ಬೆಂಗಳೂರು,ಜು.28-ಮೈಸೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆಯಾದ ಹಿನ್ನೆಲೆಯಲ್ಲಿ ನಗರ ಪೊಲೀಸರು ಎಚ್ಚೆತ್ತುಕೊಂಡಿದ್ದು, ಡ್ರಗ್ಸ್ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದಾರೆ. ಮಾದಕ ವಸ್ತು ಮಾರಾಟ, ಸೇವನೆ ವಿರುದ್ಧ ಪಶ್ಚಿಮ ವಿಭಾಗದ ಪೊಲೀಸರು ಇಂದು ಬೆಳಗ್ಗೆ 5.30 ರಿಂದ 8.30 ರ ವರೆಗೆ ಕಾರ್ಯಾಚರಣೆ ನಡೆಸಿದರು.
ಪಶ್ಚಿಮ ವಿಭಾಗದಲ್ಲಿ 16 ಪೊಲೀಸ್ ಠಾಣೆಗಳು ಬರಲಿದ್ದು, ಉಪವಿಭಾಗದ ಎಸಿಪಿಗಳು,ಆಯಾಯ ಪೊಲೀಸ್ ಠಾಣೆಗಳ ಇನ್ಸ್ ಪೆಕ್ಟರ್‌ಗಳು ಹಾಗೂ ಸಿಬ್ಬಂದಿಗಳು ತಮ ತಮ ವ್ಯಾಪ್ತಿಗಳಲ್ಲಿ ಡ್ರಗ್ಸ್ ತಪಾಸಣೆ ಕೈಗೊಂಡಿದ್ದರು.
ಕೆಂಪೇಗೌಡ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ, ಕಲಾಸಿಪಾಳ್ಯ ಬಸ್ ನಿಲ್ದಾಣ, ವಾಣಿಜ್ಯ ಕೇಂದ್ರಗಳು, ಪ್ರಮುಖ ಜಂಕ್ಷನ್‌ಗಳು, ವಾನಹ ನಿಲ್ದಾಣ ಸ್ಥಳಗಳಲ್ಲಿ ತಪಾಸಣೆ ನಡೆಸಿದರಾದರೂ ಯಾವುದೇ ಡ್ರಗ್ಸ್ ಸಿಕ್ಕಿಲ್ಲ.
ಮುಂದಿನ ದಿನಗಳಲ್ಲಿಯೂ ಸಹ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಅವರು ಈ ಸಂಜೆಗೆ ತಿಳಿಸಿದ್ದಾರೆ.ಮೂವರ ಬಂಧನ-ಗಾಂಜಾ ಜಪ್ತಿ:ಉಪವಿಭಾಗದ ಪೊಲೀಸರು ಶನಿವಾರ ರಾತ್ರಿ ಮಾದಕ ವಸ್ತು ಮಾರಾಟ, ಸೇವನೆ ವಿರುದ್ಧ ವಿಶೇಷ ಕಾರ್ಯಾಚರಣೆ ಕೈಗೊಂಡು ಮೂವರನ್ನು ಬಂಧಿಸಿ, 1ಕೆಜಿ 600 ಗ್ರಾಂ ಗಾಂಜಾ, 150 ಗ್ರಾಂ ಆಶಿಸ್ ಆಯಿಲ್ ವಶಪಡಿಸಿಕೊಂಡಿದ್ದಾರೆ.ನಗರದಾದ್ಯಂತ ಡ್ರಗ್‌್ಸ ಮಾರಾಟ ಮತ್ತು ಸೇವನೆ ಸಂಪೂರ್ಣ ತಡೆಗಟ್ಟುವ ನಿಟ್ಟಿನಲ್ಲಿ ನಗರ ಪೊಲೀಸರು ಪಣತೊಟ್ಟಿದ್ದಾರೆ.
- ನ.2ಕ್ಕೆ 11 ಜಿಲ್ಲೆಗಳ 316 ಕೇಂದ್ರಗಳಲ್ಲಿ ಕೆ-ಸೆಟ್ ಪರೀಕ್ಷೆ, ಕ್ಯಾಮರಾ ಕಣ್ಗಾವಲು
- ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿ ಇಬ್ಬರು ಬಲಿ
- ವಿಮೆ ಹಣಕ್ಕಾಗಿ ಮಗನನ್ನೇ ಹತ್ಯೆ ಮಾಡಿಸಿದ ತಾಯಿ
- ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ವಾಟಾಳ್ ಸಿದ್ಧತೆ
- ಉಪ ವಿಭಾಗಾಧಿಕಾರಿಗೆ ಕೃಷ್ಣಬೈರೇಗೌಡ ತರಾಟೆ

