Wednesday, May 1, 2024
Homeರಾಜ್ಯದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ

ದಕ್ಷಿಣ ಭಾರತದ ರಾಜ್ಯಗಳು ಬಿಜೆಪಿಗೆ ಸಂಕಟವಾಗಿವೆ : ಡಿಸಿಎಂ ಡಿಕೆಶಿ

ಬೆಂಗಳೂರು,ಫೆ.4-ಕರ್ನಾಟಕದ ಬೆನ್ನಲ್ಲೇ ದಕ್ಷಿಣ ಭಾರತದ ರಾಜ್ಯಗಳು ಕೂಡ ಹಂತ ಹಂತವಾಗಿ ಕೇಂದ್ರ ಸರ್ಕಾರದ ತಾರತಮ್ಯದ ವಿರುದ್ಧ ಪ್ರತಿಭಟನೆಗೆ ಮುಂದಾಗುತ್ತಿರುವುದರಿಂದ ಬಿಜೆಪಿಯವರಿಗೆ ಸಂಕಟ ತಡೆಯಲಾಗುತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕರ್ನಾಟಕಕ್ಕೆ ಆಗಿರುವ ತಾರತಮ್ಯದ ವಿರುದ್ಧ ಇದೇ ಫೆ.7ರಂದು ದೆಹಲಿಯಲ್ಲಿ ರಾಜ್ಯದ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಹಾಗೂ ರಾಜ್ಯಸಭಾ ಸದಸ್ಯರು ಮುಖ್ಯಮಂತ್ರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಇದರ ಬೆನ್ನಲ್ಲೇ ಕೇರಳ ರಾಜ್ಯದವರು ಕೂಡ ತಮ್ಮಗಾಗಿರುವ ಅನ್ಯಾಯದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಹೀಗಾಗಿ ಕೇಂದ್ರ ಸರ್ಕಾರ ಪರಿಸ್ಥಿತಿಯನ್ನು ಎದುರಿಸಲಾಗದೆ ಇಕ್ಕಟ್ಟಿಗೆ ಸಿಲುಕಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಪ್ರತಿಭಟನೆಗೆ ಪ್ರತಿಯಾಗಿ ರಾಜ್ಯದಲ್ಲಿ ಬಿಜೆಪಿ ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ವಿಚಾರ. ರಾಜ್ಯ ಸರ್ಕಾರ ತನ್ನ ಬೊಕ್ಕಸದಿಂದ ಬರಬಾತ ಪ್ರದೇಶಗಳ ರೈತರ ಖಾತೆಗಳಿಗೆ 2 ಸಾವಿರ ರೂ.ಗಳನ್ನು ರೈತರ ಖಾತೆಗೆ ಜಮೆ ಮಾಡಿದೆ.

ರಾಜ್ಯದಿಂದ 27 ಸಂಸದರು ಆಯ್ಕೆಯಾಗಿದ್ದಾರೆ. ಇವರಿಗೆ ಕನಿಷ್ಟ ಕೇಂದ್ರ ಗೃಹಸಚಿವ ಅಮಿತ್ ಷಾ ನೇತೃತ್ವದ ಪ್ರಕೃತಿ ವಿಕೋಪ ಪರಿಹಾರ ನಿಧಿ ಹಂಚಿಕೆಯ ಉನ್ನತ ಅಧಿಕಾರಿ ಸಮಿತಿ ಸಭೆ ಮಾಡಿಸಿ ಹಣ ಬಿಡುಗಡೆ ಮಾಡಿಸಲು ಸಾಧ್ಯವಾಗಿಲ್ಲ. ಇಲ್ಲಿ ಯಾವ ನೈತಿಕತೆ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು. ರಾಜ್ಯ ಸರ್ಕಾರ ಬರ ಬಾತ ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಎಲ್ಲದಕ್ಕೂ ಅಗತ್ಯ ನೆರವನ್ನು ಒದಗಿಸಿದೆ. ಕೇಂದ್ರದ ಜವಾಬ್ದಾರಿ ಏನು ಎಂದು ಕಿಡಿಕಾರಿದರು.

ಹಿಮಪಾತದಿಂದಾಗಿ ಕಾಶ್ಮೀರದಿಂದ ವಿಮಾನ ಸಂಚಾರ ಸ್ಥಗಿತ

ಬಜೆಟ್ ಅನುದಾನ ಸೇರಿದಂತೆ ಹಲವಾರು ವಿಚಾರಗಳಲ್ಲಿ ರಾಜ್ಯಕ್ಕೆ ತಾರತಮ್ಯವಾಗುತ್ತಿದೆ. ಈ ಹಿಂದೆ ಮನಮೋಹನ್ ಸಿಂಗ್ ಸರ್ಕಾರ ಅನುದಾನ ಕೊಟ್ಟಿಲ್ಲ ಎಂದು ಬಿಜೆಪಿಯವರು ವಾದಿಸುತ್ತಿದ್ದಾರೆ. ಅದರ ಅರ್ಥ ಆಗಲೂ ಅನ್ಯಾಯವಾಗಿತ್ತು ಈಗಲೂ ಅನ್ಯಾಯ ಮಾಡುತ್ತಿದ್ದೇವೆ ಎಂದರ್ಥವಲ್ಲವೇ?

ಬಿಜೆಪಿಯವರು ಕೇಂದ್ರದಿಂದ ಅನ್ಯಾಯವಾಗುತ್ತಿದೆ ಎಂಬುದನ್ನು ಒಪ್ಪಿಕೊಂಡಂತಾಗಿದೆ. ಮನಮೋಹನ್ ಸಿಂಗ್ ಸರ್ಕಾರ ಅನ್ಯಾಯ ಮಾಡಿದ್ದೇ ಆಗಿದ್ದರೆ ಅದಕ್ಕೆ ಜನ ಪಾಠ ಕಲಿಸಿಯಾಗಿದೆ. 50 ಸಂಸದರ ಸಂಖ್ಯೆಗೆ ಸೋತಿದ್ದೇವೆ. 300 ಸ್ಥಾನ ಗೆದ್ದಿರುವ ಬಿಜೆಪಿಯವರು ರಾಜ್ಯಕ್ಕೆ ನೀಡಿದ ಕೊಡುಗೆ ಏನು? ಎಂದು ಪ್ರಶ್ನಿಸಿದರು.
ಭದ್ರ ಮೇಲ್ದಂಡೆ ಯೋಜನೆಗಾಗಿ 5300 ಕೋಟಿ ರೂ.ಗಳನ್ನು ಮುಂದಿನ ಬಜೆಟ್‍ನಲ್ಲಿ ಘೋಷಣೆ ಮಾಡಿದ್ದು ನಿಜವಲ್ಲವೇ? ಅದರಲ್ಲಿ ಈವರೆಗೂ ಎಷ್ಟು ಹಣ ಬಿಡುಗಡೆ ಮಾಡಿದ್ದಾರೆ? ತೆರಿಗೆ ಪಾಲಿನಲ್ಲಿ ಎಷ್ಟು ಹಣ ನೀಡಲಾಗಿದೆ ಎಂಬುದನ್ನು ಬಿಜೆಪಿಯವರೇ ಹೇಳಲಿ ಎಂದು ಸವಾಲು ಹಾಕಿದರು.

ಈ ಹಿಂದೆ ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಅಸ್ತಿತ್ವದಲ್ಲಿದ್ದಾಗ ಯಾವ ಲಾಭವಾಗಿದೆ ಎಂಬುದನ್ನು ಮೊದಲು ಜನರಿಗೆ ತಿಳಿಸಿ. ಬೆಂಗಳೂರಿನ ಮೆಟ್ರೋಗೆ ಹಣ ನೀಡದಿರುವುದೇಕೆ ಎಂದು ಪ್ರಶ್ನಿಸಿದರು. ಪ್ರಧಾನಮಂತ್ರಿ ನರೇಂದ್ರಮೋದಿಯವರು ಈ ಹಿಂದೆ ಕಾಂಗ್ರೆಸ್‍ನ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿರಲಿಲ್ಲವೇ? ಈಗ ಅವರಿಗೆ ಜ್ಞಾನೋದಯವಾಗಿದೆಯೇ? ಮೋದಿ ಗ್ಯಾರಂಟಿ ಎಂದು ಏಕೆ ಹೇಳಿಕೊಂಡು ತಿರುಗುತ್ತಿದ್ದಾರೆ. ನಮ್ಮ ಭರವಸೆಯ ನಕಲಲ್ಲವೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದರು.

ವಿಜಯೇಂದ್ರ ಏಳು ತಿಂಗಳಿನಲ್ಲಿ ರಾಜ್ಯಾಧ್ಯಕ್ಷ ಸ್ಥಾನದ ಲಾಟರಿ ಪಡೆದುಕೊಂಡಿದ್ದಾರೆ. ಅವರ ತಂದೆಯ ಪ್ರಭಾವದಿಂದಾಗಿ ಅವಕಾಶ ಗಿಟ್ಟಿಸಿರುವ ವಿಜಯೇಂದ್ರ ಹುಮ್ಮಸ್ಸಿನಲ್ಲಿ ಮಾತನಾಡುತ್ತಿದ್ದಾರೆ. ನಾನೇಕೆ ಅವರನ್ನು ಅಧೈರ್ಯಗೊಳಿಸಲಿ ಎಂದು ಹೇಳಿದರು.

RELATED ARTICLES

Latest News