Thursday, December 12, 2024
Homeರಾಜಕೀಯ | Politics"ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ, ಅದಕ್ಕೆ ನಾನೇಕೆ ಅಡ್ಡಿಪಡಿಸಲಿ"

“ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಕುರಿತ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ, ಅದಕ್ಕೆ ನಾನೇಕೆ ಅಡ್ಡಿಪಡಿಸಲಿ”

ಮಂಗಳೂರು, ಜೂ.25- ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ನಡೆಯುತ್ತಿರುವ ಚರ್ಚೆಯಿಂದ ಕೆಲವರಿಗೆ ಖುಷಿಯಾಗುತ್ತಿದೆ. ಅದಕ್ಕೆ ನಾನೇಕೆ ಅಡ್ಡಿಪಡಿಸಲಿ ಎಂದು ಹೇಳುವ ಮೂಲಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ವಿಚಾರವಾಗಿ ಚರ್ಚೆಯಾಗಿದೆ. ಪ್ರಚಾರ ಸಿಗುತ್ತದೆ. ಹೀಗಾಗಿ ಈ ಬಗ್ಗೆ ಎಲ್ಲರೂ ಪ್ರತಿಕ್ರಿಯೆ ನೀಡುತ್ತಾರೆ. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿ ಅಗತ್ಯತೆ ಇದೆಯೋ, ಇಲ್ಲವೋ ಎಂಬ ಬಗ್ಗೆ ಪಕ್ಷ ನಿರ್ಧರಿಸುತ್ತದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಲಿದ್ದಾರೆ ಎಂದು ಹೇಳಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡದೊಡ್ಡವರು ಶಾಸಕರಾಗಿ ಅಧಿಕಾರ ಅನುಭವಿಸಿದ್ದಾರೆ. ಆದರೆ ಕ್ಷೇತ್ರಕ್ಕೆ ಅಭಿವೃದ್ಧಿ ಕೆಲಸಗಳಾಗಿಲ್ಲ. ನಾನು ಆ ಜಿಲ್ಲೆಯವನು. ಈ ಮೊದಲು ನಾನು ಸ್ಪರ್ಧಿಸಿದ್ದ ಸಾತನೂರು ಕ್ಷೇತ್ರದ ಬಹುಭಾಗ ಚನ್ನಪಟ್ಟಣ ತಾಲ್ಲೂಕಿಗೆ ಸೇರಿತ್ತು. ಜನ ಅವಕಾಶ ಕೊಟ್ಟಿದ್ದಾರೆ. ಕ್ಷೇತ್ರಕ್ಕೆ ಸಹಾಯ ಮಾಡಬೇಕೆಂಬುದು ತಮ ಇರಾದೆ ಎಂದರು.

ಬಡವರಿಗೆ ಸಹಾಯ ಮಾಡುವುದು ನಮ ಉದ್ದೇಶ. ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲು ತಮ ಸಹೋದರನಿಗೆ ಆಸಕ್ತಿಯಿಲ್ಲ. ಜನ ವಿಶ್ರಾಂತಿ ಪಡೆಯಲು ಆದೇಶ ನೀಡಿದ್ದಾರೆ. ಅದರಂತೆ ವಿಶ್ರಾಂತಿಯಲ್ಲಿದ್ದಾರೆ. ಅಭ್ಯರ್ಥಿ ಯಾರು ಎಂಬುದನ್ನು ಪಕ್ಷ ನಿರ್ಧರಿಸಲಿದೆ.
ಡಿ.ಕೆ.ಸುರೇಶ್‌ರವರು ಪಕ್ಷದ ಕೆಲಸ ಮಾಡಬೇಕು ಎಂಬ ಆಸಕ್ತಿ ಹೊಂದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ 80 ಸಾವಿರ ಮತ ನೀಡಿದ್ದಾರೆ. ಹೀಗಾಗಿ ನಂಬಿದವರ ಕೈಬಿಡಬಾರದು ಎಂಬುದು ನಮ ಉದ್ದೇಶ ಎಂದರು.

ಯಾವತ್ತೂ ಇಲ್ಲದವರು ಈಗ ಚನ್ನಪಟ್ಟಣಕ್ಕೆ ಬರುತ್ತಿದ್ದಾರೆ ಎಂದು ಎಚ್‌.ಡಿ.ಕುಮಾರಸ್ವಾಮಿಯವರು ಮಾಡಿದ ಟೀಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್‌, ಎಚ್‌.ಡಿ.ಕುಮಾರಸ್ವಾಮಿ ಚನ್ನಪಟ್ಟಣ ನೋಡುವ ಮೊದಲೇ ನಾನು ನೋಡಿದ್ದೇನೆ. ಅವರಿಗಿಂತ ಮೊದಲೇ ನಾನು ರಾಜಕೀಯಕ್ಕೆ ಬಂದವನು.

1985 ರಲ್ಲಿ ನಾನು ಕುಮಾರಸ್ವಾಮಿಯವರ ತಂದೆ ಎಚ್‌.ಡಿ.ದೇವೇಗೌಡರ ವಿರುದ್ಧ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. 1995 ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದರು ಎಂದು ಹೇಳಿದ್ದಾರೆ.ನಾವು ಹಿಂದೂ ಧರ್ಮ ಪಾಲನೆ ಮಾಡುತ್ತೇವೆ. ಧರ್ಮ, ಸಂಸ್ಕೃತಿ ಪಾಲನೆ ನಮ ಹಕ್ಕು. ಹೀಗಾಗಿ ಕುಟುಂಬ ಸಮೇತರಾಗಿ ಸುಬ್ರಹಣ್ಯ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಸ್ಪಷ್ಟಪಡಿಸಿದರು.

RELATED ARTICLES

Latest News