Friday, February 23, 2024
Homeರಾಜ್ಯಸಾಮಾಜಿಕ ನ್ಯಾಯಪಾಲನೆಯಿಂದ ಒಂದಿಂಚೂ ಹಿಂದೆ ಸರಿಯುವುದಿಲ್ಲ : ಸಿದ್ದರಾಮಯ್ಯ

ಸಾಮಾಜಿಕ ನ್ಯಾಯಪಾಲನೆಯಿಂದ ಒಂದಿಂಚೂ ಹಿಂದೆ ಸರಿಯುವುದಿಲ್ಲ : ಸಿದ್ದರಾಮಯ್ಯ

ಬೆಂಗಳೂರು, ಡಿ. 2- ಯಾರು, ಏನೇ ಹೇಳಿದರೂ ಸಾಮಾಜಿಕ ನ್ಯಾಯಪಾಲನೆಯಿಂದ ತಾವು ಒಂದಿಂಚೂ ಹಿಂದೆ ಸರಿಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿಂದು ಅಖಿಲ ಕರ್ನಾಟಕ ಗಾಣಿಗರ ಸಂಘದ ಸುವರ್ಣ ಮಹೋತ್ಸವ, ಗಾಣಿಗ ಜನಾಂಗದ ಸಮಾವೇಶ, ಗಾಣಿಗರ ಭವನದ ನೂತನ ಕಟ್ಟಡ ಬ್ಲಾಕ್ 1 ರ ಉದ್ಘಾಟನೆ, ಬ್ಲಾಕ್ 2 ರ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದರು.

ಶತಶತಮಾನಗಳಿಂದ ಅಕ್ಷರ ಸಂಸ್ಕøತಿ, ಸಾಮಾಜಿಕ ನ್ಯಾಯ ಸೇರಿದಂತೆ ಅವಕಾಶ ವಂಚಿತ ಸಮುದಾಯಗಳ ಜೊತೆ ನಾವಿದ್ದೇವೆ ಎಂದು ಭರವಸೆ ನೀಡಿದರು. ಗಾಣಿಗ ಸಮುದಾಯ ಎಣ್ಣೆ ಉತ್ಪಾದನೆಯನ್ನು ಕುಲಕಸುಬನ್ನಾಗಿ ಪಾಲಿಸುತ್ತಿದ್ದರು. ಕೈಗಾರೀಕರಣದ ಬಳಿಕ ವೃತ್ತಿ ತೊರೆಯಬೇಕಾದ ಪರಿಸ್ಥಿತಿ ಬಂದು ಬಹಳಷ್ಟು ಮಂದಿ ಇದರಿಂದ ನಿರುದ್ಯೋಗಿಗಳಾಗಿದ್ದಾರೆ. ಕೆಲವರಿಗಷ್ಟೇ ಜಮೀನುಗಳಿವೆ. ಉಳಿದವರಿಗೆ ಜೀವನಾದಾಯ ಮೂಲಗಳಿಲ್ಲ ಎಂಬುದು ತಮ್ಮ ಗಮನದಲ್ಲಿದೆ ಎಂದರು.

ವಿಶ್ವಕರ್ಮ ಯೋಜನೆಯಡಿ ಗಾಣಿಗ ವೃತ್ತಿಯನ್ನು ಕೈಬಿಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಈ ಬಗ್ಗೆ ಪತ್ರ ಬರೆಯುವಂತೆ ಸಮುದಾಯದ ಮುಖಂಡರು ಮನವಿ ಮಾಡಿದ್ದಾರೆ. ಇದು ದುರ್ದೈವ. ನಿಮ್ಮ ಸಮುದಾಯಕ್ಕೆ ಸೇರಿದವರೇ ಪ್ರಧಾನಮಂತ್ರಿಯಾಗಿದ್ದಾರೆ. ಅವರಿಗೆ ಸಮಸ್ಯೆ ಗೊತ್ತಿದೆಯೋ, ಗೊತ್ತಿಲ್ಲವೋ ಮಾಹಿತಿ ಇಲ್ಲ. ನಾನು ಕೂಡಲೇ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.

ರಾಜ್ಯದಲ್ಲಿ ನಡೆದಿರುವ ಆರ್ಥಿಕ, ಸಾಮಾಜಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಲು ಸರ್ಕಾರ ಸಿದ್ಧವಿದೆ. ಈ ಹಿಂದೆ ತಾವು ಮುಖ್ಯಮಂತ್ರಿಯಾಗಿದ್ದಾಗಲೇ ಆಯೋಗ ರಚನೆ ಮಾಡಲಾಗಿತ್ತು. ಸಮೀಕ್ಷೆ ಅವೈಜ್ಞಾನಿಕ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ವರದಿಯನ್ನು ಈವರೆಗೂ ಯಾರೂ ನೋಡಿಲ್ಲ. ಇದಕ್ಕೆ ಮುಂಚಿತವಾಗಿಯೇ ಅವೈಜ್ಞಾನಿಕ ಎಂದು ಹೇಳುವುದು ಸರಿಯಲ್ಲ. ವರದಿ ಸ್ವೀಕರಿಸುವ ಸಲುವಾಗಿಯೇ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷರ ಅಕಾರ ಅವಯನ್ನು 2 ತಿಂಗಳ ಕಾಲ ವಿಸ್ತರಣೆ ಮಾಡಲಾಗಿದೆ. ವರದಿ ಬಂದ ಬಳಿಕ ಅದನ್ನು ಪರಿಶೀಲಿಸಲಾಗುವುದು ಎಂದರು.

ನಾಳೆ 4 ರಾಜ್ಯಗಳ ವಿಧಾನಸಭೆ ಚುನಾವಣೆ ಫಲಿತಾಂಶ, ಹೆಚ್ಚಿದ ಕಾತುರ

ಗಾಣಿಗ ಸಮುದಾಯಕ್ಕೆ 50 ಲಕ್ಷ ರೂ. ಆರ್ಥಿಕ ನೆರವು ನೀಡಲಾಗಿತ್ತು. ಇನ್ನೂ ಹೆಚ್ಚಿನ ನೆರವು ನೀಡಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯಕ್ಕೆ ನ್ಯಾಯ ಕೊಡಿಸುವಲ್ಲಿ ತಾವು ಸದಾ ನಿಮ್ಮೊಂದಿಗಿರುತ್ತೇನೆ. ಅವಕಾಶ ವಂಚಿತ, ಹಿಂದುಳಿದ, ದಲಿತ, ಅಲ್ಪಸಂಖ್ಯಾತ ಸಮುದಾಯದವರಿಗೆ ನ್ಯಾಯ ದೊರಕಿಸಲು ಕ್ರಮ ಕೈಗೊಳ್ಳಲಾಗುವುದು. ಸಮುದಾಯದಲ್ಲಿ ಉತ್ತಮ ಸೇವೆ ಸಲ್ಲಿಸಿದವರನ್ನು ಗುರ್ತಿಸಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ ಎಂದು ಹೇಳಿದರು. ವಿಧಾನಪರಿಷತ್‍ನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಹಾಗೂ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES

Latest News