ಬೆಂಗಳೂರು,ಮಾ.1- ಸಲೂನ್ ಮತ್ತು ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಒಬ್ಬ ಮಹಿಳೆಯನ್ನು ಬಂಧಿಸಿದ್ದಾರೆ. ಟಿ.ದಾಸರಹಳ್ಳಿ, ಹೆಸರಘಟ್ಟ ಮುಖ್ಯರಸ್ತೆಯ ಸಲೂನ್ ಮತ್ತು ಸ್ಪಾದಲ್ಲಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಸಿಸಿಬಿ ಪೊಲೀಸರಿಗೆ ಮಾಹಿತಿ ಬಂದಿದೆ.
ತಕ್ಷಣ ಕಾರ್ಯಪ್ರವೃತ್ತರಾಗಿ ಸ್ಪಾ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು ಒಬ್ಬ ಮಹಿಳೆಯನ್ನು ಬಂಧಿಸಿ ಮೂವರು ಯುವತಿಯರನ್ನು ರಕ್ಷಿಸಿದ್ದಾರೆ. ಈ ಸಲೂನ್‍ನ ಪರವಾನಗಿ ಯನ್ನು ರದ್ದುಪಡಿಸಲು ಬಿಬಿಎಂಪಿಗೆ ತಿಳಿಸಲಾಗಿದೆ. ಈ ಬಗ್ಗೆ ಆರೋಪಿಗಳ ವಿರುದ್ಧ ಬಾಗಲ ಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
