ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನನ್ನ ಪುತ್ರಿ ಬದಲು ಬೇರೆಯವರು ಸ್ಪರ್ಧಿಸಲಿ : ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು, ಮಾ.10- ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರಿ ಸೌಮ್ಯ ರೆಡ್ಡಿ ಬದಲು, ಬೇರೆಯವರು ಸ್ಪರ್ಧಿಸಲಿ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಲಹೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಹಳಷ್ಟು ಮಂದಿ ಪ್ರಬಲ ಅಭ್ಯರ್ಥಿಗಳಿದ್ದಾರೆ. ಅವರಿಗೆ ಅವಕಾಶ ಸಿಗಲಿ. ಹೈಕಮಾಂಡ್ ಯಾರಿಗೆ ಅವಕಾಶ ಮಾಡಿಕೊಡುತ್ತದೆ ಎಂದು ಕಾದು ನೋಡುತ್ತಿದ್ದೇವೆ. ನಮ್ಮ ಪುತ್ರಿ ಸೌಮ್ಯ ರೆಡ್ಡಿ ಸ್ರ್ಪಧಿಸುತ್ತಾರೆ ಎಂದು ಮಾಧ್ಯಮಗಳಲ್ಲಿ ಕೇಳಿ ಬರುತ್ತಿದೆ. ಆದರೆ ನಾವು ಹೇಳುತ್ತಿಲ್ಲ. ನಾನು ಸ್ಪರ್ಧೆ ಮಾಡುವ ಇರಾದೆಯೂ ಇಲ್ಲ ಎಂದು … Continue reading ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ನನ್ನ ಪುತ್ರಿ ಬದಲು ಬೇರೆಯವರು ಸ್ಪರ್ಧಿಸಲಿ : ಸಚಿವ ರಾಮಲಿಂಗಾರೆಡ್ಡಿ