ಡ್ರಗ್ಸ್ ಹಾವಳಿ ಹತ್ತಿಕ್ಕಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ : ಸಿಎಂ

ಬೆಂಗಳೂರು,ಸೆ.18- ನಗರ ಸೇರಿದಂತೆ ರಾಜ್ಯಾದ್ಯಂತ ಹೆಚ್ಚಾಗಿರುವ ಮಾದಕ ವಸ್ತುಗಳ ಹಾವಳಿಯನ್ನು ಹತ್ತಿಕ್ಕಲು ರಾಜ್ಯಮಟ್ಟದಲ್ಲಿ ವಿಶೇಷವಾದ ಕಾರ್ಯಪಡೆ ರಚನೆಯ ಜೊತೆಗೆ ಇನ್ನು ಮುಂದೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾದಕವಸ್ತುಗಳ ನಿಯಂತ್ರಣಕ್ಕೆ ಈಗಾಗಲೇ ಸರ್ಕಾರದ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ರಾಜ್ಯಮಟ್ಟದ ಉನ್ನತಾಧಿಕಾರಿ ಗಳ ಸಮಿತಿ ಹಾಗೂ ಜಿಲ್ಲಾಮಟ್ಟದಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ಸಕ್ರಿಯವಾಗಿವೆ. ಇವುಗಳ ಮೇಲೆ ತೀವ್ರವಾಗಿ ನಿಗಾ ವಹಿಸಲು ಗೃಹಸಚಿವರ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಟಾಸ್ಕ್ಫೋರ್ಸ್ ಅನ್ನು ರಚಿಸಲಾಗುವುದು. ಅದರಲ್ಲಿ ಆರೋಗ್ಯ, ಉನ್ನತ ಶಿಕ್ಷಣ, ಶಾಲಾ ಶಿಕ್ಷಣ, ಸಮಾಜ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವರು ಸದಸ್ಯರಾಗಿರುತ್ತಾರೆ ಎಂದರು. ರಾಜ್ಯ ಮತ್ತು ಜಿಲ್ಲಾಮಟ್ಟದ ಸಮಿತಿಗಳು ಪ್ರತಿ ತಿಂಗಳಿಗೊಮೆಯಾದರೂ ಪ್ರಗತಿಪರಿಶೀಲನಾ ಸಭೆ ನಡೆಸಬೇಕು ಎಂದು ಆದೇಶ ಹೊರಡಿಸಲಾಗುವುದು. ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಲಾಗುವುದು. ಮಾದಕ ವಸ್ತುಗಳ ಬಳಕೆ, ಮಾರಾಟ, … Continue reading ಡ್ರಗ್ಸ್ ಹಾವಳಿ ಹತ್ತಿಕ್ಕಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ : ಸಿಎಂ