ಜನಪರ ಬಜೆಟ್ ಮಂಡಿಸುತ್ತೇನೆ : ಸಿಎಂ ಬೊಮ್ಮಾಯಿ

Social Share

ಬೆಂಗಳೂರು,ಜ.30- ಈ ಬಾರಿಯ ಬಜೆಟ್‍ನಲ್ಲಿ ರೈತರು, ಮಹಿಳೆಯರು, ದೀನ ದಲಿತರು, ಹಿಂದುಳಿದವರು, ದುಡಿಯುವ ವರ್ಗಕ್ಕೆ ಹೆಚ್ಚು ಒತ್ತು ನೀಡಿ ಜನಪರವಾದ ಬಜೆಟ್ ಮಂಡಿಸಲಿದ್ದೇನೆ ಎಂದು ಹಣಕಾಸು ಖಾತೆಯನ್ನೂ ಹೊಂದಿರುವ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹುತಾತ್ಮರಾದವರ ಸ್ಮರಣಾರ್ಥ ವಿಧಾನಸೌಧ ಮತ್ತು ವಿಕಾಸಸೌಧದ ನಡುವಿನ ಮಹಾತ್ಮಾ ಗಾಂಧಿಜೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ 2 ನಿಮಿಷಗಳ ಮೌನಾಚರಣೆ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ತೀರ್ಮಾನಿಸಿದಂತೆ ಫೆ.17 ರಂದು ಬಜೆಟ್ ಮಂಡನೆ ಮಾಡಲಿದ್ದೇನೆ.

ಇದೊಂದು ಜನಪರವಾದ ಬಜೆಟ್ ಆಗಲಿದೆ. ಎಲ್ಲರ ನಿರೀಕ್ಷೆಗಳನ್ನು ಈಡೇರಿಸುವ ಆಯವ್ಯಯವಾಗಲಿದೆ ಎಂದು ತಿಳಿಸಿದರು. ಪ್ರತಿಯೊಂದು ವರ್ಗಕ್ಕೂ ಸಾಮಾಜಿಕ ನ್ಯಾಯ ಒದಗಿಸಲಾಗುವುದು, ಈಗಾಗಲೇ ಇದಕ್ಕೆ ಅಗತ್ಯವಾದ ಸಿದ್ದತೆಗಳನ್ನು ಸಹ ಕೈಗೊಳ್ಳಲಾಗಿದೆ. ಇಲಾಖಾವಾರು ಸಭೆಗಳನ್ನು ನಡೆಸುತ್ತಿರುವುದಾಗಿ ಮಾಹಿತಿ ನೀಡಿದರು.

ಬಿಬಿಸಿ ಸಾಕ್ಷ್ಯ ಚಿತ್ರ ನಿಷೇಧ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ಸಚಿವ ಸಂಪುಟ ಮುಗಿದ ಅಧ್ಯಾಯ ಎನ್ನುವ ಮಾಧ್ಯಮದವರ ಪ್ರಶ್ನೆಗೆ ತುಸು ಅಸಮಾಧಾನಗೊಂಡ ಸಿಎಂ ಬೊಮ್ಮಾಯಿ, ಸಚಿವ ಸಂಪುಟಕ್ಕೆ ನೀವೇ ಹೆಚ್ಚು ಮಹತ್ವ ಚರ್ಚೆ ಮಾಡುತ್ತಿದ್ದೀರಿ ಎಂದರು.

ದೆಹಲಿಗೆ ಹೋಗಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ಪಕ್ಷದ ವರಿಷ್ಠರು ಸೂಕ್ತ ಸಮಯದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ ಎಂದರು.

ಮಹಾತ್ಮಾ ಗಾಂೀಜಿಯವರು ಹುತಾತ್ಮರಾದ ಈ ದಿನದ ಬಗ್ಗೆ ನಾವು ಚಿಂತನೆ ಮಾಡಿ ಆತ್ಮಾವಲೋಕನ ಮಾಡಿಕೊಂಡು ಗಾಂೀಧಿಜಿಯವರ ಮಾರ್ಗದಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವ ಸಂಕಲ್ಪವನ್ನು ಮಾಡಬೇಕು ಎಂದು ಕರೆ ಕೊಟ್ಟರು.

ಮಾಹಾತ್ಮಾ ಗಾಂಧಿ ಅವರು ಹೇಳಿರುವಂತೆ ಅವರ ಜೀವನವೇ ಒಂದು ಸಂದೇಶ. ಅವರ ಜೀವನವನ್ನು ಓದಿ, ತಿಳಿದುಕೊಂಡು , ಜೀವನದಲ್ಲಿ ಅಳವಡಿಸಿಕೊಳ್ಳುವುದು ಮುಖ್ಯ. ಅವರ ಜೀವನದ ಆಧಾರ ನೈತಿಕತೆ ಮತ್ತು ಸತ್ಯ. ಇವೆರಡನ್ನೂ ಅತ್ಯಂತ ಶುದ್ಧವಾಗಿ ಪ್ರತಿಪಾದಿಸಿದ್ದರು.

ಮುಂದುವರೆದ ಅದಾನಿ – ಹಿಡನ್‍ಬರ್ಗ್ ಜುಗಲ್ ಬಂದಿ

ಸದಾಕಾಲ ತಮ್ಮನ್ನು ತಾವೇ ಪರೀಕ್ಷೆಗೆ ಒಳಪಡಿಸಿಕೊಂಡು ಪರಿಶುದ್ಧ ವಾಗುತ್ತಿದ್ದರು. ಇಂಥ ಪ್ರಕ್ರಿಯೆ ಗಾಂೀಜಿ ಯವರು ಜೀವನದುದ್ದಕ್ಕೂ ನಡೆಸಿಕೊಂಡು ಬಂದಿರುವುದು ನಾವು ನೋಡುತ್ತೇವೆ. ಅಹಿಂಸೆಯಲ್ಲಿ ಬಹಳ ದೊಡ್ಡ ಶಕ್ತಿ ಇದೆ ಎಂದು ಇಡೀ ಜಗತ್ತಿಗೆ ತೋರಿಸಿಕೊಟ್ಟವರು. ಅಹಿಂಸೆಯಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವವರಲ್ಲಿ ಮುಂಚೂಣಿಯಲ್ಲಿದ್ದರು ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಅನಾಮಧೇಯರು ತಮ್ಮ ಆಸ್ತಿಪಾಸ್ತಿ ಗಳನ್ನು ತ್ಯಾಗ ಮಾಡಿದ್ದರು. ಗಟ್ಟಿ ನಿಲುವು ತೆಗೆದುಕೊಂಡು ಹೋರಾಟಕ್ಕೆ ಹೊಸ ದಿಕ್ಸೂಚಿ ನೀಡಿದ ಸುಭಾಶ್ ಚಂದ್ರ ಬೋಸ್ , ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ಲೋಕ ಮಾನ್ಯ ತಿಲಕ್ ಮುಂತಾದವರೂ ಕೂಡ ಆ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ದಿಕ್ಕು ನೀಡಿದರು.

ಇವೆಲ್ಲವನ್ನೂ ಕ್ರೋಢಿಕರಿಸಿ ಜನಸಾಮಾನ್ಯರಲ್ಲಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಿ ಸತ್ಯಾಗ್ರಹ ನಡೆಸಿ ಆಂದೋಲನ ರೀತಿಯಲ್ಲಿ ಸ್ವಾತಂತ್ರ್ಯ ಹೋರಾಟ ವನ್ನು ಪರಿವರ್ತನೆ ಮಾಡಿ ಬ್ರಿಟಿಷರ ಜೊತೆ ಕಠಿಣ ಮಾತುಕತೆ ನಡೆಸಿ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದರು. ಗಾಂೀಧಿಜಿ ಅವರ ತತ್ವ ಆದರ್ಶಗಳ ಮೇಲೆ ಈ ದೇಶದ ಸಾರ್ವಜನಿಕ ಜೀವನದಲ್ಲಿ ನೈತಿಕತೆ ಬರುವುದು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಕುತೂಹಲ ಕೆರಳಿಸಿದ ಸುಮಲತಾ ನಡೆ

ಒಂದು ರೀತಿಯಲ್ಲಿ ರಾಷ್ಟ್ರೀಯ ವ್ಯಕ್ತಿತ್ವ ಗಾಂಜಿಯವರಲ್ಲಿ ಇತ್ತು. ದೇಶಕ್ಕೆ ಬಹಳ ದೊಡ್ಡ ಚರಿತ್ರೆ ಇದೆ. ಬೇಕಾಗಿರುವುದು ಚಾರಿತ್ರ್ಯ . ಅವರಿಗೆ ಭಾವಪೂರ್ವಕವಾಗಿ, ಹೃದಯದಂತರಾಳದಿಂದ, ಶ್ರದ್ಧಾಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ ಎಂದರು.

social justice, Budget, CM Bommai,

Articles You Might Like

Share This Article