ಕಾಂಗ್ರೆಸ್‌ಗೆ ಜಂಪ್ ಮಾಡಲು ಸೋಮಣ್ಣ, ನಾರಾಯಣಗೌಡ, ಪೂರ್ಣಿಮ ತಯಾರಿ

Social Share

ಬೆಂಗಳೂರು,ಮಾ.10- ಸಂಪುಟದಲ್ಲಿರುವ ವಿ.ಸೋಮಣ್ಣ, ಡಾ.ಕೆ.ಸಿ.ನಾರಾಯಣಗೌಡ ಅವರ ಜೊತೆ ಮತ್ತಷ್ಟು ಬಿಜೆಪಿ ಶಾಸಕರು, ಮಾಜಿ ಶಾಸಕರು ಕಾಂಗ್ರೆಸ್‍ನತ್ತ ವಲಸೆ ಆರಂಭಿಸಿದ್ದು, ಕೈ ಪಡೆಯಲ್ಲಿ ಈಗಾಗಲೇ ಗೆಲುವಿನ ಉತ್ಸಾಹ ಮನೆ ಮಾಡಿದೆ.

ಹಿಂದೆಲ್ಲಾ ಆಪರೇಷನ್ ಕಮಲ ಎಂಬ ರಾಜಕೀಯ ಪಿಡುಗನ್ನು ಹುಟ್ಟು ಹಾಕಿದ ಬಿಜೆಪಿ, ವಿರೋಧ ಪಕ್ಷಗಳನ್ನು ಅೀಧಿರನ್ನಾಗಿಸಿತ್ತು. ವಿಧಾನಸಭೆ ಚುನಾವಣೆ ಸಮೀಪದಲ್ಲಿ ಆದಾಯ ತೆರಿಗೆ, ಜಾರಿ ನಿರ್ದೇಶನಾಲಯ, ಸಿಬಿಐ ಸೇರಿದಂತೆ ಎಲ್ಲಾ ತನಿಖಾ ಸಂಸ್ಥೆಗಳ ಭಯವನ್ನು ಮೀರಿ ಕಾಂಗ್ರೆಸ್‍ನತ್ತ ಬಿಜೆಪಿ-ಜೆಡಿಎಸ್ ನಾಯಕರು ಮುಖ ಮಾಡಿದ್ದಾರೆ.

ಮೊದಲ ಹಂತದಲ್ಲಿ ಸರ್ಕಾರ ರಚನೆಗೆ ಬಿಜೆಪಿಗೆ ಬೆಂಬಲ ಸೂಚಿಸಿದ್ದ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ನಾಗೇಶ್ ಕಾಂಗ್ರೆಸ್ ಸೇರ್ಪಡೆಯಾಗಿದ್ದರೆ, ನಿನ್ನೆ ವಿಧಾನ ಪರಿಷತ್‍ನ ಸದಸ್ಯ ಪುಟ್ಟಣ್ಣ ಕೈಪಾಳೆಯ ಸೇರಿದ್ದಾಗಿದೆ.

BIG NEWS : ಕರ್ನಾಟಕ, ಹರಿಯಾಣದಲ್ಲಿ H3N2ಗೆ ಇಬ್ಬರು ಬಲಿ

ಎರಡನೇ ಹಂತದಲ್ಲಿ ಸಚಿವರಾದ ವಿ.ಸೋಮಣ್ಣ, ಡಾ.ಕೆ.ಸಿ.ನಾರಾಯಣಗೌಡ, ಶಾಸಕರಾದ ಚಿತ್ರದುರ್ಗ ಜಿಲ್ಲೆ ಹಿರಿಯೂರಿನ ಪೂರ್ಣಿಮಾ, ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಶ್ರೀಮಂತಪಾಟೀಲ್, ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ಎನ್.ವೈ.ಗೋಪಾಲಕೃಷ್ಣ, ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ಸೇರಿದಂತೆ ಅನೇಕರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಪತನವಾಗಲು ಕಾರಣವಾದ 14 ಮಂದಿ ಕಾಂಗ್ರೆಸ್ ಮತ್ತು ಜೆಡಿಎಸ್‍ನ ಮೂವರು ವಲಸಿಗ ಶಾಸಕರ ಪೈಕಿ ನಾಲ್ಕು ಮಂದಿ ಕಾಂಗ್ರೆಸ್ ಬಾಗಿಲಲ್ಲಿ ನಿಂತಿದ್ದಾರೆ. ಇವರಲ್ಲಿ ಸಂಪುಟದಲ್ಲಿ ಪ್ರಭಾವಿಗಳಾಗಿರುವ ಸಚಿವರ ಹೆಸರು ಇವೆ ಎಂದು ಹೇಳಲಾಗಿದೆ. ವಲಸಿಗರ ಸೇರ್ಪಡೆ ಕುರಿತು ಇಂದು ಸಂಜೆ ಮಹತ್ವದ ಬೆಳವಣಿಗೆ ನಡೆಯಲಿದೆ. ಸ್ಪಷ್ಟ ಚಿತ್ರಣ ದೊರೆಯಲಿದೆ ಎಂದು ಹೇಳಲಾಗಿದೆ.

ಈಗಾಗಲೇ ಜೆಡಿಎಸ್‍ನಿಂದ ದೂರ ಉಳಿದು ಕಾಂಗ್ರೆಸ್ ಸೇರಲಿರುವ ಶಿವಲಿಂಗೇಗೌಡ, ಎ.ಟಿ.ರಾಮಸ್ವಾಮಿ, ಶ್ರೀನಿವಾಸಗೌಡ, ಎ.ಟಿ.ರಾಮಸ್ವಾಮಿ ಅವರ ಪಕ್ಷ ಸೇರ್ಪಡೆಗೆ ಸಮಯ ನಿಗದಿಯಾಗುವ ಸಾಧ್ಯತೆ ಇದೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಶಾಸಕರು, ಸಂಪುಟದಲ್ಲಿ ಯುವಜನಸೇವೆ ಮತ್ತು ಕ್ರೀಡಾ ಸಚಿವರಾಗಿರುವ ಡಾ.ಕೆ.ಸಿ.ನಾರಾಯಣಗೌಡರು ಕಾಂಗ್ರೆಸ್ ಸೇರ್ಪಡೆಗೆ ಬಹುತೇಕ ವೇದಿಕೆ ಸಜ್ಜುಗೊಂಡಿದೆ. ನಿನ್ನೆ ರಾತ್ರಿ ಕೆ.ಆರ್.ಪೇಟೆ ಕ್ಷೇತ್ರದ ಮಾಜಿ ಶಾಸಕ ಚಂದ್ರಶೇಖರ್ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿ ಸಂಧಾನ ನಡೆಸಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಕಾಂಗ್ರೆಸ್‍ನ ಪ್ರಭಾವಿ ನಾಯಕ ಕೃಷ್ಣಪ್ಪ ಮತ್ತು ಅವರ ಪುತ್ರ ಪ್ರಿಯಾಕೃಷ್ಣ ಅವರನ್ನು ಮನವೋಲಿಸಿ ಸಚಿವ ಸೋಮಣ್ಣ ಅವರ ಜೊತೆ ಸಂಧಾನ ಮಾಡಿಸಲು ನಾಯಕರು ಯತ್ನಿಸುತ್ತಿದ್ದಾರೆ. ಕೃಷ್ಣಪ್ಪ ಮತ್ತು ಸೋಮಣ್ಣ ಒಂದಾದರೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಬಲ ಹೆಚ್ಚಾಗಲಿದೆ.

ದಕ್ಷಿಣ ಭಾಗದಲ್ಲಿ 10ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸುಲಭವಾಗಲಿದೆ ಎಂಬ ಲೆಕ್ಕಾಚಾರಗಳು ನಡೆದಿವೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಸೋಮಣ್ಣ ಸೇರ್ಪಡೆಗೆ ಸಮ್ಮತಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರುದ್ರಪ್ರಯಾಗ, ತೆಹ್ರಿಗಳಲ್ಲಿ ಹೆಚ್ಚು ಭೂ ಕುಸಿತ ಸಂಭವಿಸಲಿವೆಯಂತೆ

ಕಾಂಗ್ರೆಸ್ ಪಕ್ಷದಿಂದ ಬಹಳಷ್ಟು ಶಾಸಕರು ಬಿಜೆಪಿ ಸೇರುತ್ತಾರೆ ಎಂಬ ವದ್ಧಂತಿಗಳಿದ್ದವು. ಶೇ.40ರಷ್ಟು ಕಮಿಷನ್, ವ್ಯಾಪಕ ಭ್ರಷ್ಟಚಾರದಿಂದಾಗಿ ಬಿಜೆಪಿಗೆ ಭಾರೀ ಹಿನ್ನೆಡೆಯಾಗಿತ್ತು. ಅದರ ಬೆನ್ನಲ್ಲೆ ಚೆನ್ನಗಿರಿಯ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಮೇಲೆ ಲೋಕಾಯುಕ್ತ ದಾಳಿ, ಅದೇ ಪ್ರಕರಣದಲ್ಲಿ ಶಾಸಕರು ಮೊದಲ ಆರೋಪಿಯಾಗುತ್ತಿದ್ದಂತೆ ರಾಜಕೀಯ ಪರಿಸ್ಥಿತಿ ಬದಲಾಗಿದೆ.

ಕಾಂಗ್ರೆಸ್‍ನಿಂದ ಬಿಜೆಪಿಯತ್ತ ಮುಖ ಮಾಡಿದ್ದವರು ಹಿಂದೇಟು ಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‍ಗೆ ಭವಿಷ್ಯವಿದೆ ಎಂಬ ನಿರೀಕ್ಷೆಗಳು ಹುಟ್ಟಿವೆ. ಪಕ್ಷದಲ್ಲೇ ಉಳಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ ಬಿಜೆಪಿಯಲ್ಲಿದ್ದವರು ಕೇಂದ್ರ ತನಿಖಾ ಸಂಸ್ಥೆಗಳ ಭಯದಿಂದ ರಾಜಕೀಯ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ನೋಡುತ್ತಿದ್ದವರು ಪುಟ್ಟಣ್ಣ ಸೇರ್ಪಡೆಯ ಬಳಿಕ ದೃಢ ನಿಶ್ಚಯ ಮಾಡಿ ಕಾಂಗ್ರೆಸ್ ನಾಯಕರನ್ನು ಸಂಪರ್ಕ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಯಾವುದೇ ಕ್ಷಣದಲ್ಲಾದರೂ ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ.

ಅಮೆರಿಕ ವಿದೇಶಾಂಗ ಇಲಾಖೆ ಹಂಗಾಮಿ ವಕ್ತಾರರಾದ ಪಟೇಲ್

ನಾಯಕರ ಸೇರ್ಪಡೆಯನ್ನು ಖುದ್ದು ಡಿ.ಕೆ.ಶಿವಕುಮಾರ್ ನಿರ್ವಹಣೆ ಮಾಡುತ್ತಿದ್ದು, ಸಿದ್ದರಾಮಯ್ಯ ಸಾಥ್ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತದಲ್ಲಿದ್ದರೂ ಬಿಜೆಪಿ ತನ್ನ ಜನಪ್ರತಿನಿಗಳನ್ನು ಉಳಿಸಿಕೊಳ್ಳಲಾಗದೆ ಇರಿಸುಮುರಿಸಿಗೆ ಒಳಗಾಗಿದೆ. ಇದು ಕಾಂಗ್ರೆಸ್‍ಗೆ ವರದಾನವಾಗಿದೆ. ಆಪರಷನ್ ಕಮಲಕ್ಕೆ ಸಿಲುಕಿ ಬಿಜೆಪಿ ಪಾಲಾಗಿದ್ದವರು ಮರಳಿ ತವರಿನತ್ತ ಮುಖ ಮಾಡಿದ್ದಾರೆ. ಸಂಘ ಪರಿವಾದರ ಧಾರ್ಮಿಕ ಗರ್ ವಾಪಾಸ್ಸಾತಿಗೆ ಕಾಂಗ್ರೆಸ್‍ನ ರಾಜಕೀಯ ಗರ್ ವಾಪಾಸ್ಸಾತಿ ಸಂಚಲನವನ್ನೇ ಮೂಡಿಸಿದೆ.

Somanna, Narayana Gowda, Poornima, join, Congress,

Articles You Might Like

Share This Article