ಮಂಡ್ಯ.ಜು.16- ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಡಿ 2024-2025ನೇ ಶೈಕ್ಷಣಿಕ ವರ್ಷದಲ್ಲಿ ಸ್ನಾತಕ ಪದವಿ/ ಸ್ನಾತಕೋತ್ತರ ಪದವಿ ಮತ್ತು ಡಿಪ್ಲಮೊ ಪದವಿಯಲ್ಲಿ ವ್ಯಾಸಂಗ ಮಾಡಿ 2025ರಲ್ಲಿ ತೇರ್ಗಡೆಯಾಗುವ ಅಭ್ಯರ್ಥಿಗಳು ನೋಂದಾಯಿಸಲು ಸರ್ಕಾರವು ಅನುಮತಿ ನೀಡಿದ್ದು ಅರ್ಹ ಅಭ್ಯರ್ಥಿಗಳನ್ನು https://sevasindhugs.karnataka.gov.in
ಸೇವಾಸಿಂಧು ಪೋರ್ಟನಲ್ಲಿ ತಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಜುಲೈ 7ರಿಂದ ಆಗಸ್ಟ್ 7 ರವರೆಗೆ ವಿಶೇಷ ನೋಂದಣಿ ಅಭಿಯಾನ ಹಮಿಕೊಳ್ಳಲಾಗಿದೆ. ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ.
ಈ ಯೋಜನೆಯಡಿ ಪದವೀಧರರಿಗೆ ಪ್ರತಿ ತಿಂಗಳು ರೂ.3000/- ಹಾಗೂ ಡಿಪ್ಲಮೊ ಪದವಿಧರರಿಗೆ ರೂ.1500/- ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ.
ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿ ಹೆಸರನ್ನು ನೊಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ.
ನಂತರ ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ, ಸೇವಾ ಸಿಂಧು ಪೋರ್ಟಲ್ನಲ್ಲಿ ಮಾಹೆಯಾನ ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಉದ್ಯೋಗಿಯಲ್ಲವೆಂದು ಪ್ರತಿ ತಿಂಗಳ 25ನೇ ತಾರೀಖಿನೊಳಗಾಗಿ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿದ್ದು ಸ್ವಯಂ ಘೋಷಣೆ ಆಧಾರದ ಮೇಲೆ ಅಭ್ಯರ್ಥಿಗಳು ಮುಂದಿನ ಪಾವತಿಯನ್ನು ಸ್ವೀಕರಿಸಲಾಗುವುದು.
ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮ ಒನ್ ಮತ್ತು ಬಾಪೂಜಿ ಕೇಂದ್ರಗಳಲ್ಲಿ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್‌್ಡ ಮೊಬೈಲ್ ನಂಬರ್ನ್ನು ಹೊಂದಿರತಕ್ಕದ್ದು.
- ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (07-09-2025)
- ಬಿಎಂಟಿಸಿ ಬಸ್ ಚಾಲಕನೊಂದಿಗೆ ಕಾನ್ಸ್ಟೆಬಲ್ ಕಿರಿಕ್
- ಕೆ.ಆರ್.ಮಾರ್ಕೆಟ್ನಲ್ಲಿ ಹೈಟೆಕ್ ಪಾರ್ಕಿಂಗ್ ಲಾಟ್
- ಕಾರು ನಿಲ್ಲಿಸಿ ಮನವಿ ಸ್ವೀಕರಿಸಿದ ಸಿಎಂ
- ಕಾವೇರಿ ನದಿಯಲ್ಲಿ ಈಜಲು ಹೋದ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು ನೀರುಪಾಲು