ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಪ್ರಜೆ ಸೆರೆ

Social Share

ಬೆಂಗಳೂರು,ಮಾ.5- ಎಂಜಿನಿಯರ್ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ಪ್ರಜೆಯನ್ನು ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಬಂಧಿಸಿ 25 ಲಕ್ಷ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಪಡಿಸಿಕೊಂಡಿದ್ದಾರೆ. ನೆಲ್ಸನ್ ಆನ್‍ಗುಬು (29) ಬಂಧಿತ ದಕ್ಷಿಣ ಆಫ್ರಿಕಾ ಪ್ರಜೆ. ಈತ ನಗರದ ಎಚ್‍ಆರ್‍ಬಿಆರ್ ಲೇಔಟ್‍ನ ಹೋಟೆಲ್, ಆಲೀವ್ ರೆಸಿಡೆನ್ಸಿಯಲ್ಲಿ ಉಳಿದುಕೊಂಡಿದ್ದ.
ಕೆ.ಜಿ.ಹಳ್ಳಿ ಠಾಣೆ ವ್ಯಾಪ್ತಿಯ ನ್ಯೂ ಬಾಗಲೂರು ಲೇಔಟ್‍ನ ಚಾಲ್ರ್ಸ್ ಗ್ರೌಂಡ್ ಬಳಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿ ವಿದೇಶಿ ಪ್ರಜೆಯನ್ನು ಬಂಧಿಸಿ ತಪಾಸಣೆ ನಡೆಸಿ 500 ಗ್ರಾಂ ತೂಕದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 25 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಈತ ಎಂಜಿನಿಯರ್ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಒಂದು ಗ್ರಾಂ ಮಾದಕ ವಸ್ತುವಿಗೆ 5ಸಾವಿರ ರೂ.ನಂತೆ ಮಾರಾಟ ಮಾಡಿ ಅಕ್ರಮವಾಗಿ ಹಣ ಗಳಿಸುತ್ತಿದ್ದದ್ದು ಪೊಲೀಸರ ವಿಚಾರಣೆಯಿಂದ ಗೊತ್ತಾಗಿದೆ.
ಈ ಹಿಂದೆ 2021ನೇ ಸಾಲಿನಲ್ಲಿ ಈತನ ವಿರುದ್ಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೂರ್ವ ವಿಭಾಗದ ಡಿಸಿಪಿ ಡಾ.ಭೀಮಾಶಂಕರ್ ಗುಳೇದ್, ಎಸಿಪಿ ಜಗದೀಶ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ಸಂತೋಷ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು.

Articles You Might Like

Share This Article