ಬೆಂಗಳೂರು ಮೇ 28- ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ ತಂದೆ ತಾಯಿಯಷ್ಟೇ ಸರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಪುರಭವನದಲ್ಲಿ ಆಯೋಜಿಸಿದ್ದ ಬೃಹತ್ ಜೈ ಹಿಂದ್ ಸಭಾ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋದ ಸಮೂಹವನ್ನು ಸನಾನಿಸಿ, ಹುತಾತ ಯೋಧರ ಕುಟುಂಬದ ಸದಸ್ಯರನ್ನು ಸನಾನಿಸಿ ಪುರಸ್ಕರಿಸಿ ಅವರು ಮಾತನಾಡಿದರು.
ತ್ಯಾಗ ಮನೋಭಾವದಿಂದ ಯೋದರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ. ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ.
ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಅವರು ಶ್ಲಾಘಿಸಿದರು.
ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಸಿದ್ದರಾಮಯ್ಯ, ಲೆ.ಜ. ಪ್ರಸಾದ್, ಏರ್ ವೈಸ್ ಮಾರ್ಷಲ್ ಅಜೀಜ್ ಜಾವೆದ್, ಎಐಸಿಸಿ ಕಾರ್ಯದರ್ಶಿ ನಾಸೀರ್ ಹುಸೇನ್, ಕೆಪಿಸಿಸಿ ಸೇನಾ ಘಟಕದ ಅಧ್ಯಕ್ಷ ಮಲ್ಲಿಕಾರ್ಜುನ್ ಮತ್ತಿತರರು ಭಾಗವಹಿಸಿದ್ದರು.