ಈ ಬಾರಿ ಜನಸಾಮಾನ್ಯರ ದಸರಾ : ವಿ.ಸೋಮಣ್ಣ

ಮೈಸೂರು,ಸೆ.27- ಈ ಬಾರಿ ಕೇವಲ ಆಡಂಬರದ ದಸರಾವಾಗದೆ ಜನಸಾಮಾನ್ಯರ ದಸರಾ ಇದಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಜಿ.ಪಂ. ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಬಾರಿಯ ದಸರಾ ಮಹೋತ್ಸವದಲ್ಲಿ ಮುಂದಿನ ಪೀಳಿಗೆಗೆ ನಮ್ಮ ನಾಡು, ನುಡಿ, ಸಂಸ್ಕøತಿ ಬಿಂಬಿಸುವಂತಹ ಕಾರ್ಯಕ್ರಮಗಳು ನಡೆಯಬೇಕೆಂದು ಆಶಯ ವ್ಯಕ್ತಪಡಿಸಿದರು.

ಈ ಬಾರಿಯ ದಸರಾ ಮಹೋತ್ಸವದ ವಿದ್ಯುತ್ ಅಲಂಕಾರ ಅತ್ಯುತ್ತಮವಾಗಿ ಮೂಡಿಬಂದಿದೆ. 90ಕಿ.ಮೀ ವ್ಯಾಪ್ತಿಯಲ್ಲಿ ನಗರದಾದ್ಯಂತ ಮಾಡಲಾಗುತ್ತಿದ್ದ ವಿದ್ಯುತ್ ದೀಪಗಳ ಅಲಂಕಾರವನ್ನು 100ಕಿ.ಮೀ ವ್ಯಾಪ್ತಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಸೆ. 29ರ ಬೆಳಗ್ಗೆ ಚಾಮುಂಡಿ ಬೆಟ್ಟದಲ್ಲಿ ಖ್ಯಾತ ಸಾಹಿತಿ ಎಸ್.ಎಲ್.ಬೈರಪ್ಪ ಅವರು, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಅದೇ ದಿನ ವಿವಿಧ ಕಾರ್ಯಕ್ರಮಗಳಿಗೂ ಚಾಲನೆ ದೊರೆಯಲಿದೆ ಎಂದು ಹೇಳಿದ ಸೋಮಣ್ಣ ವಸ್ತುಪ್ರದರ್ಶನ ಆವರಣದಲ್ಲಿ ಪ್ರತಿಬಾರಿ ಮಳಿಗೆ ರಹಿತ ವಸ್ತುಪ್ರದರ್ಶನ ಉದ್ಘಾಟನೆ ಆಗುತ್ತಿತ್ತು.

ಈ ಬಾರಿ ಎಲ್ಲ ಮಳಿಗೆಗಳನ್ನು ತೆರೆದು ಉದ್ಘಾಟನೆ ಮಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ರಾಂ ಜಿ.ಶಂಕರ್, ಜಿ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಜ್ಯೋತಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.  ಇದೇ ಸಂದರ್ಭದಲ್ಲಿ ವಿವಿಧ ಉಪಸಮಿತಿಗಳ ಬ್ರೊಷರ್‍ಗಳು ಮತ್ತು ಪೋಸ್ಟರ್‍ಗಳನ್ನು ಸಚಿವರು ಬಿಡುಗಡೆ ಮಾಡಿದರು.