ಚಿಕ್ಕಬಳ್ಳಾಪುರ, ಜು.2- ನಂದಿ ಗಿರಿಧಾಮದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಗೆ ಮುನ್ನ ಐತಿಹಾಸಿಕ ನಂದಿ ಗ್ರಾಮದ ಶ್ರೀ ಭೋಗ ನಂದೀಶ್ವರಸ್ವಾಮಿ ದೇಗುಲಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆದಿಯಾಗಿ ಎಲ್ಲಾ ಸಂಪುಟ ದರ್ಜೆ ಸಚಿವರು ಆಗಮಿಸಿ ಪೂಜೆ ಸಲ್ಲಿಸಿದರು.
ಸಚಿವ ಸಂಪುಟ ಸಭೆಯಲ್ಲಿ ದೇವಾಲಯವನ್ನು ವಿವಿಧ ಹೂವುಗಳಿಂದ ಶೃಂಗರಿಸಲಾಗಿತ್ತು. ಜಿಲ್ಲಾಧಿಕಾರಿ ಪಿಎನ್ ರವೀಂದ್ರ, ಜಿಪಂ ಸಿಓ ನವೀನ್ ಭಟ್, ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೋಕ್ಸೆ ಸೇರಿದಂತೆ ಮತ್ತಿತರ ಅಧಿಕಾರಿಗಳ ತಂಡ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಂಡರು.
ನಂತರ ನಂದಿ ಗಿರಿಧಾಮದ ಮಯೂರ ಪೈನ್ ಟಾಪ್‌ನಲ್ಲಿ ಆಯೋಜಿಸಿದ್ದ ಸಚಿವ ಸಂಪುಟ ಸಭೆಗೆ ಆಗಮಿಸಿದರು.ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಭಾರಿ ಬಿಗಿ ಪೊಲೀಸ್ ಬಂದೋಬಸ್ತನ ಏರ್ಪಡಿಸಲಾಗಿತ್ತು.
ಚಿಕ್ಕಬಳ್ಳಾಪುರ ಕೋಲಾರ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಟಧಿಕಾರಿಗಳು ಸೇರಿ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಪೊಲೀಸರಿಂದ ಬಾರಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
- ಗಾಜಾದಲ್ಲಿ 60 ದಿನಗಳ ಕದನ ವಿರಾಮಕ್ಕೆ ಇಸ್ರೇಲ್ ಒಪ್ಪಿದೆ : ಟ್ರಂಪ್
- ಯೂ ಟರ್ನ್ ಹೊಡೆದ ಬಿ.ಆರ್.ಪಾಟೀಲ್
- ಖಾಸಗಿ ವಲಯದಲ್ಲೂ ಜಾತಿ ಆಧಾರಿತ ಮೀಸಲಾತಿ ಬೇಕು : ರಾಮದಾಸ್ ಅಠಾವಳೆ
- ಕೆಲಸದ ಅವಧಿ ಹೆಚ್ಚಿಸಲು ತೀರ್ಮಾನವಾಗಿಲ್ಲ : ಸಂತೋಷ್ ಲಾಡ್
- ಇಮ್ರಾನ್ಖಾನ್ ಹತ್ಯೆಗೆ ಜೈಲಿನಲ್ಲೇ ಸಂಚು ನಡೆಸಲಾಗುತ್ತಿದೆ: ಅಲೀಮಾ ಖಾನ್