ನವದೆಹಲಿ,ಮಾ.3- ಜ್ವರದ ಕಾರಣಕ್ಕೆ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಇಲ್ಲಿನ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಸ್ಪತ್ರೆಯ ಆರೋಗ್ಯ ಬುಲೆಟಿನ್ ಪ್ರಕಾರ ಅವರ ಆರೋಗ್ಯ ಸ್ಥಿರವಾಗಿದೆ. ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜ್ವರದ ಕಾರಣ ಚೆಸ್ಟ್ ಮೆಡಿಸಿನ್ ವಿಭಾಗದ ಹಿರಿಯ ಸಲಹೆಗಾರ ಅರೂಪ್ ಬಸು ಮತ್ತು ಅವರ ತಂಡದ ಚಿಕಿತ್ಸೆ ನೀಡುತ್ತಿದೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆಯ ಟ್ರಸ್ಟ್ ಸೊಸೈಟಿಯ ಅಧ್ಯಕ್ಷ ಡಿ.ಎಸ್.ರಾಣಾ ತಿಳಿಸಿದ್ದಾರೆ.
ಪತ್ನಿ-ಮಕ್ಕಳ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಆರೋಪಿ ಸ್ಥಿತಿ ಗಂಭೀರ
ಸೋನಿಯಾ ಗಾಂಧಿ ಅವರ ಆರೋಗ್ಯ ಸ್ಥಿತಿಯನ್ನು ತೀವ್ರ ನಿಗಾ ವಹಿಸಲಾಗಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆರೋಗ್ಯ ಸ್ಥಿರವಾಗಿದೆ ಎಂದು ತಿಳಿಸಲಾಗಿದೆ.
Sonia Gandhi, admitted, hospital, Delhi,