಸರಿಸಿದರು.

ಸದಸ್ಯ ಶಶಿಲ್ ನಮೋಶಿ ಮಾತನಾಡಿ, ಬೆಂಗಳೂರು ಸಿಂಗಾಪುರದಂತೆ ಆಗಬೇಕು ಎಂದು ಕನಸು ಕಂಡಿದ್ದ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು, ತಾವು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಐಟಿ ಕ್ಷೇತ್ರಕ್ಕೆ ಇನ್ನಿಲ್ಲದಷ್ಟು ಅವಕಾಶಗಳನ್ನು ಸೃಷ್ಟಿಸಿದ್ದರು. ಇದರಿಂದ ಉದ್ಯಾನ ನಗರಿಯು ಐಟಿ ಸಿಟಿಯಾಗಿ ಮಾರ್ಪಟ್ಟಿದ್ದಲ್ಲದೆ ೞಭಾರತದ ಸಿಲಿಕಾನ್ ವ್ಯಾಲಿಯಾಗಿ ಬೆಳೆಯಲು ಸಾಧ್ಯವಾಯಿತು.

ಅವರ ಮುಖ್ಯಮಂತ್ರಿಯಾಗಿದ್ದಾಗಲೇ ವಿಕಾಸ ಸೌಧ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗಿತ್ತು. ದೇವನಹಳ್ಳಿಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆರಂಭಕ್ಕೆ ಶ್ರಮಿಸಿದ್ದರು, ಬೆಂಗಳೂರಿಗೆ ಮೆಟ್ರೋ ತರುವಲ್ಲೂ ಪ್ರಮುಖ ಪಾತ್ರ ವಹಿಸಿದ್ದರು ಎಂದರು.

ಕಾಂಗ್ರೆಸ್ನ ಹಿರಿಯ ಸದಸ್ಯ ಹರಿಪ್ರಸಾದ್ ಮಾತನಾಡಿ, ಐಟಿ ಬಿಟಿ ಕ್ಷೇತ್ರಕ್ಕೆ ಅಗಾದವಾದ ಬೆಂಬಲ ನೀಡಿ ಬೆಂಗಳೂರು ನಗರದ ಬೆಳವಣಿಗೆಗೆ ಹಾಕಿಕೊಟ್ಟ ಭದ್ರ ಬುನಾದಿಯಿಂದ ಜಾಗತಿಕ ಮಟ್ಟದಲ್ಲಿ ಬೆಂಗಳೂರು ಸಿಲಿಕಾನ್ ವ್ಯಾಲಿ ಎಂದು ಹೆಸರು ಗಳಿಸಿ ಅಮೆರಿಕದ ಕ್ಯಾಲಿರ್ನಿಯ ನಗರಕ್ಕೆ ರ್ಯಾಯವಾಗಿ ಹೆಸರು ಗಳಿಸಿತ್ತು.

ಇಂದು ರಾಜ್ಯದ ಆಯವ್ಯಯ ಮೂರು ಲಕ್ಷ ಕೋಟಿ ದಾಟಿದ್ದರೆ ಅದಕ್ಕೆ ಕಾರಣ ಕೃಷ್ಣ ರವರು ಐಟಿ ಕ್ಷೇತ್ರಕ್ಕೆ ನೀಡಿದ ಅವಕಾಶಗಳೇ ಕಾರಣ. ಲಕ್ಷಾಂತರ ಉದ್ಯೋಗ ಸೃಷ್ಟಿಸಿ ಹಲವು ಮೂಲಭೂತ ಸರ್ಯಗಳನ್ನು ನೀಡಿ ಕನ್ನಡ ನಾಡನ್ನು ವಿಶ್ವ ಭೂಪಟದಲಿ ಬೆಳಗಿಸಲು ಕೃಷ್ಣ ರವರ ಪಾತ್ರ ಅತ್ಯಂತ ಹಿರಿದಾದ್ದು ಎಂದು ಗುಣಗಾನ ಮಾಡಿದರು.

ಬಿಜೆಪಿ ಸದಸ್ಯ ಸಿ.ಟಿ.ರವಿ ಮಾತನಾಡಿ, ಎಸ್.ಎಂ. ಕೃಷ್ಣಾ ಅವರು 2009ರಿಂದ 2012 ರವರೆಗೆ ಮನಮೋಹನ ಸಿಂಗ್ ಸರ್ಕಾರದಲ್ಲಿ ಭಾರತದ 72ನೇ ವಿದೇಶಾಂಗ ಸಚಿವರಾಗಿದ್ದರು. ಆ ಸರ್ಕಾರದಲ್ಲಿ ಸುಮಾರು 80ಕ್ಕೂ ಹೆಚ್ಚು ದೇಶಗಳಿಗೆ ಭೇಟಿ ನೀಡಿದ್ದರು. ಅಲ್ಲದೆ, ಪಾಕಿಸ್ತಾನ, ಚೀನಾ, ಬ್ರಿಟನ್, ರಷ್ಯಾ, ದಕ್ಷಿಣ ಆಫ್ರಿಕಾ ದೇಶಗಳ ಜತೆ ಉತ್ತಮ ಸಂಸ್ಕಾರ ಇಟ್ಟುಕೊಂಡಿದ್ದರು.

ಇದೆಲ್ಲದರ ಜತೆಗೆ ಅಮೆರಿಕದ ಆಗಿನ ವಿದೇಶಾಂಗ ಸಚಿವೆ ಹಿಲರಿ ಕ್ಲಿಂಟನ್ ಜತೆ ಸಹ ರಾಜತಾಂತ್ರಿಕ ಬಾಂಧವ್ಯವನ್ನು ಉತ್ತಮವಾಗಿಟ್ಟುಕೊಂಡಿದ್ದರು. ಇದಲ್ಲದೆ, ದ್ವಿಪಕ್ಷೀಯ ಸಂಬಂಧ ಸೇರಿದಂತೆ ಜಾಗತಿಕ ವಿಷಯವಾಗಿ ಹಲವು ರಾಷ್ಟ್ರಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ತಮ ಜವಾಬ್ದಾರಿಯನ್ನು ಅತ್ಯುತ್ತಮವಾಗಿ ನಿರ್ವಾಹಣೆ ಮಾಡಿದ್ದರು ಎಂದು ಸರಿಸಿದರು.

ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮಾತನಾಡಿ, ವಿಶ್ವಸಂಸ್ಥೆಯಲ್ಲಿ ಭಾರತದ ನಿಲುವನ್ನು ರ್ಥವಾಗಿ ಪ್ರತಿಪಾದಿಸಿದ್ದ ಎಸ್.ಎಂ.ಕೃಷ್ಣ ಅವರು, ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಕಾಯಂ ಸದಸ್ಯತ್ವ ಬೇಕು ಎಂದು ಒತ್ತಾಯಿಸಿದ್ದರು. ಈ ಮೂಲಕ ಭಾರತ ಸಹ ಎಲ್ಲ ದೇಶಗಳಂತೆ ಸ್ಥಿರವಾದ ದೇಶ ಹಾಗೂ ಭದ್ರತಾ ಮಂಡಳಿಯ ಕಾಯಂ ಸದಸ್ಯತ್ವ ಪಡೆದುಕೊಳ್ಳುವ ಎಲ್ಲ ಅರ್ಹತೆ ಇದೆ ಎಂದು ಪ್ರತಿಪಾದಿಸಿದ್ದರು ಎಂದರು.

ಕಾಂಗ್ರೆಸ್ ಸದಸ್ಯ ಒ.ನಾಗರಾಜ್ ಯಾದವ್ ಮಾತನಾಡಿ,ಇನ್ನು ಶತ್ರು ದೇಶ ಎಂದೇ ಕರೆಯಲ್ಪಡುವ ಪಾಕಿಸ್ತಾನದ ಜತೆ ಬಾಂಧವ್ಯ ವೃದ್ಧಿಗಾಗಿ ಎಸ್.ಎಂ ಕೆ ಅವರು ಸಾಕಷ್ಟು ಪ್ರಯತ್ನಪಟ್ಟಿದ್ದರು. ಇನ್ನು ಚೀನಾದ ಜತೆಯೂ ಉತ್ತಮ ಸಂಬಂಧ ಹೊಂದಲು ಆದ್ಯತೆಯ ಹೆಜ್ಜೆಯನ್ನಿಟ್ಟಿದ್ದರು ಎಂದರು. ಜೆಡಿಎಸ್ನ ಟಿ.ಎ ಶರವಣ, ಬಿಜೆಪಿ ಸದಸ್ಯ ಪೂಜಾರ್, ರವಿಕುಮಾರ್ ಮತ್ತಿತರ ಸದಸ್ಯರು ಎಸ್.ಎಂ.ಕೃಷ್ಣ ಬಗ್ಗೆ ಮಾತನಾಡಿದರು.

RELATED ARTICLES

Latest News