Saturday, February 22, 2025
Homeಕ್ರೀಡಾ ಸುದ್ದಿ | Sportsಕಾರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾದ ಸೌರವ್ ಗಂಗೂಲಿ

ಕಾರು ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾದ ಸೌರವ್ ಗಂಗೂಲಿ

Sourav Ganguly's Car Collides With Lorry, Narrowly Escapes Accident With No Injuries

ಕೋಲ್ಕತ್ತಾ, ಫೆ. 21: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಕಾರು ತಡರಾತ್ರಿ ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್ ಪ್ರೆಸ್‌ವೇಯ ದಂತನ್‌ಪುರ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುರ್ದ್ವಾನ್ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವರು ಪ್ರಯಾಣಿಸುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.

ಸೌರವ್ ಗಂಗೂಲಿ ಅವರ ಕಾರು ದುರ್ಗಾಪುರ ಎಕ್ಸ್ ಪ್ರೆಸ್‌ವೇ ಮೂಲಕ ಹಾದುಹೋಗುವಾಗ ಸಿಂಗೂರ್ ಬಳಿ, ಇದ್ದಕ್ಕಿದ್ದಂತೆ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಅಡ್ಡ ಬಂದಾಗ ಚಾಲಕ ತಕ್ಷಣ ಬ್ರೇಕ್ ಹಾಕಿದಾಗ ಬೆಂಗಾವಲು ಪಡೆಯ ವಾಹನಗಳೆಲ್ಲ ಗಂಗೂಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದವು. ಆದರೆ, ಸೌರವ್ ಈ ಭೀಕರ ಅಪಘಾತದಿಂದ ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದಾರೆ.

ಬೆಂಗಾವಲು ಪಡೆಯ ವಾಹನಗಳಿಗೆ ಹಾನಿಯಾಗಿದೆ. ಸ್ವಲ್ಪ ಹೊತ್ತು ರಸ್ತೆಯಲ್ಲಿ ಕಾದ ನಂತರ ಗಂಗೂಲಿ ಬೇರೆ ವಾಹನದಲ್ಲಿ ಸಮಾರಂಭಕ್ಕೆ ತೆರಳಿದ್ದಾರೆ. ಅದೃಷ್ಟವಶಾತ್ ಗಂಗೂಲಿ ಅವರಿಗಾಗಲಿ, ಅವರ ಬೆಂಗಾವಲು ಪಡೆಯಲ್ಲಿದ್ದ ಯಾರಿಗೂ ಗಾಯಗಳಾಗಿಲ್ಲ. ಆದಾಗ್ಯೂ, ಬೆಂಗಾವಲು ಪಡೆಯಲ್ಲಿದ್ದ ಎರಡು ವಾಹನಗಳು ಜಖಂಗೊಂಡಿವೆ.

ಅಪಘಾತದ ನಂತರ, ಸೌರವ್ ಗಂಗೂಲಿ ಸುಮಾರು 10 ನಿಮಿಷಗಳ ಕಾಲ ಸ್ಥಳದಲ್ಲೇ ಇದ್ದರು. ನಂತರ ಅವರು ಬರ್ಧಮಾನ್ ವಿಶ್ವವಿದ್ಯಾಲಯದ ಕಾರ್ಯಕ್ರಮದಲ್ಲಿ ಭಾಗವಹಿಸಲು ತೆರಳಿದರು.
ಅಪಘಾತದಿಂದಾಗಿ ಆತಂಕಕ್ಕೊಳಗಾಗಿದ್ದರೂ, ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಂಗೂಲಿ ಮಾತನಾಡಿದರು.

ಬಂಗಾಳ ತಂಡದಲ್ಲಿ ಈಗ ಅನೇಕ ಕ್ರಿಕೆಟಿಗರು ಹೊರಹೊಮ್ಮುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಅನೇಕ ಕ್ರಿಕೆಟಿಗರು ಹೊರಹೊಮ್ಮಲಿ ಎಂದು ಸೌರವ್ ಆಶಿಸಿದ್ದಾರೆ. ಬುರ್ದ್ವಾನ್‌ ನಲ್ಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ನಂತರ ಸೌರವ್ ಕೋಲ್ಕತ್ತಾಗೆ ಮರಳಿದ್ದಾರೆ.

RELATED ARTICLES

Latest News